April 29, 2024

MALNAD TV

HEART OF COFFEE CITY

KSRCTC ಬಸ್ ಡಿವೈಡರ್’ಗೆ ಡಿಕ್ಕಿ; ಬಾಲಕ ಸಾವು..!

1 min read

 

ಚಿಕ್ಕಮಗಳೂರು: ಕೆಎಸ್ ಆರ್ ಟಿಸಿ ಬಸ್ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಬಾಲಕ ಸಾವನ್ನಪ್ಪಿರುವ ಘಟನೆ ತರೀಕೆರೆ ತಾಲೂಕು ಬೆಟ್ಟದಹಳ್ಳಿ ಸಮೀಪ ನಡೆದಿದೆ.

ರಾಷ್ಟ್ರೀಯ ಹೆದ್ದಾರಿ 206ರ ಬೆಟ್ಟದಹಳ್ಳಿ ಬಳಿ, ಬೆಂಗಳೂರಿನಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಕೆಎಸ್ಆರ್ ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬಸ್ಸಿನಲ್ಲಿದ್ದ 7 ವರ್ಷದ ಬಾಲಕ ಸಾವನ್ನಪ್ಪಿದು, 12 ಜನರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತ ಬಾಲಕ(7) ಪ್ರಮೋದ್ ನನ್ನು ತುಮಕೂರು ಜಿಲ್ಲೆ ಗುಬ್ಬಿ ನಿವಾಸಿ ಎಂದು ಗುರುತಿಸಲಾಗಿದೆ.

ಸ್ಥಳಕ್ಕೆ ತರೀಕೆರೆ ಪೊಲೀಸ್ ರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತರೀಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!