May 15, 2024

MALNAD TV

HEART OF COFFEE CITY

ವಿಶ್ವಜನಸಂಖ್ಯಾ ದಿನಾಚರಣೆ ಜಾಗೃತಿ ಜಾಥಾಕ್ಕೆ ಚಾಲನೆ

1 min read

ಚಿಕ್ಕಮಗಳೂರು: ಜನಸಂಖ್ಯೆ ಪ್ರತಿದಿನ ಏರುಗತಿಯಲ್ಲಿ ಸಾಗುತ್ತಿದ್ದು, ಇದರಿಂದ ಪ್ರತಿಯೊ ಬ್ಬರಿಗೂ ಮೂಲಭೂತ ಅವಶ್ಯಕತೆಗಳು ಸಮಾನವಾಗಿ ದೊರಕುತ್ತಿಲ್ಲ. ಈ ನಿಟ್ಟಿನಲ್ಲಿ ಜನ ಸಂಖ್ಯಾ ಉಲ್ಬಣದಿಂದ ಆಗುವ ಸಮಸ್ಯೆಗಳ ಬಗ್ಗೆ ಜನಸಾಮಾನ್ಯರಲ್ಲಿ ಜಾಗೃತಿ ಮೂಡಿಸು ವುದು ಸರ್ಕಾರದ ಕರ್ತವ್ಯವಾಗಿದ್ದು, ಜನಸಾಮಾನ್ಯರು ಸಹ ಇದರ ಬಗ್ಗೆ ತಿಳಿದುಕೊಳ್ಳು ವುದು ಅತ್ಯವಶ್ಯಕವಾಗಿದೆ ಎಂದು ಜಿಲ್ಲಾ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎ.ಎಸ್.ಸೋಮ ಹೇಳಿದರು.
 ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆಸ್ಪತ್ರೆ ಸಂಯುಕ್ತಾಶ್ರಯದಲ್ಲಿ ನಡೆದ ವಿಶ್ವಜನಸಂಖ್ಯಾ ದಿನಾಚರಣೆ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ವಿಶ್ವಸಂಸ್ಥೆಯು 1990ರಲ್ಲಿ ಜನಸಂಖ್ಯೆಗೆ ಅನುಗುಣವಾಗಿ ಮೂಲಭೂತ ಸೌಕರ್ಯಗಳ ಕೊರತೆಯನ್ನು ಗಮನದಲ್ಲಿಟ್ಟುಕೊಂಡು, ಪ್ರತಿ ವರ್ಷ ಜುಲೈ 11ರಂದು ವಿಶ್ವ ಜನಸಂಖ್ಯಾ ದಿನಾಚರಣೆನ್ನು ಆಚರಿಸಿ ಜನರಲ್ಲಿ ಜನಸಂಖ್ಯೆ ಏರಿಕೆಯಿಂದ ಉಂಟಾಗುವ ಪರಿಣಾಮಗಳ ಬಗ್ಗೆ ಜಾಗೃತಿಯನ್ನು ಮೂಡಿಸಲಾಗುತ್ತಿದೆ ಎಂದರು.
ಪ್ರಸಕ್ತ ವರ್ಷ ಕುಟುಂಬ ಯೋಜನೆಯ ಉಪಾಯಗಳನ್ನು ನಮ್ಮದಾಗಿಸಿ ಹೊಸ ಅಧ್ಯಾಯ ಬರೆಯೋಣ ಎಂಬ ಘೋಷವಾಕ್ಯದೊಂದಿಗೆ ಜನಸಂಖ್ಯಾ ದುಷ್ಪರಿಣಾಮಗಳ ಬಗ್ಗೆ ಮನೆ ಮನೆಗೂ ಜಾಗೃತಿಯನ್ನು ಮೂಡಿಸಲು ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂ ದರು.

ಅಪರ ಜಿಲ್ಲಾಧಿಕಾರಿ ಬಿ.ಆರ್.ರೂಪ ಮಾತನಾಡಿ, ಅತಿಯಾಗಿ ಹೆಚ್ಚುತ್ತಿರುವ ಜನಸಂಖ್ಯೆ ಯನ್ನು ನಿಯಂತ್ರಣ ಮಾಡಲು ಸರ್ಕಾರ ಹಮ್ಮಿಕೊಂಡಿರುವ ಕಾರ್ಯಕ್ರಮಗಳ ಬಗ್ಗೆ ಹಾಗೂ ಜನಸಾಮಾನ್ಯರು ಉತ್ತಮವಾದ ಬದುಕನ್ನು ಕಟ್ಟಿಕೊಳ್ಳಲು ನೀಡಲಾಗುತ್ತಿರುವ ಸೌಲಭ್ಯಗಳ ಬಗ್ಗೆ ನಾಗರಿಕರಲ್ಲಿ ತಿಳಿವಳಿಕೆಯನ್ನು ಮೂಡಿಸುವ ಉದ್ದೇಶದಿಂದ ಜನಸಂಖ್ಯಾ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದರು.
ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ|ಅಶ್ವಥ್ ಬಾಬು ಕುಟುಂಬ ಯೋಜನೆಯಡಿಯಲ್ಲಿ ದೊರೆಯುವ ಸವಲತ್ತುಗಳು ಹಾಗೂ ಅದರ ಸದುದ್ದೇಶವನ್ನು ಜನರಿಗೆ ಮನದಟ್ಟು ಮಾಡು ವ ಜೊತೆಗೆ ಜನಸಂಖ್ಯೆ ಏರಿಕೆಯಿಂದ ಉದ್ಭವಿಸುವ ಅಡ್ಡ ಪರಿಣಾಮಗಳ ಬಗ್ಗೆ ಜನರಲ್ಲಿ ಜಾಥಾ ಕಾರ್ಯಕ್ರಮದ ಮೂಲಕ ಅರಿವು ಮೂಡಿಸಲಾಗುತ್ತದೆ ಎಂದರು. ಕಾರ್ಯಕ್ರಮದಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿ ಡಾ|ಸೀಮಾ ಇತರೆ ಅಧಿಕಾರಿಗಳು ಇದ್ದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!