ಕೈ ತೊರೆದು ಕಮಲ ಹಿಡಿದ ಕಂಬಿಹಳ್ಳಿ ಪನ್ನೀರ್
1 min read
ಚಿಕ್ಕಮಗಳೂರು ತಾಲ್ಲೂಕಿನ ತೊಗರಿಹಂಕಲ್ ಗ್ರಾಮ ಪಂಚಾಯಿತಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಕಂಬಿಹಳ್ಳಿ ಪನ್ನೀರ್ ಕಾಂಗ್ರೆಸ್ ತೊರೆದು ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾದರು.
ಕಳೆದ 15 ವರ್ಷಗಳಿಂದ ಸಕ್ರಿಯ ರಾಜಕೀಯದಲ್ಲಿ ತೊಡಗಿಸಿಕೊಂಡಿದ್ದ ಪನ್ನೀರ್, ತೊಗರಿಹಂಕಲ್ ಗ್ರಾಮ ಪಂಚಾಯಿತಿ ಸದಸ್ಯ ಹಾಗೂ ಅಧ್ಯಕ್ಷರಾಗಿ ಜನಪರ ಆಡಳಿತ ನೀಡಿ ಆ ಭಾಗದ ಜನರ ಮೆಚ್ಚುಗೆಗೆ ಪಾತ್ರರಾಗಿದ್ದರು. ಆದರೆ ಇತ್ತೀಚಿನ ಕಾಂಗ್ರೆಸ್ ಸರ್ಕಾರದ ಕಾರ್ಯವೈಖರಿಗೆ ಬೇಸರಗೊಂಡು
ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ಬಿಜೆಪಿ ಜಿಲ್ಲಾಧ್ಯಕ್ಷ ದೇವರಾಜ್ ಶೆಟ್ಟಿ ಹಾಗೂ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರ ಸಮ್ಮುಖದಲ್ಲಿ ಪನ್ನೀರ್ ಬಿಜೆಪಿಗೆ ಸೇರ್ಪಡೆಗೊಂಡರು. ಈ ಸಂದರ್ಭದಲ್ಲಿ ಅವರಿಗೆ ಶಾಲು ಹೊದಿಸಿ, ಪಕ್ಷದ ಬಾವುಟ ಪಕ್ಷಕ್ಕೆ ಸ್ವಾಗತಿಸಲಾಯಿತು. ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಕಲ್ಮರುಡಪ್ಪ, ಮುಖಂಡರಾದ ರವೀಂದ್ರ ಬೆಳವಾಡಿ, ಕೋಟೆ ರಂಗನಾಥ್, ವಿಜಯಕುಮಾರ್, ಪುಷ್ಟರಾಜ್, ವೈ.ಜಿ. ಸುರೇಶ್, ಜಸಿಂತಾ ಅನಿಲ್ ಕುಮಾರ್, ತೊಗರಿಹಂಕಲ್ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಹೆಚ್.ವಿ. ದೇವರಾಜ್, ಕಂಬಿಹಳ್ಳಿ ರಮೇಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g

