April 29, 2024

MALNAD TV

HEART OF COFFEE CITY

ಹನಿಟ್ರ್ಯಾಪ್ ಗೂ ಬೀಳದ ಒಂಟಿ‌ ಸಲಗನಿಂದ ಹೈರಾಣಾದ ಅರಣ್ಯಾಧಿಕಾರಿಗಳು

1 min read

ಹೆಣ್ಣಿನ ಮೋಹಕ್ಕೂ ಬೀಳದ ಪುಂಡ ಒಂಟಿ ಸಲಗವೊಂದು ಅರಣ್ಯಾಧಿಕಾರಿಗಳು ಹೈರಾಣುಗುವಂತೆ ಹಿಂಸೆ ಕೊಡುತ್ತಿದ್ದು ಒಂಟಿ ಸಲಗವನ್ನ ಸೆರೆ ಹಿಡಿಯಲು ಅಧಿಕಾರಿಗಳು ಹರಸಾಹಸ ಪಡುತ್ತಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಜಯಪುರ ಸಮೀಪದ ಮೇಗುಂದಾ ಹೋಬಳಿಯ ಸುತ್ತಮುತ್ತ ಕಳೆದ ನಾಲ್ಕೈದು ತಿಂಗಳಿಂದ ಪುಂಡಾನೆ ಕಾಟ ಕೊಡುತ್ತಿತ್ತು. ಇಡೀ ರಾತ್ರಿ ದಾಂಧಲೆ ಮಾಡಿ ಹಗಲಲ್ಲಿ ಸುತ್ತಲೂ ಪ್ರಪಾತವಿರುವ ಎತ್ತರದ ಜಾಗದಲ್ಲಿ ನಿಲ್ಲುತ್ತಿತ್ತು. ಇದರಿಂದ ಅಧಿಕಾರಿಗಳು ಹಾಗೂ ಸ್ಥಳಿಯರು ಹೈರಾಣಾಗಿದ್ದರು. ಈ ಪುಂಡಾನೆಯನ್ನ ಹಿಡಿಯಲು ಶಿವಮೊಗ್ಗದಿಂದ ಸಾಕಾನೆಗಳನ್ನ ಕರೆಸಿದ್ದರು. ಮೂರು ದಿನದಿಂದ ಕಾರ್ಯಾಚರಣೆ ನಡೆಸಿದರು ಒಂಟಿ ಸಲಗ ಎಲ್ಲರಿಗೂ ಚಳ್ಳೆಹಣ್ಣು ತಿನ್ನಿಸುತ್ತಿದೆ. 11 ಮಾವುತರು, ಐದು ಸಾಕಾನೆಗಳು, ಅಧಿಕಾರಿಗಳು ಸೇರಿ 25ಕ್ಕೂ ಹೆಚ್ಚು ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿದರು ಆನೆ ಸೆರೆಯಾಗಿಲ್ಲ. ಈಗಲೂ ಹಗಲಲ್ಲಿ ದಾಂಧಲೆ ನಡೆಸುತ್ತಿರೋ ಒಂಟಿ ಸಲಗ ಮೇಗುಂದ ಹೋಬಳಿಯ ಗುಡ್ಡದ ಎತ್ತರಕ್ಕೆ ಹೋಗಿ ನಿಲ್ಲುತ್ತಿದೆ. ಸುತ್ತಲೂ ಪ್ರಪಾತವಿದ್ದು ಬೆದರಿಸಿದರೆ ಬಿದ್ದು ಪ್ರಾಣ ಕಳೆದುಕೊಳ್ಳಬಹುದು ಎಂದು ಅಧಿಕಾರಿಗಳು ಆನೆಯನ್ನ ಬೆದರಿಸಲು ಮುಂದಾಗದೆ ಸೆರೆ ಹಿಡಿಯಲು ಮುಂದಾಗಿದ್ದಾರೆ.

 

ಆದರೆ ಸಾಧ್ಯವಾಗುತ್ತಿಲ್ಲ. ಅಧಿಕಾರಿಗಳು ಸಾಕು ಹೆಣ್ಣಾನೆ ಭಾನುಮತಿ ಮೂಲಕ ಒಂಟಿ ಸಲಗಕ್ಕೆ ಹನಿಟ್ರ್ಯಾಪ್ ಮೂಲಕ ಸೆರೆ ಹಿಡಿಯಲು ಮುಂದಾದರೂ ಸಾಧ್ಯವಾಗುತ್ತಿಲ್ಲ. ಅಧಿಕಾರಿಗಳು ಮೂರು ದಿನದಿಂದ ಉಪಯೋಗವಿಲ್ಲದ ಕಾರ್ಯಚರಣೆ ನಡೆಸುತ್ತಿದ್ದಾರೆ. ಅಧಿಕಾರಿಗಳು ಎಷ್ಟೆ ಪ್ರಯತ್ನಪಟ್ಟರೂ ಒಂಟಿ ಸಲಗವನ್ನ ಸೆರೆ ಹಿಡಿಯಲು ಸಾಧ್ಯವಾಗುತ್ತಿಲ್ಲ. ಹಾವೇರಿಯಲ್ಲಿ ಸೆರೆ ಹಿಡಿದಿದ್ದ ಈ ಪುಂಡಾನೆಗೆ ಹಾವೇರಿ ಟಸ್ಕರ್ ಕೊರಳಿಗೆ ರೇಡಿಯೋ ಕಾಲರ್ ಇದ್ದು ಅದು ಇರುವ ನಿಖರ ಜಾಗ ತಿಳಿದಿದ್ದರೂ ಅಧಿಕಾರಿಗಳೂ ಏನೂ ಮಾಡದ ಸ್ಥಿತಿಯಲ್ಲಿದ್ದು ಪುಂಡಾನೆ ಮುಂದೆ ಅಸಹಾಯಕರಾಗಿದ್ದಾರೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!