May 13, 2024

MALNAD TV

HEART OF COFFEE CITY

ಏಷ್ಯನ್ ಗೇಮ್ಸ್ ನಲ್ಲಿ ಚಿನ್ನದ ಪದಕ ಗೆದ್ದ ಕಾಫಿನಾಡಿನ ಕುವರಿ

1 min read

 

ಚಿಕ್ಕಮಗಳೂರು: ಕಾಫಿನಾಡಿನ ಕುವರಿ ರಕ್ಷಿತಾ ರಾಜು ಪ್ಯಾರಾ ಏಷ್ಯನ್ ಗೇಮ್ಸ್ ನಲ್ಲಿ ಚಿನ್ನದ ಪದಕ ಗೆದ್ದು ಜಿಲ್ಲೆಗೆ ಹೆಸರು ತಂದಿದ್ದಾರೆ.
ರಕ್ಷಿತಾ ರಾಜು ಮೂಡಿಗೆರೆ ತಾಲೂಕು ಗುಡ್ನಳ್ಳಿ ನಿವಾಸಿಯಾಗಿದ್ದು, ಚೀನಾದ ಹಾಂಗೌಜ್ ನಲ್ಲಿ ನಡೆದ ಏಷ್ಯನ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ.

1500 ಮೀಟರ್ ಓಟದಲ್ಲಿ ಚಿನ್ನ ಗೆದ್ದ ರಕ್ಷಿತಾ ರಾಜು, 5.21 ಸೆಕೆಂಡಿನಲ್ಲಿ 1500 ಮೀಟರ್ ಓಡಿದ್ದಾರೆ.

ಕಳೆದ ಬಾರಿ ಪ್ಯಾರೀಸ್ ನಲ್ಲಿ ನಡೆದ ಏಷ್ಯನ್ ಗೇಮ್ ನಲ್ಲಿ 5ನೇ ಸ್ಥಾನ ಪಡೆದಿದ್ದರು. ಆದರೆ ಈ ಬಾರಿ ಸತತ ಪ್ರಯತ್ನದಿಂದ ಚಿನ್ನದ ಪದಕ ಗೆದ್ದು ರಾಜ್ಯದಲ್ಲಿಯೇ ಹೆಸರು ಮಾಡಿದ್ದಾರೆ. ಸಂಬಂಧಿಕರು ರಕ್ಷಿತಾ ರಾಜು ಸಾಧನೆ ಬಗ್ಗೆ ಹರ್ಷ ವ್ಯಕ್ತಪಡಿಸಿದ್ದಾರೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!