May 2, 2024

MALNAD TV

HEART OF COFFEE CITY

ರಾಷ್ಟ್ರೀಯ ಹೆದ್ದಾರಿಯಲ್ಲಿ ಉರುಳಿಬಿದ್ದ ಬೃಹತ್ ಮರ, ಟ್ರಾಫಿಕ್ ಜಾಮ್

1 min read

 

 

ಚಿಕ್ಕಮಗಳೂರು : ಮಲೆನಾಡಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ಧಾರಾಕಾರ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದ್ದು ಜನರು ಮನೆಯಿಂದ ಹೊರಬರುವುದಕ್ಕೂ ಹಿಂದೇಟು ಹಾಕುತ್ತಿದ್ದಾರೆ, ಮಳೆ ಆರ್ಭಟಕ್ಕೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೃಹತ್ ಮರವೊಂದು ಉರುಳಿಬಿದ್ದಿದ್ದು ಮರ ರಸ್ತೆಗೆ ಉರುಳಿಬಿದ್ದ ಪರಿಣಾಮ ಚಿಕ್ಕಮಗಳೂರು-ಮಂಗಳೂರು ಸಂಪರ್ಕ ಕಡಿತವಾಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ವಸ್ತಾರೆ ಬಳಿ ನಡೆದಿದೆ. ಮಲೆನಾಡಲ್ಲಿ ಗಾಳಿ-ಮಳೆ ಅಬ್ಬರ ಮುಂದುವರೆದ ಪರಿಣಾಮ ಬೃಹತ್ ಮರ ಉರುಳಿಬಿದ್ದಿದೆ. ಕಡೂರು-ಮಂಗಳೂರು, ರಾಷ್ಟ್ರೀಯ ಹೆದ್ದಾರಿ 173 ಘಟನೆ ನಡೆದಿದ್ದು ರಸ್ತೆಯಲ್ಲಿ ವಾಹನಗಳು ಸಾಲಾಗಿ ನಿಂತಿವೆ. ಚಿಕ್ಕಮಗಳೂರು-ಮಂಗಳೂರು ಸಂಪರ್ಕ ಕಡಿತವಾದ ಹಿನ್ನೆಲೆ ಆಲ್ದೂರು ಮೂಲಕ ಮೂಡಿಗೆರೆ, ಮಂಗಳೂರು ಕಡೆ ವಾಹನಗಳು 20 ಕಿ.ಮೀ. ಸುತ್ತಿಕೊಂಡು ಸಂಚಾರ ಮಾಡುತ್ತಿವೆ. ಮಳೆಯ ಆರ್ಭಟ ಮುಂದುವರೆದ ಪರಿಣಾಮ ಸಾಕಷ್ಟು ಅನಾವುತ ಸೃಷ್ಟಿಯಾಗಿವೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!