May 6, 2024

MALNAD TV

HEART OF COFFEE CITY

ಹೆರಿಗೆ ಆಸ್ಪತ್ರೆ ಆವರಣದ ಶೌಚಾಲಯ ಉದ್ಘಾಟನೆ

1 min read

ಚಿಕ್ಕಮಗಳೂರು: ನಗರದ ಹೆರಿಗೆ ಆಸ್ಪತ್ರೆ ಆವರಣದಲ್ಲಿ ನೂತನವಾಗಿ ನಿರ್ಮಾಣಗೊಂಡ ಸುಲಭ ಶೌಚಾಲಯವನ್ನು ನಗರಸಭೆ ಅಧ್ಯಕ್ಷ ವರಸಿದ್ದಿ ವೇಣುಗೋಪಾಲ್ ಮಂಗಳವಾರ ಉದ್ಘಾಟಿಸಿದರು. 14ನೇ ಹಣಕಾಸು ಯೋಜನೆಯಡಿ ಅಂದಾಜು 7.25 ಲಕ್ಷ ಅನುದಾನದಲ್ಲಿ ಹೆರಿಗೆ ಆಸ್ಪತ್ರೆ ಆವರಣದಲ್ಲಿ ಸುಲಭ ಶೌಚಾಲಯ ನಿರ್ಮಾಣಗೊಂಡಿದ್ದು, ಸಾರ್ವಜನಿಕರು ಸ್ವಚ್ಚತೆ ಕಾಪಾಡುವುದರೊಂದಿಗೆ ಸರ್ಪಕವಾಗಿ ಬಳಕೆ ಮಾಡುವಂತೆ ತಿಳಿಸಿದರು.

ನಗರಸಭೆ ವತಿಯಿಂದ ಶೌಚಾಲಯ ನಿರ್ಮಾಣಗೊಂಡು ತಿಂಗಳಾಗಿದ್ದು, ಉದ್ಘಾಟನೆಗೊಂಡಿರಲಿಲ್ಲ, ಇದೀಗ ಶಾಸಕರ ಸೂಚನೆ ಮೇರೆಗೆ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಶೌಚಾಲಯ ನಿರ್ಮಿಸಿ ಇದೀಗ ಸಾರ್ವಜನಿಕರ ಉಪಯೋಗಕ್ಕೆ ತೆರೆದಿಡಲಾಗಿದೆ ಎಂದು ಹೇಳಿದರು.
ಜಿಲ್ಲಾ ಸರ್ಜನ್ ಡಾ.ಮೋಹನ್‍ಕುಮಾರ್ ಮಾತನಾಡಿ ಹೆರಿಗೆ ಆಸ್ಪತ್ರೆ ಮುಂಭಾಗದಲ್ಲಿ ಸಾಕಷ್ಟು ವ್ಯಾಪಾರಿಗಳು ಅಂಗಡಿ ನಡೆಸುತ್ತಿದ್ದು ಮಲ್ಲೇಗೌಡ ಆಸ್ಪತ್ರೆ, ಹೆರಿಗೆ ಆಸ್ಪತ್ರೆಯಲ್ಲಿನ ಶೌಚಾಲಯವನ್ನು ಬಳಕೆ ಮಾಡುತ್ತಿದ್ದರು ಇದರಿಂದ ರೋಗಿಗಳಿಗೆ ತುಂಬಾ ಸಮಸ್ಯೆಯಾಗಿತ್ತು. ಇದೀಗ ಸುಲಭ ಶೌಚಾಲಯ ನಿರ್ಮಾಣಗೊಂಡಿದ್ದು ಸಾರ್ವಜನಿಕರು, ವ್ಯಾಪಾರಿಗಳಿಗೆ ಅನುಕೂಲವಾಗಲಿದೆ ಎಂದರು

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!