April 29, 2024

MALNAD TV

HEART OF COFFEE CITY

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ನಾನೂ ಆಕಾಂಕ್ಷಿ: ನಾಗೇಶ್ ಅಂಗೀರಸ

1 min read

ಚಿಕ್ಕಮಗಳೂರು: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಪಕ್ಷದಿಂದ ನಾನೂ ಆಕಾಂಕ್ಷಿಯಾಗಿದ್ದು ಈ ಬಗ್ಗೆ ಪ್ರಧಾನಿ ಮೋದಿಗೆ ಇಂಗ್ಲಿಷ್ ನಲ್ಲಿ ಪತ್ರ ಬರೆದಿರುವುದಾಗಿ ನಾಗೇಶ್ ಅಂಗೀರಸ ಹೇಳಿದರು.

ನಗರದ ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ನನಗೆ ಬಿಜೆಪಿ ಪಕ್ಷದಿಂದ ಅವಕಾಶ ನೀಡಿದರೆ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆಗೆ ಸಿದ್ದನಿದ್ದೇನೆ. ಈಗಾಗಲೇ ಲೋಕಸಭಾ ಕ್ಷೇತ್ರಕ್ಕೆ ಸ್ಪರ್ಧೆ ಬಗ್ಗೆ ಪಕ್ಷದ ವರಿಷ್ಠರಿಗೆ ಪತ್ರ ಬರೆದಿದ್ದು ಪತ್ರದ ಇಂಗ್ಲೀಷ್ ತರ್ಜುಮೆ ಸಹಾ ಸಲ್ಲಿಸಿದ್ದೇನೆ ಎಂದು ಪ್ರಜಾಪ್ರಭುತ್ವ ಉಳಿಸಿ ಆಂದೋಲನ ವೇದಿಕೆಯ ನಾಗೇಶ್ ಅಂಗೀರಸ ತಿಳಿಸಿದರು. ನನ್ನ ಸಾಮಾಜಿಕ ಕೆಲಸಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಲಿಖಿತವಾಗಿ ಇಂಗ್ಲಿಷ್ ಭಾಷೆಯಲ್ಲಿ ಬರೆದು ಪ್ರಧಾನಿ ಮೋದಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ, ಅಮಿತ್ ಶಾ, ರಾಜ್ಯದ ಬಿಜೆಪಿ ಮುಖಂಡರಿಗೂ ಸಲ್ಲಿಸಿರುವುದಾಗಿ ಹೇಳಿದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!