May 5, 2024

MALNAD TV

HEART OF COFFEE CITY

ಜಿಲ್ಲಾಡಳಿತದಿಂದ ಹೆಣ್ಣು ಮಕ್ಕಳಿಗಾಗಿ ಕ್ರಿಕೆಟ್ ಪಂದ್ಯಾವಳಿ

1 min read

ಚಿಕ್ಕಮಗಳೂರು : ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಅಂಗವಾಗಿ ವಿವಿಧ ಇಲಾಖೆಗಳ ಸಂಯುಕ್ತಾ ಆಶ್ರಯದಲ್ಲಿ ತಾಲೂಕು ಮಟ್ಟದ ಹೆಣ್ಣು ಮಕ್ಕಳ ಟಿನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಯನ್ನು ಜಿಲ್ಲಾ ಆಟದ ಮೈದಾನದಲ್ಲಿ ಇಂದು ನಡೆಸಲಾಯಿತು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ, ಶಿಶು ಅಭಿವೃದ್ಧಿ ಯೋಜನೆ, ಯುವ ಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇವರುಗಳ ಸಂಯುಕ್ತಾ ಆಶ್ರಯದಲ್ಲಿ ತಾಲೂಕು ಮಟ್ಟದ ಹೆಣ್ಣು ಮಕ್ಕಳ ಟಿನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ ನಡೆಯಿತು. ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಪೂವಿತಾ ಪರಿಕಲ್ಪನೆಯಂತೆ ಹೆಣ್ಣು ಮಕ್ಕಳನ್ನು ಕ್ರೀಡಾ ಕ್ಷೇತ್ರದಲ್ಲಿ ಬೆಂಬಲಿಸುವ ಉದ್ದೇಶದಿಂದ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯಂದು ಹೆಣ್ಣು ಮಕ್ಕಳಿಗೋಸ್ಕರ ಕ್ರೀಡಾ ಪಂದ್ಯಾವಳಿಯನ್ನು ಆಯೋಜಿಸಿದೆ. ಇದು ಪ್ರಥಮ ವರ್ಷದ ಕ್ರೀಡಾ ಪಂದ್ಯಾವಳಿಯಾಗಿದೆ. ತಾಲೂಕು ಮಟ್ಟದ ಕ್ರಿಕೆಟ್ ಪಂದ್ಯಾವಳಿಯಲ್ಲಿ 5 ತಂಡಗಳು ಭಾಗವಹಿಸಿದ್ದು, ತಾಲೂಕು ಮಟ್ಟದ ಪಂದ್ಯಾವಳಿಯಲ್ಲಿ ಬಸವನಹಳ್ಳಿ ಬಾಲಕೀಯರ ಫ್ರೌಡ ಶಾಲೆಯ ತಂಡವನ್ನು ಸೋಲಿಸಿ ರತ್ನಗಿರಿ ಅಸೋಸಿಯೇಟ್ಸ್ ತಂಡವು ಅಂತಿಮ ಸುತ್ತನ್ನು ಪ್ರವೇಶಿಸಿದ್ದು, ಭಾನುವಾರದಂದು ಜಿಲ್ಲಾ ಮಟ್ಟದ ಕಿಕೆಟ್ ಪಂದ್ಯಾವಳಿ ನಡೆಯಲಿದೆ.

 

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!