April 29, 2024

MALNAD TV

HEART OF COFFEE CITY

ಜಿಲ್ಲೆಯಲ್ಲಿ ಸರ್ಕಾರಿ ನೌಕರರಿಂದ ಉತ್ತಮ ಕಾರ್ಯ_ಜಿಲ್ಲಾಧಿಕಾರಿ

1 min read

 

ಚಿಕ್ಕಮಗಳೂರು: ಇವತ್ತಿನ ದಿನಗಳಲ್ಲಿ ಸರ್ಕಾರಿ ನೌಕರರು ಕೆಲವು ಸಂದರ್ಭಗದಲ್ಲಿ ರಜೆಯನ್ನು ಪಡೆಯದೇ ಒತ್ತಡದ ನಡುವೆಯೂ ಕೆಲಸವನ್ನು ನಿರ್ವಹಿಸಬೇಕಾಗಿದೆ. ಈ ನಡುವೆಯೂ ಜಿಲ್ಲೆಯಲ್ಲಿ ಸರ್ಕಾರಿ ನೌಕರರು ಹಲವು ಕಠಿಣ ಸಂದರ್ಭದಲ್ಲಿ ಉತ್ತಮವಾಗಿ ಕೆಲಸ ನಿರ್ವಹಿಸಿದ್ದಾರೆ ಎಂದು ಜಿಲ್ಲಾಧಿಕಾರಿ ಕೆ.ಎನ್ ರಮೇಶ್ ಹೇಳಿದರು.ಜಿಲ್ಲಾಡಳಿತ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆಯ ಸಹಯೋಗದಲ್ಲಿ ಗುರುವಾರ ನಗರದ ಕುವೆಂಪು ಕಲಾಮಂದಿರದಲ್ಲಿ ನಡೆದ ರಾಜ್ಯ ಸರ್ಕಾರಿ ನೌಕರರ ದಿನಾಚರಣೆ ಮತ್ತು ಜಿಲ್ಲಾ ಸರ್ವೋತ್ತಮ ನಾಗರೀಕ ಸೇವಾ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ನಾಗರೀಕ ಸೇವೆಗಳು ಉಕ್ಕಿನ ಕವಚದ ಮಾದರಿಯಲ್ಲಿ ರೂಪುಗೊಂಡಿದ್ದು, ಸರ್ಕಾರದ ಆಡಳಿತ ವ್ಯವಸ್ಥೆಯನ್ನು ಭದ್ರಗೊಳಿಸುವಲ್ಲಿ ಮುಖ್ಯ ಪಾತ್ರ ವಹಿಸುತ್ತಿವೆ. ಆದ್ದರಿಂದ ಸರ್ಕಾರಿ ನೌಕರರ ದಿನಾಚರಣೆ ಸಂಧರ್ಭದಲ್ಲಿ ಸರ್ಕಾರಿ ನೌಕರರ ಜವಬ್ದಾರಿ, ಕರ್ತವ್ಯಗಳನ್ನು ನೆನಪಿಸಿಕೊಳ್ಳುತ್ತಾ, ಅವರ ಒಳ್ಳೆ ಕಾರ್ಯಗಳನ್ನು ಸ್ಮರಿಸಿಕೊಳ್ಳಬೇಕು ಎಂದರು.ಜಿಲ್ಲೆಯಲ್ಲಿ ಸರ್ಕಾರಿ ನೌಕರರು ಹಲವಾರು ಮೈಲಿಗಲ್ಲುಗಳನ್ನು ಸಾಧಿಸಿದ್ದು, ಕೋವಿಡ್ ಸಮಯದಲ್ಲಿ ಶೇಕಡಾ 99ರಷ್ಟು ರೋಗಿಗಳು ಕೋವಿಡ್ ನಿಂದ ಚೇತರಿಸಿಕೊಂಡಿದ್ದಾರೆ ಜಲಜೀವನ್ ಮೀಷನ್ ಶೇಕಡಾ 220 ಭೌತಿಕ ಗುರಿಯನ್ನು ಸಾಧಿಸಿದೆ. ಮುಖ್ಯವಾಗಿ ರಾಜ್ಯದಲ್ಲಿ ಅತಿ ಕಡಿಮೆ ಸಾರ್ವಜನಿಕ ಕುಂದು ಕೊರತೆಗಳ ದೂರನ್ನು ಹೊಂದಿರುವ ಜಿಲ್ಲೆ ನಮ್ಮದಾಗಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ, ಸರ್ಕಾರಿ ನೌಕರರು ಸಾರ್ವಜನಿಕ ವಲಯ ಹಾಗೂ ರಾಜಕಾರಣಿಗಳಿಂದ ಒತ್ತಡದ ನಡುವೆಯು ಉತ್ತಮ ಕಾರ್ಯಗಳನ್ನು ನಿರ್ವಹಿಸುತ್ತಾ, ಸಪ್ತ ಸಾಗರವನ್ನು ದಾಟಿ ತಮ್ಮ ಗುರಿಯನ್ನು ಮುಟ್ಟಿ, ಸರ್ವೋತ್ತಮ ಪ್ರಶಸ್ತಿಗೆ ಭಾಜನರಾಗಿದ್ದಾರೆ ಎಂದರು.
ಸರ್ಕಾರಿ ನೌಕರರಿಗೆ ದುಡಿಯುವ ಶಕ್ತಿ ಕುಂದಿ, ನಿವೃತ್ತಿಯಾದ ನಂತರವು ಅವರು ಆರ್ಥಿಕವಾಗಿ ಸಧೃಡರಾಗಿ ರೂಪುಗೊಳ್ಳುವಂತಹ ವ್ಯವಸ್ಥೆ ನಿರ್ಮಾಣವಾಗಬೇಕು. ವೇತನ ಪರಿಷ್ಕರಣೆ ಹಾಗೂ ಪಿಂಚಣಿ ಸೌಲಭ್ಯದಂತಹ ಸಂವಿಧಾನ ಬದ್ಧವಾದ ಹಕ್ಕನ್ನು ಪಡೆಯಲು ಸರ್ಕಾರಿ ನೌಕರರು ಬೀದಿಗೆ ಇಳಿದು ಹೋರಾಟ ಮಾಡುವಂತಹ ಪರಿಸ್ಥಿತಿ ಸರ್ಕಾರಿ ಬಂದಿರುವುದು ದುರದೃಷ್ಟಕರ ಎಂದರು.

