May 14, 2024

MALNAD TV

HEART OF COFFEE CITY

ಸುಸಜ್ಜಿತ ರಸ್ತೆ ನಿರ್ಮಾಣಕ್ಕೆ ಒತ್ತಾಯ : ಟಿ.ಡಿ. ರಾಜೇಗೌಡ

1 min read

ಶೃಂಗೇರಿ : ಜಿಲ್ಲೆಯ ಮಲೆನಾಡು ಭಾಗಗಳಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಅಗಳಗಂಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳು ಸಂಪೂರ್ಣ ಕೊಚ್ಚಿ ಹೋಗಿದ್ದು, ಸ್ಥಳಕ್ಕೆ ಸ್ಥಳೀಯ ಶಾಸಕ ಟಿ.ಡಿ. ರಾಜೇಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕಳೆದ ಒಂದು ತಿಂಗಳಿಗೂ ಹೆಚ್ಚು ದಿನಗಳಿಂದ ಎಡೆಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಅಗಳಗಂಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೆಗ್ಗಾರುಕೊಡಿಗೆ ಗ್ರಾಮ, ಕಚಿಗೆ ಗ್ರಾಮ ಹಾಗೂ ಮೇಗೂರು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣ ಕೊಚ್ಚಿ ಹೋಗಿದೆ. ಸ್ಥಳಕ್ಕೆ ಶೃಂಗೇರಿ ಕ್ಷೇತ್ರದ ಶಾಸಕ ಟಿ.ಡಿ. ರಾಜೇಗೌಡರು ಭೇಟಿ ನೀಡಿ ಪರಿಶೀಲನೆ ನಡೆಸಿ, ಮಾತನಾಡಿದ ಅವರು ಮಳೆಯಿಂದಾಗಿ ಆಗಿರುವ ಅನಾಹುತಕ್ಕೆ ಸರ್ಕಾರದ ವಿರುದ್ದ ಪ್ರತಿಭಟನೆ ಮಾಡುವುದರಿಂದ ಯಾವುದೇ ಪ್ರಯೋಜನವಿಲ್ಲ. ಈ ರಸ್ತೆಗೆ ಪರ್ಯಾಯವಾಗಿ ತಾತ್ಕಾಲಿಕ ಕಚ್ಚ ರಸ್ತೆ ನಿರ್ಮಿಸಿ, ಈ ರಸ್ತೆಯನ್ನು ಮುಂದಿನ ದಿನಗಳಲ್ಲಿ ಶೃಂಗೇರಿ ಭಾಗದಲ್ಲಿ ನಿರ್ಮಾಣ ಮಾಡಲು ಹೊರಟಿರುವ ಸುಸಜ್ಜಿತ ರಸ್ತೆಯ ಮಾದರಿಯಲ್ಲೇ ಈ ರಸ್ತೆಯನ್ನು ನಿರ್ಮಾಣ ಮಾಡಿ ಅನಂತರ ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಬೇಕೆಂದು ಒತ್ತಾಯಿಸಿದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!