May 2, 2024

MALNAD TV

HEART OF COFFEE CITY

ಮಲೆನಾಡು ಭಾಗದಲ್ಲಿ ಮಳೆ ಅಬ್ಬರ, ಕಳಸ ತಾಲೂಕಿನ ಹೆಬ್ಬಾಳೆ ಸೇತುವೆ ಮುಳುಗಡೆ

1 min read

 

 

ಚಿಕ್ಕಮಗಳೂರು : ಕಾಫಿನಾಡಿನ ಮಲೆನಾಡು ಭಾಗದಲ್ಲಿ ಮಳೆ ಅಬ್ಬರ ಮುಂದುವರೆದಿದ್ದು ಜಿಲ್ಲೆಯ ಕಳಸ ತಾಲೂಕಿನ ಹೆಬ್ಬಾಳೆ ಸೇತುವೆ ಮುಳುಗಡೆಯಾಗು ಕಳಸ-ಹೊರನಾಡು ಸಂಪರ್ಕ ಬಂದ್ ಯಾಗಿದೆ. ಇನ್ನು ಮಳೆಯಿಂದ ಹತ್ತಾರು ಗ್ರಾಮ ಗಳು ಸಂಪರ್ಕ ಕಳೆದುಕೊಂಡಿವೆ. ಅನ್ಯ ಮಾರ್ಗವಿದ್ದರೂ 8-10 ಕಿ.ಮೀ. ಸುತ್ತಿಕೊಂಡು ಈ ಗ್ರಾಮದ ಜನರು ಬರಬೇಕಾದ ಪರಿಸ್ಥಿತಿ ನಿರ್ಮಾಣ ವಾಗಿದೆ. ಕುದುರೆಮುಖ ಘಟ್ಟ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ಭದ್ರಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಪರಿಣಾಮ ಹೆಬ್ಬಾಳೆ ಸೇತುವೆ ಮುಳುಗಡೆ ಯಾಗಿದೆ. ಇನ್ನು ಜಿಲ್ಲೆಯಲ್ಲಿರುವ ತುಂಗಾ, ಭದ್ರಾ, ಹೇಮಾವತಿ ನದಿಗಳ ಒಳಹರಿವಿನಲ್ಲಿ ಭಾರೀ ಹೆಚ್ಚಳವಾಗಿದೆ. ಭಾರೀ ಗಾಳಿ-ಮಳೆಯೊಂದಿಗೆ ಸುರಿಯುತ್ತಿರು ಸುರಿಯುತ್ತಿರುವ ಮಳೆಗೆ ಮಲೆನಾಡಿಗರು ಕಂಗಾಲಾಗಿದ್ದಾರೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!