ನಗರಸಭೆ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್ ಮಾತನಾಡಿ, ಸರ್ಕಾರಿ ನೌಕರರು ಕೇವಲ ಸಂಬಳದ ನೆಪ ಮಾತ್ರಕ್ಕೆ ಕರ್ತವ್ಯ ನಿರ್ವಹಿಸದೇ, ಸರ್ಕಾರಿ ಕೆಲಸವನ್ನು ದೇವರ ಕೆಲಸದ ರೂಪದಲ್ಲಿ ಪರಿಗಣಿಸಿ ದೇಶವನ್ನು ಉತ್ತಮ ಪಥದಲ್ಲಿ ಕೊಂಡೊಯ್ಯುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಬೇಕು ಎಂದು ತಿಳಿಸಿದರು.

ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಎಂ.ಹೆಚ್.ಅಕ್ಷಯ್ ಮಾತನಾಡಿ, ಸರ್ಕಾರಿ ನೌಕರರು ಕಾನೂನುಗಳನ್ನು ಅನುಷ್ಠಾನಗೊಳಿಸುವಾಗ ತೆಗೆದುಕೊಳ್ಳುವ ನಿರ್ಧಾರದ ಮೇಲೆ ಸಮಾಜದ ವ್ಯವಸ್ಥೆ ರೂಪುಗೊಳ್ಳುತ್ತದೆ. ಆದ್ದರಿಂದ ನಾಗರೀಕ ಸೇವೆಯಲ್ಲಿ ತೊಡಗಿರುವವರು ಕೇವಲ ಜನಹಿತ ದೃಷ್ಟಿಯಲ್ಲಿ ಮಾತ್ರ ಕಾರ್ಯ ನಿರ್ವಹಿಸಬೇಕು ಎಂದರು.
ಅಸಾಧ್ಯವಾದಂತಹ ಪರಿಸ್ಥಿತಿಯಲ್ಲಿ ಒತ್ತಡದ ನಡುವೆಯು ಸರ್ಕಾರಿ ನೌಕರರು ಕಾರ್ಯನಿರ್ವಹಿಸುತ್ತಾರೆ. ಆದರೆ ಸರ್ಕಾರಿ ನೌಕರರು ಒಂದು ವ್ಯಾಪ್ತಿಗೆ ಒಳಪಟ್ಟು ಪ್ರತ್ಯೇಕ ಚೌಕಟ್ಟಿನಲ್ಲಿ ಕಾರ್ಯ ನಿರ್ವಹಿಸದೇ, ಸಮಾಜದ ಒಳಿತಿಗಾಗಿ ನಿಸ್ವಾರ್ಥ ಸೇವೆಯಲ್ಲಿ ತೊಡಗಬೇಕು ಎಂದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!