April 29, 2024

MALNAD TV

HEART OF COFFEE CITY

ಹಿಟ್ ಅಂಡ್ ರನ್ ; ಬೈಕ್ ಸವಾರ ಸ್ಥಳದಲ್ಲೇ ಸಾವು

1 min read

ಚಿಕ್ಕಮಗಳೂರು : ಬೈಕ್ ಗೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತರೀಕೆರೆ ತಾಲೂಕು ಕೆ.ಚಟ್ನಹಳ್ಳಿ ಗೇಟ್ ಬಳಿ ನಡೆದಿದೆ. ಮಂಜುನಾಥ್ (22) ಎಂಬ ಬೈಕ್ ಸವಾರ ಮೃತ ದುರ್ದೈವಿ. ಮಂಜುನಾಥ್ ಎಂಬುವವರು ತರೀಕೆರೆ ಪಟ್ಟಣದ ನಿವಾಸಿ ಎಂದು ತಿಳಿದು ಬಂದಿದೆ. ಹೋಗುತ್ತಿದ್ದ ಬೈಕ್ ಗೆ ಟಿಪ್ಪರ್ ಲಾರಿಯು ಹಿಂದೆ ಇಂದ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸವಾರ ಮಂಜುನಾಥ್ ರಸ್ತೆಗೆ ಬಿದಿದ್ದು, ಬಿದ್ದ ಪರಿಣಾಮ ಅಲ್ಲೇ ಪ್ರಾಣ ಬಿಟ್ಟಿದ್ದಾರೆ. ಹಿಟ್ ಅಂಡ್ ರನ್ ಮಾಡಿ ಟಿಪ್ಪರ್ ಲಾರಿ ಚಾಲಕ ಪರಾರಿಯಾಗಿದ್ದು, ಚಾಲಕನ ಮೇಲೆ ಕೇಸು ದಾಖಲಾಗಿದೆ. ಆತನಿಗಾಗಿ ಪೊಲೀಸರು ಹುಡುಕುತ್ತಿದ್ದಾರೆ. ಈ ಸಂಬಂಧ ಬೀರೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!