May 12, 2024

MALNAD TV

HEART OF COFFEE CITY

ರಾಜ್ಯಾದ್ಯಂತ ಮುಂದಿನ 4 ದಿನಗಳ ಕಾಲ ಭಾರೀ ಮಳೆ; ಹವಾಮಾನ ಇಲಾಖೆಯ ಎಚ್ಚರಿಕೆ..!

1 min read

ಚಿಕ್ಕಮಗಳೂರು: ರಾಜ್ಯದಲ್ಲಿ ಜ.3ರಿಂದ ನಾಲ್ಕು ದಿನ ಭರ್ಜರಿ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿ ರಾಜ್ಯದಲ್ಲಿ ವರುಣ ಅಬ್ಬರಿಸಲಿದ್ದಾನೆ. ಹಲವು ಜಿಲ್ಲೆಗಳಲ್ಲಿ ಭರ್ಜರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಹಿಂಗಾರು ಮಳೆ ಇನ್ನೇನು ಕೆಲವೇ ದಿನಗಳಲ್ಲಿ ಮುಕ್ತಾಯವಾಗಲಿದೆಯಾದ್ರೂ.ಇದೇ ಭಾರೀ ಮಳೆ ಬರಬಹುದು ಎಂದು ಸೂಚನೆ ನೀಡಿದೆ ಹವಾಮಾನ ಇಲಾಖೆ. ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಬೆಂಗಳೂರಿನಲ್ಲೂ ನಾಲ್ಕು ದಿನಗಳ ಕಾಲ ಮಳೆ ಇರಲಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ವಿಜಯಪುರ, ಬಳ್ಳಾರಿ, ಬೆಂ.ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರಮರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆ ಸಾಧ್ಯತೆ ಇದೆ.

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಎಫೆಕ್ಟ್, ದಕ್ಷಿಣ ಕನ್ನಡ ಸೇರಿ ಕರಾವಳಿಯಲ್ಲಿ ಉತ್ತಮ ಮಳೆಯಾಗಲಿದೆ. ದಕ್ಷಿಣ ಕನ್ನಡ ಅಲ್ಲದೆ , ಕೊಡಗು, ಚಿಕ್ಕಮಗಳೂರು ಮತ್ತು ಚಾಮರಾಜನಗರ, ಶಿವಮೊಗ್ಗ, ಮೈಸೂರು ಮತ್ತು ಮಂಡ್ಯ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ಉಳಿದ ಭಾಗಗಳಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಮುಂದಿನ 5 ದಿನಗಳಲ್ಲಿ ಕರ್ನಾಟಕ ರಾಜ್ಯದ ಹಲವೆಡೆ ಲಘು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!