May 14, 2024

MALNAD TV

HEART OF COFFEE CITY

ಮುಳ್ಳಯ್ಯನಗಿರಿಗೆ ಹೆಚ್ಚಿದ ಪ್ರವಾಸಿಗರ ಸಂಖ್ಯೆ

1 min read

ರಾಜ್ಯದ ಜನ ಕೊರೋನಾ ಆತಂಕದಿಂದ ಒಂದಷ್ಟು ನಿರಾಳರಾಗುತ್ತಿದ್ದಂತೆ ಪ್ರವಾಸಿ ತಾಣಗಳತ್ತ ಮುಖ ಮಾಡಿ ಪ್ರಕೃತಿ ಸೌಂದರ್ಯದಲ್ಲಿ ಮಿಂದೇಳುತ್ತಿದ್ದಾರೆ. ಇಂದು ವೀಕ್ ಎಂಡ್ ಆಗಿರೋದ್ರಿಂದ ಚಿಕ್ಕಮಗಳೂರಿನ ಮುಳ್ಳಯ್ಯನಗಿರಿಗೆ ಭಾರೀ ಪ್ರವಾಸಿಗರು ಭೇಟಿ ನೀಡಿ ಮುಳ್ಳಯ್ಯನಗಿರಿಯ ಪ್ರಕೃತಿ ಸೌಂದರ್ಯವನ್ನ ಸವಿದಿದ್ದಾರೆ. ಕಳೆದ ನಾಲ್ಕೈದು ತಿಂಗಳಿಂದ ಮುಳ್ಳಯ್ಯನಗಿರಿ ಭಾಗಕ್ಕೆ ಬರುವ ಪ್ರವಾಸಿಗರಿಗೆ ಜಿಲ್ಲಾಡಳಿತ ನಿರ್ಬಂಧ ಹೇರಿತ್ತು. ಆದರೆ, ಇಡೀ ರಾಜ್ಯಾದ್ಯಂತ ಕೊರೋನಾ ಬಹುತೇಕ ನಿಯಂತ್ರಣಕ್ಕೆ ಬಂದ ಹಿನ್ನೆಲೆ ಜಿಲ್ಲಾಡಳಿತ ಕಠಿಣ ನಿರ್ಬಂಧವನ್ನ ತಕ್ಕ ಮಟ್ಟಿಗೆ ಸಡಿಲಗೊಳಿಸಿದೆ. ಹಾಗಾಗಿ, ಜಿಲ್ಲೆಗೆ ಬರ್ತಿರೋ ಪ್ರವಾಸಿಗರ ಸಂಖ್ಯೆಯಲ್ಲೂ ಭಾರೀ ಏರಿಕೆ ಕಂಡಿದೆ.

 

 

ಆದ್ರೆ, ಬರುವಂತಹಾ ಪ್ರವಾಸಿಗರು ಸರ್ಕಾರದ ಕೊರೋನಾ ನಿಯಮವನ್ನ ಸಂಪೂರ್ಣ ಗಾಳಿಗೆ ತೂರಿದ್ದಾರೆ. ಯಾರೊಬ್ಬರ ಮುಖದಲ್ಲೂ ಮಾಸ್ಕ್ ಇಲ್ಲ. ಸಾಮಾಜಿಕ ಅಂತರ ದೂರದ ಮಾತು. ಗಿರಿ ಭಾಗದಲ್ಲಿ ಇಂದು ಬೆಳ್ಳಂಬೆಳಗ್ಗೆಯೇ ಸುಮಾರು 300ಕ್ಕೂ ಅಧಿಕ ವಾಹನಗಳಲ್ಲಿ ಪ್ರವಾಸಿಗರು ಭೇಟಿ ನೀಡಿದ್ದರಿಂದ ಗಿರಿ ಭಾಗದಲ್ಲಿ ಅಲ್ಲಲ್ಲೇ ಆಗಾಗ್ಗೆ ಟ್ರಾಫಿಕ್ ಜಾಮ್ ಕೂಡ ಉಂಟಾಗಿತ್ತು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!