May 2, 2024

MALNAD TV

HEART OF COFFEE CITY

ಕೊಪ್ಪದ ಲವ್ ಜಿಹಾದ್ ಪ್ರಕರಣ, ಯುವಕನ ವಿರುದ್ಧ ಯುವತಿ ದೂರು

1 min read

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನಲ್ಲಿ ಕೇಳಿಬಂದಿದ್ದ ಲವ್ ಜಿಹಾದ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು ನೊಂದ ಯುವತಿ ಮಹಮದ್ ರೌಫ್ ಸೇರಿದಂತೆ ಮೂವರ ವಿರುದ್ಧ ಹರಿಹರಪುರ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ಕಳೆದ ಮೂರು ವರ್ಷಗಳಿಂದ ನನಗೆ ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡುತ್ತಿದ್ದಾರೆ. ತಂಪು ಪಾನೀಯದಲ್ಲಿ ಅಮಲು ಪದಾರ್ಥವನ್ನು ಬೆರೆಸಿ ಬಲವಂತವಾಗಿ ಕುಡಿಸಿ ನನ್ನ ಫೋಟೋ ಹಾಗೂ ವಿಡಿಯೋ ತೆಗೆದುಕೊಂಡು ಬ್ಲಾಕ್ ಮೇಲ್ ಮಾಡುತ್ತಿದ್ದಾರೆ. ತಾಳಿ ಕಟ್ಟುವ ರೀತಿಯೂ ಫೋಟೋ ತೆಗೆದುಕೊಂಡು ಬ್ಲಾಕ್ ಮೇಲ್ ಮಾಡುತ್ತಿದ್ದಾರೆ ಎಂದು ದೂರಿನಲ್ಲಿ ದೂರಿದ್ದಾಳೆ. ಈಗ ಮಹಮದ್ ರೌಫ್ ವಿದೇಶದಲ್ಲಿ ಕೂತು ಸಾಮಾಜಿಕ ಜಾಲತಾಣಗಳಲ್ಲಿ ಫೋಟೋ ಅಪ್ಲೋಡ್ ಮಾಡುತ್ತಿದ್ದಾನೆ. ಇದರಿಂದ ನನ್ನ ಹಾಗೂ ಮನೆಯವರ ಮಾನಸಿಕ ನೆಮ್ಮದಿ ಹಾಳಾಗಿದೆ. ಕೂಡಲೇ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿರುವ ಫೋಟೋಗಳನ್ನ ಡಿಲೀಟ್ ಮಾಡಿ ಮಹಮದ್ ರೌಫ್, ಇರ್ಫಾನ್ ಹಾಗೂ ಸೈಫ್ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದ್ದಾಳೆ. ಹರಿಹರಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!