May 17, 2024

MALNAD TV

HEART OF COFFEE CITY

ಮೂಗ್ತಿಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಹೂವಪ್ಪ ಶೆಟ್ಟಿ ಅವಿರೋಧ ಆಯ್ಕೆ

1 min read

ಚಿಕ್ಕಮಗಳೂರು-ತಾಲ್ಲೂಕಿನ ಮೂಗ್ತಿಹಳ್ಳಿ ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ಹೂವಪ್ಪಶೆಟ್ಟಿ, ಉಪಾಧ್ಯಕ್ಷರಾಗಿ ಅಂಬಿಕಾoಪ್ರಕಾಶ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆಂದು ಚುನಾವಣಾ ಅಧಿಕಾರಿ ಚರಣ್‌ರಾಜ್ ಘೋಷಿಸಿದರು.ಸಿಡಿಎ ಅಧ್ಯಕ್ಷ ಆನಂದ್ ನೂತನ ಅಧ್ಯಕ್ಷರು, ಉಪಾಧ್ಯಕ್ಷರನ್ನು ಅಭಿನಂದಿಸಿ ಮಾತನಾಡಿ ಪಂಚಾಯಿತಿಗೆ ನಿಗಧಿಯಾಗಿದ್ದ ಮೀಸಲಾತಿಯಂತೆ ಬಿಜೆಪಿ ಪಕ್ಷದ ಅಧ್ಯಕ್ಷ-ಉಪಾಧ್ಯಕ್ಷರು ಎಲ್ಲಾ ಸದಸ್ಯರ ಸಹಕಾರದೊಂದಿಗೆ ಒಮ್ಮತದಿಂದ ಆಯ್ಕೆಯಾಗಿದ್ದು ಮುಂದಿನ ದಿನಗಳಲ್ಲಿ ತಮ್ಮ ಅಧಿಕಾರವಧಿಯಲ್ಲಿ ಗ್ರಾ.ಪಂ ವ್ಯಾಪ್ತಿಯ ಜನರ ತೊಂದರೆಗಳಿಗೆ ಸ್ಪಂದಿಸಲಿ ಪಂಚಾಯಿತಿಯಿoದ ಸೂಕ್ತ ಪರಿಹಾರ ನೀಡಬೇಕೆಂದು ಸಲಹೆ ಮಾಡಿದರು.

ಮೂಗ್ತಿಹಳ್ಳಿ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷ ಹೂವಪ್ಪಶೆಟ್ಟಿ ಮಾತನಾಡಿ ಗ್ರಾ.ಪಂ ವ್ಯಾಪ್ತಿಯ ಬಡ ಕುಟುಂಬಗಳಿಗೆ ನೆರವು ನೀಡುವುದು ನನ್ನ ಆದ್ಯ ಕರ್ತವ್ಯವಾಗಿದೆ. ಜೊತೆಗೆ ಪಂಚಾಯಿತಿಯನ್ನು ಅಭಿವೃದ್ಧಿಪಡಿಸಲು ಗುರಿ ಹೊಂದಿರುವುದಾಗಿ ತಿಳಿಸಿದರು.ಉತ್ತಮ ಮಾದರಿ ಪಂಚಾಯ್ತಿಯನ್ನಾಗಿಸಲು ಶ್ರಮಿಸುತ್ತೇನೆ ಎಂದು ಭರವಸೆ ನೀಡಿದ ಅವರು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದ ಮಾಜಿ ಶಾಸಕರಿಗೆ ಹಾಗೂ ಎಲ್ಲಾ ಸದಸ್ಯರಿಗೆ ಹೃದಯಪೂರ್ವಕ ಧನ್ಯವಾದಗಳನ್ನು ತಿಳಿಸಿದರು.
ನೂತನ ಸರ್ಕಾರ ಅಧಿಕಾರದಲ್ಲಿ ಪಂಚಾಯಿತಿ ಮಟ್ಟದಲ್ಲಿ ಆಶ್ರಯ ಮನೆ ವಿತರಿಸಲು ಅನುದಾನ ನೀಡಿದರೆ ಸೂಕ್ತ ಕ್ರಮವಹಿಸಿ ಬಡವರಿಗೆ ಸೌಲಭ್ಯ ತಲುಪಿಸಲು ಶ್ರಮಿಸುತ್ತೇನೆ ಎಂದರು.
ಮೂಗ್ತಿಹಳ್ಳಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಅಂಬಿಕಾಪ್ರಕಾಶ್ ಮಾತನಾಡಿ ತಮ್ಮ ಅಧಿಕಾರವಧಿಯಲ್ಲಿ ಸಾರ್ವಜನಿಕರ ಕೆಲಸ ಕಾರ್ಯಗಳನ್ನು ಶ್ರದ್ಧೆಯಿಂದ ನಿರ್ವಹಿಸುವುದರ ಜೊತೆಗೆ ಎಲ್ಲಾ ಸದಸ್ಯರು ಸಹಕಾರ ನೀಡುವಂತೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಸಿ.ಟಿ.ರವಿ, ಬಿಜೆಪಿ ಮುಖಂಡರುಗಳಾದ ಕೋಟೆ ರಂಗನಾಥ್, ಕವೀಶ್, ಕನಕರಾಜ್, ಚಂದ್ರೇಗೌಡ, ವೆಂಕಟೇಶ್, ಪುನೀತ್, ಕುಮಾರ್, ಮಧುಸೂದನ್, ತೀರ್ಥಪ್ರಸಾದ್, ಮೂಗ್ತಿಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯರುಗಳಾದ ಕಮಲಾಕ್ಷಿ, ಸವಿತಾ, ಪದ್ಮ, ಸಿ.ಅಂಬಿಕಾ, ಮಂಜುನಾಥ್ ಗೌಡ, ಗಿರೀಶ್.ಜೆ.ಸಿ, ನವೀನಕುಮಾರಿ, ಪದ್ಮರಾಜಶೇಖರ್, ಸತೀಶ್, ಸಂದೀಪ್, ಪ್ರಭಾಕರ್, ಸಂದೀಪ, ಸತೀಶ್, ಪಿಡಿಓ ರಾಜಕುಮಾರ್, ಕಾರ್ಯದರ್ಶಿ ಜಯರಾಮ್, ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!