April 29, 2024

MALNAD TV

HEART OF COFFEE CITY

ರಾತ್ರೋ ರಾತ್ರಿ ಬೈಕ್ ಎಗರಿಸುತ್ತಿದ್ದ ಕತರ್ನಾಕ್ ಕಳ್ಳ ಅರೆಸ್ಟ್

1 min read

ರಾತ್ರೋರಾತ್ರಿ ಮನೆ ಮುಂದೆ ನಿಲ್ಲಿಸಿದ್ದ ಬೈಕ್‍ಗಳನ್ನ ಎಗರಿಸಿ ಕಡಿಮೆ ಬೆಲೆಗೆ ಮಾರುತ್ತಿದ್ದ ಕುಖ್ಯಾತ ಬೈಕ್ ಕಳ್ಳನನ್ನ ಚಿಕ್ಕಮಗಳೂರು ಜಿಲ್ಲೆ ಕಡೂರು ಪೊಲೀಸರು ಬಂಧಿಸಿದ್ದಾರೆ. ಕಡೂರು ತಾಲೂಕಿನ ಶೆಟ್ಟಿಹಳ್ಳಿ ನಿವಾಸ್ ಮೋಹನ್ ಕುಮಾರ್ ಬಂಧಿತ ಆರೋಪಿ. ಬಂಧಿತನಿಂದ ಸುಮಾರು 4 ಲಕ್ಷ ಮೌಲ್ಯದ 11 ಬೈಕ್ ಗಳನ್ನ ವಶಪಡಿಸಿಕೊಳ್ಳಲಾಗಿದೆ. ಕಡೂರು ತಾಲೂಕಿನಲ್ಲಿ ತೀವ್ರವಾಗಿ ಬೈಕ್ ಕಳ್ಳತನವಾಗುತ್ತಿದ್ದ ಹಿನ್ನೆಲೆ ಪೊಲೀಸರು ತನಿಖೆ ಕೈಗೊಂಡಿದ್ದರು. ಖಚಿತ ಮಾಹಿತಿಗೆ ಮೇರೆಗೆ ಆರೋಪಿಯನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕಡೂರು ಪೊಲೀಸರ ಎದುರು ಆರೋಪಿ ಮೋಹನ್ ತಪ್ಪನ್ನ ಒಪ್ಪಿಕೊಂಡಿದ್ದಾನೆ. ತನಿಖೆ ವೇಳೆ, ಕೇವಲ ಕಡೂರು ಅಷ್ಟೆ ಅಲ್ಲದೆ ಬೆಂಗಳೂರು, ತುಮಕೂರು ಸೇರಿದಂತೆ ಬೇರೆ-ಬೇರೆ ಜಿಲ್ಲೆಗಳಲ್ಲಿ ಬೈಕ್‍ಗಳನ್ನ ಕದ್ದಿರುವ ಬಗ್ಗೆಯೂ ಮಾಹಿತಿ ಲಭ್ಯವಾಗಿದೆ. ಕಡೂರು ಸರ್ಕಲ್ ಇನ್ಸ್‍ಪೆಕ್ಟರ್ ಶಿವಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ್ದರು. ಕಡೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!