May 2, 2024

MALNAD TV

HEART OF COFFEE CITY

ಕೆಪಿಸಿಸಿ ವಕ್ತಾರರಾಗಿ ಎಚ್.ಎಚ್.ದೇವರಾಜ್ ನೇಮಕ

1 min read

 

ಚಿಕ್ಕಮಗಳೂರು: ಕಾಂಗ್ರೆಸ್ ಮುಖಂಡ ಎಚ್.ಎಚ್.ದೇವರಾಜ್ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ವಕ್ತಾರರಾಗಿ ನೇಮಕಗೊಂಡಿದ್ದಾರೆ.

ಜೆಡಿಎಸ್ ರಾಜ್ಯ ಉಪಾಧ್ಯಕ್ಷರಾಗಿ, ಪ್ರಧಾನ ಕಾರ್ಯದರ್ಶಿಯಾಗಿ ರಾಜಕೀಯ ಅನುಭವ ಹೊಂದಿದ್ದ ಅವರು ವಿಧಾನ ಪರಿಷತ್ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಸೇರುವ ಮೂಲಕ ಚುನಾವಣೆಯಲ್ಲಿ ಸಕ್ರಿಯವಾಗಿ ಕೆಲಸ ಮಾಡಿದ್ದರು. ಜಿಲ್ಲಾ ಪಂಚಾಯಿತಿ ಸದಸ್ಯರಾಗಿಯೂ ಕೆಲಸ ಮಾಡಿರುವ ಅವರು ವಿವಿಧ ಸಂಘ ಸಂಸ್ಥೆಗಳ ಒಡನಾಡಿಯಾಗಿದ್ದಾರೆ.
ಕೆಪಿಸಿಸಿ ಅಧ್ಯಕ್ಷರ ಅನುಮೋದನೆಯೊಂದಿಗೆ ಎಚ್.ಎಚ್.ದೇವರಾಜ್ ಅವರನ್ನು ವಕ್ತಾರರನ್ನಾಗಿ ನೇಮಕ ಮಾಡಿರುವುದಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ತಿಳಿಸಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಹಿರೇಮಗಳೂರು ಪುಟ್ಟಸ್ವಾಮಿ ಮಾಹಿತಿ ನೀಡಿದ್ದಾರೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!