April 29, 2024

MALNAD TV

HEART OF COFFEE CITY

ಸ್ಕೈ ವಾಕರ್ ನ ಪಿಲ್ಲರ್ ಗೆ ಢಿಕ್ಕಿಯಾದ ಕೆಎಸ್ಆರ್.ಟಿ.ಸಿ ಬಸ್

1 min read

 

 

ಚಾಲಕನ ನಿಯಂತ್ರಣ ತಪ್ಪಿ ಸ್ಕೈ ವಾಕರ್ ನ ಪಿಲ್ಲರ್ ಗೆ ಕೆಎಸ್ಆರ್.ಟಿ.ಸಿ ಬಸ್ ಢಿಕ್ಕಿ ಹೊಡೆದ ಘಟನೆ ಕಡೂರಿನ ರಾಷ್ಟ್ರೀಯ ಹೆದ್ದಾರಿ 206 ರಲ್ಲಿ ಸಂಭವಿಸಿದೆ. ಅಪಘಾತದ ರಭಸಕ್ಕೆ ಬಸ್ ನಜ್ಜುಗುಜ್ಜಾಗಿದ್ದು ಐವರಿಗೆ ಗಂಭೀರ ಗಾಯಗಳಾಗಿವೆ. 

 

ಚಾಲನಕನ ನಿಯಂತ್ರಣ ತಪ್ಪಿ ಸ್ಕೈ ವಾಕರ್ ಪಿಲ್ಲರ್ ಗೆ ಬಸ್ ಢಿಕ್ಕಿಯಾಗಿದ್ದು, ಬಸ್ಸಿನಲ್ಲಿದ್ದ 5 ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ. ಕಡೂರು ತಾಲೂಕಿನ ಅಂಚೆ ಚೋಮನಹಳ್ಳಿ ಬಳಿ ಘಟನೆ ನಡೆದಿದ್ದು, ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಭೀಕರ ಅವಘಡ ಸಂಭವಿಸಿದೆ. ಕಡೂರಿನಿಂದ ಅರಸೀಕೆರೆಗೆ ಬಸ್ ತೆರಳುತ್ತಿತ್ತು ಎಂದು ತಿಳಿದು ಬಂದಿದೆ. ಅಪಘಾತದಲ್ಲಿ ಗಾಯಗೊಂಡ ಐವರನ್ನು ಕಡೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಸ್ಕೈ ವಾಕರ್ ಗೆ ಗುದ್ದಿದ ಪರಿಣಾಮ ಬಸ್ ಭಾಗಶಃ ಜಖಂ ಆಗಿದೆ.

ಕಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅವಘಡ ಪ್ರಕರಣ ದಾಖಲಾಗಿದೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!