May 17, 2024

MALNAD TV

HEART OF COFFEE CITY

ನಾನು ಕರಸೇವಕ ನನ್ನನ್ನೂ ಬಂಧಿಸಿ: ಪೊಲೀಸ್ ಠಾಣೆ ಎದುರು ಸಿ.ಟಿ ರವಿ ಧರಣಿ

1 min read

ಚಿಕ್ಕಮಗಳೂರು: ನಾನೂ ಕರಸೇವಕ ನನ್ನನ್ನು ಬಂಧಿಸಿ ಎಂದು ಮಾಜಿ ಶಾಸಕ ಸಿ.ಟಿ ರವಿ ನಗರ ಪೊಲೀಸ್ ಠಾಣೆ ಎದುರು ಧರಣಿ ನಡೆಸುತ್ತಿದ್ದಾರೆ. ಹುಬ್ಬಳ್ಳಿ ಕರಸೇವಕ ಶ್ರೀಕಾಂತ್ ಪೂಜಾರಿ ಬಂಧನ ಖಂಡಿಸಿ ಸಿ.ಟಿ.ರವಿ ಮೌನ ಪ್ರತಿಭಟನೆ ನಡೆಸುತ್ತಿದ್ದಾರೆ, ಬಿಜೆಪಿ ಕಾರ್ಯಕರ್ತರು ಹಲವು ಮುಖಂಡರು ಠಾಣೆ ಮುಂದೆ ಜಮಾಯಿಸಿದರು. ಸ್ಥಳಕ್ಕೆ ಆಗಮಿಸಿದ ಹೆಚ್ಚುವರಿ ಎಸ್ಪಿ ಕೃಷ್ಣಮೂರ್ತಿ ಪೊಲೀಸ್ ಠಾಣೆ ಒಳಗೆ ಸಿ.ಟಿ ರವಿಯವರನ್ನು ಕರೆದುಕೊಂಡು ಹೋದರು. ಈ ವೇಳೆ ಕೆಂಡಾಮಂಡಲರಾದ ಬಿಜೆಪಿ ಕಾರ್ಯಕರ್ತರು ನಾವು ಕರಸೇವಕರೆ ನಮ್ಮನ್ನು ಬಂಧಿಸಿ ಎಂದು ಠಾಣೆಗೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ಪೊಲೀಸರು ಹಾಗೂ ಬಿಜೆಪಿ ಕಾರ್ಯಕರ್ತರು ನಡುವೆ ಮಾತಿನ ಚಕಮಕಿ ತಳ್ಳಾಟ ನೂಕಾಟ ನಡೆಯಿತು. ರಾಜ್ಯ ಸರ್ಕಾರದ ವಿರುದ್ಧ ಸಿ.ಎಂ ಸಿದ್ದರಾಮಯ್ಯ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಬಿಜೆಪಿ ಕಾರ್ಯಕರ್ತರು ಮತ್ತಷ್ಟು ಕೂಗಲಾರಂಭಿಸಿದರು. ಕೆಲಕಾಲ ನಗರ ಪೊಲೀಸ್ ಠಾಣೆ ಎದುರು ಹೈಡ್ರಾಮವೇ ನಡೆಯುತು. ನಂತರ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ಠಾಣೆ ಆವರಣದಿಂದ ಹೊರಗೆ ಕಳುಹಿಸಿದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!