May 18, 2024

MALNAD TV

HEART OF COFFEE CITY

ಚಾರ್ಮಾಡಿ ಘಾಡಿಯಲ್ಲಿ ಸರ್ಕಾರಿ ಬಸ್-ಕಾರು ಡಿಕ್ಕಿ, ಗಂಟೆಗಟ್ಟಲೇ ಟ್ರಾಫಿಕ್ ಜಾಮ್

1 min read

 

ಚಿಕ್ಕಮಗಳೂರು. ಸರ್ಕಾರಿ ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಗಂಟೆಗಟ್ಟಲೇ ಟ್ರಾಫಿಕ್ ಜಾಮ್ ಆದ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯ ಬಿದಿರುತಳ ಎಂಬ ಗ್ರಾಮದಲ್ಲಿ ನಡೆದಿದೆ. ಅದೃಷ್ಟವಶಾತ್ ಯಾವುದೇ ಜೀವಹಾನಿ ಸಂಭವಿಸಿಲ್ಲ. ಕಾರಿನಲ್ಲಿ ಇದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಅಪಾಯದಿಂದ ಪಾರಾಗಿದ್ದಾರೆ. ಕಾರು ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನಿಂದ ಧರ್ಮಸ್ಥಳಕ್ಕೆ ಹೋಗುತ್ತಿತ್ತು. ಸರ್ಕಾರಿ ಬಸ್ಸು ಧರ್ಮಸ್ಥಳದಿಂದ ಕಡೂರಿಗೆ ಬರುತ್ತಿತ್ತು.

 

ಗಾಯಾಳುಗಳಿಗೆ ಬಣಕಲ್ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಮೂಡಿಗೆರೆ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ. ಅಪಘಾತದಿಂದ ಚಾರ್ಮಾಡಿ ಘಾಟಿಯಲ್ಲಿ ಸುಮಾರು ಒಂದು ಗಂಟೆಗೂ ಹೆಚ್ಚು ಹೊತ್ತು ಟ್ರಾಫಿಕ್ ಜಾಮ್ ಆಗಿತ್ತು. ಘಾಟಿ ರಸ್ತೆ, ಅಪಾಯಕಾರಿ ತಿರುವುಗಳು, ಹೆಚ್ಚಿನ ವಾಹನ ದಟ್ಟಣೆ ಹಾಗಾಗಿ, ಸುಮಾರು ಎರಡು ಕಿ.ಮೀ. ಅಧಿಕ ಗಂಟೆಗಟ್ಟಲೇ ಟ್ರಾಫಿಜ್ ಜಾಮ್ ಆಗಿತ್ತು. ಸ್ಥಳಕ್ಕೆ ಭೇಟಿ ನೀಡಿದ ಬಣಕಲ್ ಠಾಣಾ ಪಿ.ಎಸ್.ಐ. ಗಾಯತ್ರಿ ಟ್ರಾಫಿಕ್ ಕ್ಲೀಯರ್ ಮಾಡಿ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಸಿದ್ದಾರೆ. ಚಾರ್ಮಾಡಿ ಘಾಟಿಯಲ್ಲಿ ಮಳೆಯಿಂದ ಚಾಲಕನ ನಿಯಂತ್ರಣ ತಪ್ಪಿ ಈ ಅಪಘಾತ ಸಂಭವಿಸಿರಬಹುದು ಎಂದು ಸ್ಥಳಿಯರು ಮಾಹಿತಿ ನೀಡಿದ್ದಾರೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!