May 17, 2024

MALNAD TV

HEART OF COFFEE CITY

5.5 ಲಕ್ಷ ಮೌಲ್ಯದ ಅಕ್ರಮ ಮದ್ಯ ವಶ

1 min read

ಕೋಳಿ ಫಾರಂನಲ್ಲಿ ಅಕ್ರಮವಾಗಿ ದಾಸ್ತಾನು ಮಾಡಲಾಗಿದ್ದ ಸುಮಾರು ರೂ. 5.5 ಲಕ್ಷ ಮೌಲ್ಯದ ಮದ್ಯವನ್ನು ಸಖರಾಯಪಟ್ಟಣ ಪೊಲೀಸ್ ಇಲಾಖೆ ಹಾಗೂ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ಮಾಡಿ ವಶಪಡಿಸಿಕೊಂಡಿದ್ದಾರೆ.
ಕಡೂರು ತಾಲ್ಲೂಕು ಸಖರಾಯಪಟ್ಟಣ ಹೋಬಳಿಯ ಚಟ್ನಪಾಳ್ಯ ತೋಟದ ಕೋಳಿ ಫಾರಂನಲ್ಲಿ ಸುಮಾರು 100 ಬಾಕ್ಸ್ ಮದ್ಯ ದಾಸ್ತಾನು ಮಾಡಲಾಗಿದ್ದು, ಇದರ ಒಟ್ಟು ಮೌಲ್ಯ ರೂ. 5.5 ಲಕ್ಷಗಳಾಗುತ್ತದೆ.
ಜಿಲ್ಲಾಧಿಕಾರಿ ಕೆ.ಎನ್. ರಮೇಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾಪ್ರಶಾಂತ್, ಅಬಕಾರಿ ಇಲಾಖೆಯ ಉಪ ಆಯುಕ್ತೆ ಸುಮಿತಾ ಕೆ.ಕೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜಿಲ್ಲಾಧಿಕಾರಿ ಕೆ.ಎನ್. ರಮೇಶ್ ಮಾಹಿತಿ ನೀಡಿ ಮಂಜು ಅಲಿಯಾಸ್ ಅಭಯ್ ತಾಯಿ ರಾಜಮ್ಮ, ಗ್ರಾಮ ಪಂಚಾಯಿತಿ ಸದಸ್ಯೆ ಇವರ ಕೋಳಿ ಫಾರಂನಲ್ಲಿ ಅಕ್ರಮವಾಗಿ ದಾಸ್ತಾನು ಮಾಡಲಾಗಿದ್ದ 100 ಬಾಕ್ಸ್‍ನ ಮದ್ಯದ ಮೌಲ್ಯ ರೂ. 5.5 ಲಕ್ಷ ಎಂದು ಅಂದಾಜಿಸಲಾಗಿದೆ. ಇದು ರಾಯಲ್ ಗೋಲ್ಡ್ ಮದ್ಯವಾಗಿದ್ದು, ಗೋವಾದಿಂದ ಸರಬರಾಜಾಗಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಪೊಲೀಸ್ ಹಾಗೂ ಅಬಕಾರಿ ಇಲಾಖೆ ತನಿಖೆಯಿಂದ ಹೆಚ್ಚಿನ ಮಾಹಿತಿ ಲಭ್ಯವಾಗಲಿದೆ.
ಇದು ಗಂಭೀರವಾದ ಕಾನೂನು ಉಲ್ಲಂಘನೆಯಾಗಿದ್ದು, ತಪ್ಪಿತಸ್ಥರು ಯಾರೇ ಆದರೂ ಅವರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದರು.ಈ ಸಂದರ್ಭದಲ್ಲಿ ಅಬಕಾರಿ ಹಾಗೂ ಪೊಲೀಸ್ ಇಲಾಖೆ ಅಧಿಕಾರಿ, ಸಿಬ್ಬಂದಿಗಳು ಇದ್ದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!