May 15, 2024

MALNAD TV

HEART OF COFFEE CITY

ಕಾನ್ಸಿರಾಮ್ ಜನ್ಮ ದಿನಾಚರಣೆ ಅಂಗವಾಗಿ ಶೃಂಗೇರಿಯಲ್ಲಿ ಬೃಹತ್ ಸಮಾವೇಶ

1 min read

ಶೃಂಗೇರಿ : ಬಾಬಾಸಾಹೇಬ ಕಾನ್ಸಿರಾಮ್ ಜನ್ಮದಿನಾಚರಣೆ ಹಾಗೂ ಬಿ.ಎಸ್.ಪಿ. ಕಾರ್ಯಕರ್ತರ ಸಮಾವೇಶದ ಅಂಗವಾಗಿ ಮೆರವಣಿಗೆ, ಸಭಾ ಕಾರ್ಯಕ್ರಮ ಹಾಗೂ ಪಕ್ಷಕ್ಕಾಗಿ ನಿಷ್ಠೆಯಿಂದ ದುಡಿದ ಎಂ.ಕೆ ಗೋಪಾಲ್ರವರಿಗೆ ಸನ್ಮಾನ ಕಾರ್ಯಕ್ರಮವನ್ನು ಇತ್ತಿಚೆಗೆ ಶೃಂಗೇರಿ ಪಟ್ಟಣದಲ್ಲಿ ಆಯೋಜಿಸಲಾಗಿತ್ತು. ಕಾರ್ಯಕ್ರಮದ ಅಂಗವಾಗಿ ಶೃಂಗೇರಿಯ ಸ್ವಾಗತ ದ್ವಾರದಿಂದ ಗೌರಿ ಶಂಕರ ಸಭಾಂಗಣದವರೆಗೆ ಅದ್ದೂರಿಯಾದ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗಿತ್ತು. ಮೆರವಣಿಗೆಯಲ್ಲಿ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಹಾಗೂ ಬಾಬಾಸಾಹೇಬ ಕಾನ್ಸಿರಾಮ್ರವರ ಭಾವಚಿತ್ರ ಮೆರವಣಿಗೆಯನ್ನು ಮಾಡಲಾಯಿತು. ನಾಸಿಕ್ ಡೋಲು ಮೆರವಣಿಗೆಯ ಸೊಬಗನ್ನು ಇನ್ನಷ್ಟು ಹೆಚ್ಚಿಸಿತು. ಗೌರಿ ಶಂಕರ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಸಭಾ ಕಾರ್ಯಕ್ರಮದಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ರವರ ಹಾಗೂ ಬಾಬಾಸಾಹೇಬ ಕಾನ್ಸಿರಾಮ್ ಅವರ ಭಾವಚಿತ್ರಕ್ಕೆ ಗೌರವ ಪುಷ್ಪ ಸಲ್ಲಿಸಲಾಯಿತು. ಸಭೆಯನ್ನುದ್ದೇಶಿಸಿ ಮಾತನಾಡಿದ ಬಿ.ಎಸ್.ಪಿ. ಪಕ್ಷದ ರಾಜ್ಯಾಧ್ಯಕ್ಷ ಎಂ ಕೃಷ್ಣಮೂರ್ತಿ ರಾಜ್ಯದಲ್ಲಿ ಮತ್ತು ದೇಶದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ರಾಜಕಾರಣಿಗಳ ಹಗರಣಗಳು ಅಜಾಗರುಕತೆ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಸಂಬಂಧಿಸಿದಂತೆ ವಿಧಾನಸೌಧ ಕಲಾಪ ಹೇಗೆ ನಡೆಯುತ್ತಿದೆ. ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷ ರಾಜ್ಯದ ಜನರಿಗೆ ಯಾವ ರೀತಿ ಮೋಸ ಮಾಡುತ್ತಿದ್ದಾರೆ. ಬಿಜೆಪಿ ಮತ್ತು ಕಾಂಗ್ರೆಸ್ ಒಂದೇ ನಾಣ್ಯದ ಎರಡು ಮುಖಗಳು ಎಂಬುದು ಗಮನಿಸಬೇಕು ಹಾಗೂ ಶೃಂಗೇರಿ ಕ್ಷೇತ್ರದ ಮತದಾರರಲ್ಲಿ ಜಾಗೃತಿ ಮೂಡಿಸಬೇಕು ಪ್ರಧಾನಿ ನರೇಂದ್ರ ಮೋದಿಯವರು 2014 ರಲ್ಲಿ ಕೊಟ್ಟಿದ್ದಂತಹ ಭರವಸೆಗಳು ಇದುವರೆಗೂ ಈಡೇರಿಸಿಲ್ಲ. ಮುಂದಿನ ದಿನಗಳಲ್ಲಿ ನಡೆಯಲಿರುವ ಜಿಲ್ಲಾ ಪಂಚಾಯತಿ ಮತ್ತು ತಾಲ್ಲೂಕು ಪಂಚಾಯತಿಗಳಲ್ಲಿ ಈ ಬಾರಿ ಬಿ.ಎಸ್.ಪಿ. ಪಕ್ಷದಿಂದ ಎಲ್ಲಾ ಕ್ಷೇತ್ರಗಳಲ್ಲೂ ಸ್ಪರ್ಧಿಸಲು ಅಭ್ಯರ್ಥಿಗಳನ್ನು ಕಾರ್ಯಕರ್ತರೇ ಆಯ್ಕೆ ಮಾಡಬೇಕೆಂದು ತಿಳಿಸಿದರು. ಇದೇ ವೇಳೆ ಸರಕಾರಿ ಹುದ್ದೆಯನ್ನು ತ್ಯಜಿಸಿ, ಬಿ.ಎಸ್.ಪಿ. ಸಂಯೋಜಕರಾಗಿ ದಲಿತ ಪರ ಹೋರಾಟಕ್ಕೆ ನಿಂತು, ಪ್ರಾಮಾಣಿಕವಾಗಿ ಪಕ್ಷಕ್ಕೆ ದುಡಿದಂತಹ ಇವರ ತ್ಯಾಗ ಮತ್ತು ನಿಷ್ಠಾವಂತ ಸೇವೆಯನ್ನು ಪರಿಗಣಿಸಿ ಎಂ.ಕೆ ಗೋಪಾಲ್ ದಂಪತಿಯರನ್ನು ಸನ್ಮಾನಿಸಲಾಯಿತು. ಅಲ್ಲದೆ ಕೆಲವು ಸ್ಥಳೀಯ ಸಂಘಟನೆಗಳು, ಸವಿತಾ ಸಮಾಜದವರು, ವಿದ್ಯಾರ್ಥಿಗಳು ಮತ್ತು ಯುವಕರು ದಂಪತಿಗಳಿಗೆ ಅಭಿನಂದನೆ ಸಲ್ಲಿಸಿ ಅವರಿಂದ ಆಶೀರ್ವಾದ ಪಡೆದರು ಕಾರ್ಯಕ್ರಮವನ್ನು ಆಯೋಜನೆ ಮಾಡಿದಂತಹ ಸಭೆಯಲ್ಲಿ ರಾಜ್ಯ ಕಾರ್ಯಧ್ಯಕ್ಷ ಜಾಕಿರ್ ಹುಸೇನ್ ರಾಜ್ಯ ಪ್ರಧಾನ ಕಾರ್ಯದರ್ಶಿ ಗಂಗಾಧರ ಬಿ.ಎಸ್.ಪಿ ಜಿಲ್ಲಾಧ್ಯಕ್ಷ ರಾಧಾಕೃಷ್ಣ, ಪ್ರಭಾಕರ್, ಕೆ ಎಂ ರಾಮಣ್ಣ ಉಪಸ್ಥಿತರಿದ್ದರು

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!