May 18, 2024

MALNAD TV

HEART OF COFFEE CITY

ಆನೆ ದಾಳಿಗೆ ಕಾರ್ಮಿಕ ಬಲಿ, ತಿಂಗಳಲ್ಲಿ 2ನೇ ಪ್ರಕರಣ, ಸ್ಥಳೀಯರ ಆಕ್ರೋಶ

1 min read

ಒಂದು ತಿಂಗಳ ಅವಧಿಯಲ್ಲಿ ಆನೆ ದಾಳಿಗೆ ಇಬ್ಬರು ಪ್ರಾಣ ಕಳೆದುಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನಲ್ಲಿ ನಡೆದಿದೆ. ಮೂಡಿಗೆರೆ ತಾಲೂಕಿನ ಊರಬಗೆ ಗ್ರಾಮದಲ್ಲಿ ತೋಟದ ಕೆಲಸ ಮುಗಿಸಿ ಬರುತ್ತಿದ್ದ ಕಾರ್ಮಿಕ ಅರ್ಜುನ್ ಎಂಬುವರ ಮೇಲೆ ಆನೆ ದಾಳಿ ಮಾಡಿದ್ದು 45 ವರ್ಷದ ಅರ್ಜುನ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೂಡಿಗೆರೆ ತಾಲೂಕಿನ ಊರಬಗೆ, ಗೌಡಹಳ್ಳಿ ಭಾಗದಲ್ಲಿ ಐದು ಕಾಡಾನೆಗಳು ಬೀಡುಬಟ್ಟಿದ್ದು ಸ್ಥಳಿಯರು ಅರಣ್ಯ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಇದು ಅರಣ್ಯ ಇಲಾಖೆಯೇ ಮಾಡಿದ ಕೊಲೆ ಎಂದು ಸ್ಥಳಿಯರು ಅರಣ್ಯ ಇಲಾಖೆ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಹಳ್ಳಿಯ ಮುಖ್ಯ ರಸ್ತೆ ಬಳಿಯೇ ಆನೆ ದಾಳಿ ಮಾಡಿರುವುದರಿಂದ ಸ್ಥಳಿಯರು ಆತಂಕಕ್ಕೀಡಾಗಿದ್ದಾರೆ.

ಕಳೆದ ಆಗಸ್ಟ್ 25ರಂದು ಮೂಡಿಗೆರೆ ತಾಲೂಕಿನ ಹಾರ್ಗೋಡು ಗ್ರಾಮದ ಆನಂದ್ ದೇವಾಡಿಗ ಎಂಬುವರ ಮೇಲೆ ಆನೆ ದಾಳಿ ಮಾಡಿದ್ದು ಅವರು ಕೂಡ ಸ್ಥಳದಲ್ಲೇ ಸಾವನ್ನಪ್ಪಿದ್ದರು. ಅವರ ಮೃತದೇಹವನ್ನ ಆನೆ ಕಾಡಿನಲ್ಲಿ ಸುಮಾರು ಒಂದು ಕಿ.ಮೀ. ಎಳೆದುಕೊಂಡು ಹೋಗಿದ್ದ ಪರಿಣಾಮ ದೇಹದ ಅಂಗಾಂಗಗಳು ಕಾಡಿನಲ್ಲಿ ಚದುರಿ ಹೋಗಿದ್ದವು. ಇಂದು ಕೂಡ ತೋಟದ ಕೆಲಸ ಮುಗಿಸಿ ಬರುತ್ತಿದ್ದ ಕಾರ್ಮಿಕನ ಮೇಲೆ ಆನೆ ದಾಳಿ ಮಾಡಿದ್ದು ಆತ ಕೂಡ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಸ್ಥಳಿಯರು ಅರಣ್ಯ ಅಧಿಕಾರಿಗಳ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಗೋಣಿಬೀಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!