May 5, 2024

MALNAD TV

HEART OF COFFEE CITY

ಹೃದಯಾಘಾತದಿಂದ ಕರ್ತವ್ಯನಿರತ ಕೆ.ಎಸ್.ಆರ್.ಟಿ.ಸಿ. ಬಸ್ ಚಾಲಕ ಸಾವು

1 min read

ಕರ್ತವ್ಯದಲಿದ್ದ ಕೆಎಸ್ಆರ್ ಟಿಸಿ ಬಸ್ಸಿನ ಚಾಲಕನಿಗೆ ಹೃದಯಾಘಾತ ನಿಧನರಾದ ಘಟನೆ ಮೂಡಿಗೆರೆ ತಾಲೂಕಿನ ಗುತ್ತಿಹಳ್ಳಿಯ ಹೆಸ್ಗೋಡ್ ಗ್ರಾಮಕ್ಕೆ ಹೋಗುವ ದಾರಿ ಮಧ್ಯೆ ನಡೆದಿದೆ.

ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಎದೆ ನೋವು ಕಾಣಿಸಿಕೊಂಡಿದ್ದು ಈ ವೇಳೆ ರಸ್ತೆ ಮಧ್ಯೆ ಬಸ್ ನಿಲ್ಲಿಸಿದ ಚಾಲಕ ಸಮಯ ಪ್ರಜ್ಞೆ ಮೆರೆದಿದ್ದಾನೆ, ಆದರೆ ಹೃದಯಾಘಾತಕ್ಕೆ ಒಳಗಾದ ರವಿ ಲಮಾಣಿಯವರು ಆಸ್ಪತ್ರೆಗೆ ಕರೆ ದೊಯ್ಯುವ ವೇಳೆ ಸಾವನ್ನಪ್ಪಿದರು, ಮೂಡಿಗೆರೆ ತಾಲ್ಲೂಕಿನ ಹೆಸಗೊಡ್ ಗ್ರಾಮದಲ್ಲಿ ನಡೆದ ಘಟನೆ ನಡೆದಿದ್ದು . ಕೊಪ್ಪಳದ ಕೂಕ್ನೂರ್ ಗ್ರಾಮದ ನಿವಾಸಿ ರವಿ ಲಮಾಣಿ ಎಂದು ಗುರುತಿಸಲಾಗಿದೆ, ಘಟನೆ ಸಂಬಂಧ ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಾಲಕನಿಗೆ ಎದೆ ನೋವು ಕಾಣಿಸಿಕೊಳ್ಳುತ್ತಿದ್ದಂತೆ ಬಸ್ ನಿಲ್ಲಿಸಿದ್ದು ಈ ವೇಳೆ ಪ್ರಯಾಣಿಕರು ಆತನಿಗೆ ಪ್ರಥಮ ಚಿಕಿತ್ಸೆ ಕೊಟ್ಟಿದ್ದಾರೆ, ಆದರೂ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮಾರ್ಗ ಮಧ್ಯದಲ್ಲಿ ಆತ ಮೃತಪಟ್ಟಿದ್ದಾನೆ, ಬಸ್ಸಿನಲ್ಲಿ 40 ಕ್ಕೂ ಹೆಚ್ಚು ಪ್ರಯಾಣಿಕರು ಸಂಚರಿಸುತ್ತಿದ್ದು ಎಂದು ತಿಳಿದು ಬಂದಿದ್ದು ಎಲ್ಲರೂ ನಿಟ್ಟುಸಿರು ಬಿಟ್ಟದ್ದಾರೆ

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!