May 16, 2024

MALNAD TV

HEART OF COFFEE CITY

ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿಕೆ: ಕರ್ನಾಟಕ ಪೊಲೀಸ್ ಮಹಾ ಸಂಘ ತೀವ್ರ ಖಂಡನೆ

1 min read

ಚಿಕ್ಕಮಗಳೂರು: ವಕೀಲರ ವಿರುದ್ಧ ಪ್ರತಿಭಟನೆ ನಡೆಸಿದ ಪೊಲೀಸರ ಮೇಲೆ ಕ್ರಮ ಕೈಗೊಳ್ಳುತ್ತೇವೆ ಎಂದಿರುವ ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿಕೆಗೆ ಕರ್ನಾಟಕ ಪೊಲೀಸ್ ಮಹಾ ಸಂಘ ತೀವ್ರ ಖಂಡನೆ ವ್ಯಕ್ತಪಡಿಸಿದ್ದು, ಪರಮೇಶ್ವರ್ ವಿರುದ್ಧ ರಾಜ್ಯಾದ್ಯಂತ ಹೋರಾಟ ನಡೆಸುವುದಾಗಿ ಪೊಲೀಸ್ ಮಹಾ ಸಂಘದ ಜಿಲ್ಲಾಧ್ಯಕ್ಷ ಡಾ. ರೈತ ಮನೋಜ್ ಎಚ್ಚರಿಸಿದ್ದಾರೆ.

ನಗರದ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ಪೊಲೀಸರಿಗೆ ಭದ್ರತೆಯೇ ಇಲ್ಲದಂತಾಗಿದ್ದು ಕೂಡಲೇ ಸರ್ಕಾರ ಪೊಲೀಸ್ ಅಭಿವೃದ್ಧಿ ನಿಗಮ ಸ್ಥಾಪಿಸಬೇಕು ಎಂದು ಒತ್ತಾಯಿಸಿದರು. ಪೊಲೀಸರ ಮೇಲೆ ದೌರ್ಜನ್ಯ ನಡೆಯುತ್ತಲೇ ಇದ್ದರೂ ಅದನ್ನು ಕೇಳುವುದು ಸಹಾ ತಪ್ಪಾಗಿದೆ ಎಂದು ಡಾ. ರೈತ ಮನೋಜ್ ಹೇಳಿದ್ದಾರೆ. ಇದೇ ವೇಳೆ ವಕೀಲರ ವಿರುದ್ಧ ಪ್ರತಿಭಟನೆ ನಡೆಸಿದ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದಿರುವ ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿಕೆ ಖಂಡಿಸಿದ್ದು ಅವರ ವಿರುದ್ಧ ರಾಜ್ಯಾದ್ಯಂತ ಹೋರಾಟ ನಡೆಸುವುದಾಗಿ ಮನೋಜ್ ರೈತ ಎಚ್ಚರಿಸಿದ್ದಾರೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!