April 29, 2024

MALNAD TV

HEART OF COFFEE CITY

ಐ.ಟಿ.ಐ. ಶಿಕ್ಷಕರಿಗೆ ವಿಶೇಷ ಪ್ಯಾಕೇಜ್ ಘೋಷಿಸುವಂತೆ ಆನ್ಲೈನ್ ಪ್ರತಿಭಟನೆ

1 min read

ಚಿಕ್ಕಮಗಳೂರು : ರಾಜ್ಯಾದ್ಯಂತ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳಲ್ಲಿ ಸುಮಾರು 900ಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರು ಕೆಲಸ ಮಾಡುತ್ತಿದ್ದು ನಮಗೂ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಣೆ ಮಾಡುವಂತೆ ಆಗ್ರಹಿಸಿ ಜೂನ್ 11ರ ಶುಕ್ರವಾರದಿಂದ ರಾಜ್ಯಾದ್ಯಂತ ಐಟಿಐ ಶಿಕ್ಷಕರು ಆನ್‍ಲೈನ್‍ನಲ್ಲಿ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಕೋವಿಡ್-19ರಿಂದ ಕಳೆದ ಒಂದೂವರೆ ವರ್ಷದಿಂದಲೂ ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದೇವೆ. ಜೀವನ ನಿರ್ವಹಿಸುವುದೇ ಕಷ್ಟವಾಗಿದೆ ಎಂದು ತಮ್ಮ ಅಳಲನ್ನ ತೋಡಿಕೊಂಡಿದ್ದಾರೆ. ಕಳೆದ ಮೂರು ತಿಂಗಳಿಂದ ವೇತನವಿಲ್ಲದೇ ಸಂಸಾರ ನಡೆಸುವುದು ಕಷ್ಟಕರವಾಗಿದೆ ಎಂದು ನೊಂದಿದ್ದಾರೆ. ಆದ್ದರಿಂದ ಐಟಿಐ ಶಿಕ್ಷಕರಿಗೂ ರಾಜ್ಯ ಸರ್ಕಾರ ವಿಶೇಷ ಪ್ಯಾಕೇಜ್ ನೀಡುವಂತೆ ಒತ್ತಾಯಿಸಿ ಆನ್‍ಲೈನ್ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಐಟಿಐ ಅತಿಥಿ ಬೋಧಕರಿಗೂ ಕೊರೊನಾ ಪ್ಯಾಕೇಜ್ ಘೋಷಣೆ ಮಾಡಬೇಕೆಂದು ಒತ್ತಾಯಿಸಿದ್ದಾರೆ. ಅತಿಥಿ ಬೋಧಕರಿಗೂ ಶೀಘ್ರವೇ ಸಂಬಳ ಬಿಡುಗಡೆ ಮಾಡುವಂತೆ ಒತ್ತಾಯಿಸಿದ್ದಾರೆ. ಕೋವಿಡ್‍ನಿಂದ ಮೃತಪಟ್ಟ ಅತಿಥಿ ಬೋಧಕರಿಗೂ 25 ಲಕ್ಷ ರೂಪಾಯಿ ಪರಿಹಾರ ನೀಡಿ, ವೈದ್ಯಕೀಯ ಭದ್ರತೆ ನೀಡುವುದರ ಜೊತೆ ಸೇವಾ ಭದ್ರತೆಯನ್ನು ಖಾತ್ರಿಪಡಿಸಬೇಕೆಂದು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

 

 

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://www.youtube.com/channel/UCmBISI2sn_0gamb44UFj-vQ

 

Credits:

Music : latest 2020 6 different no copyright news background music, royalty free (black mart)

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!