May 18, 2024

MALNAD TV

HEART OF COFFEE CITY

ಗಡಬನಹಳ್ಳಿಯಲ್ಲಿ ರೂ 60 ಲಕ್ಷ ವೆಚ್ಚದ ರಸ್ತೆ ಕಾಮಗಾರಿ ಉದ್ಘಾಟನೆ

1 min read

ಚಿಕ್ಕಮಗಳೂರುಮೂಡಿಗೆರೆ ವಿಧಾನಸಭಾ ಕ್ಷೇತ್ರದ ಮೈಲಿಮನೆ ಗ್ರಾಮಪಂಚಾಯಿತಿ ವ್ಯಾಪ್ತಿಯ ಗಡಬನಹಳ್ಳಿ ಗ್ರಾಮದಲ್ಲಿ ಒಟ್ಟು ರೂ 60 ಲಕ್ಷ ಅನುದಾನದಲ್ಲಿ ನಿರ್ಮಾಣಗೊಂಡ ಕಾಂಕ್ರೀಟ್ ರಸ್ತೆ ಕಾಮಗಾರಿಯನ್ನು ಬುಧವಾರ ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ ಉದ್ಘಾಟಿಸಿದರು.ಬಳಿಕ ಮಾತನಾಡಿದ ಅವರು ಗ್ರಾಮೀಣಾಭಿವೃದ್ಧಿ ಇಲಾಖೆ ವತಿಯಿಂದ ರೂ.50 ಲಕ್ಷ ಅನುದಾನ ಬಿಡುಗಡೆಗೊಳಿಸಿದ್ದು ಜತೆಗೆ ಕಾವೇರಿ ನಿಗಮದಿಂದ ರೂ 10 ಲಕ್ಷ ಅನುದಾನ ಬಿಡುಗಡೆಗೊಳಿಸಲಾಗಿದ್ದು ಉತ್ತಮ ಗುಣಮಟ್ಟದ ಕಾಂಕ್ರಿಟ್ ರಸ್ತೆ ನಿರ್ಮಾಣಗೊಂಡಿದೆ ಎಂದರು.
ರಸ್ತೆ ನಿರ್ಮಾಣಕ್ಕೆ ಗ್ರಾಮಸ್ಥರು ಹಲವು aಬಾರಿ ಮನವಿ ಮಾಡಿದ್ದರು, ಅಭಿವೃದ್ಧಿ ಚಿಂತನೆಯ ದೃಷ್ಟಿಯಲ್ಲಿ ಕ್ಷೇತ್ರದ ಎಲ್ಲಾ ಪಂಚಾಯಿತಿಗಳಿಗೆ ಸಮಾನವಾಗಿ ಅನುದಾನ ಹಂಚಿಕೆ ಮಾಡಿ ಕಾಮಗಾರಿ ಕೈಗೊಳ್ಳಲಾಗುತ್ತಿದೆ, ಉಳಿದ ರಸ್ತೆ ಕಾಮಗಾರಿಗಳನ್ನು ಹಂತ ಹಂತವಾಗಿ ಪೂರ್ಣಗೊಳಿಸಲು ಶ್ರಮಿಸಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಮೈಲಿಮನೆ ಗ್ರಾಮಪಂಚಾಯಿತಿ ಅಧ್ಯಕ್ಷೆ ಹೇಮಾವತಿ, ,ಸದಸ್ಯರಾದ ಪರಮೇಶ್, ಕಾರ್ತಿಕ್,, ರಮ್ಯಾ ಪೂರ್ಣೇಶ್, ಮುಖಂಡರಾದ ಗಡಬನಹಳ್ಳಿ ಬೂತ್ ಅಧ್ಯಕ್ಷ ಕೃಷ್ಣಮೂರ್ತಿ, ಹಿಂದುಳಿದ ಮೋರ್ಚಾದ ಕಾರ್ಯದರ್ಶಿ ಕೆ.ವಿ.ಅಶೋಕ್, ಮೈಲಿಮನೆ ಬೂತ್ ಅಧ್ಯಕ್ಷ ನಾಗೇಶ್ ಬಿ.ಹೆಚ್. ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!