May 1, 2024

MALNAD TV

HEART OF COFFEE CITY

ಕೋಡಿ ಹಳ್ಳಿ ಚಂದ್ರಶೇಖರ್ ಲೆಕ್ಕಪತ್ರ ಬಹಿರಂಗಪಡಿಸಲಿ

1 min read

ಚಿಕ್ಕಮಗಳೂರು: ರಾಜ್ಯಾದ್ಯಂತ ವಿಂಗಡಣೆಯಾಗಿರುವ ರಾಜ್ಯರೈತ ಸಂಘಟನೆಗಳನ್ನು ಒಗ್ಗೂ ಡಿಸುವ ಪ್ರಯತ್ನ ಮಾಡುವುದಾಗಿ ಕರ್ನಾಟಕ ರಾಜ್ಯ ರೈತಸಂಘ ಹಾಗೂ ಹಸಿರು ಸೇನೆ ರಾಜ್ಯಾಧ್ಯಕ್ಷ ಎಚ್.ಆರ್.ಬಸವರಾಜಪ್ಪ ತಿಳಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಾರಣಾಂತಗಳಿoದ ರೈತ ಸಂಘ ವಿಂಗಡಣೆಯಾಗಿದೆ. ಎಲ್ಲಾ ಸಂಘಟನೆಗಳನ್ನು ಒಂದು ವೇದಿಕೆಗೆ ತಂದು ರೈತ ಸಂಘವನ್ನು ಮೊದಲ ಸ್ಥಿತಿಗೆ ತರುವ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಹೇಳಿದರು.ಹಿಂದಿನ ಅಧ್ಯಕ್ಷರಾದ ಕೋಡಿಹಳ್ಳಿ ಚಂದ್ರಶೇಖರ್ ಅವರ ಮೇಲೆ ಭ್ರಷ್ಟಚಾರದ ಆರೋಪ ಕೇಳಿಬಂದ ತಕ್ಷಣ ತುರ್ತುಸಭೆ ನಡೆಸಿ ಅವರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲಾಗಿದೆ. ತಮ್ಮನ್ನು ಸರ್ವಾನುಮತದಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡಲಾಗಿದೆ ಎಂದರು.ಕೋಡಿಹಳ್ಳಿ ಚಂದ್ರಶೇಖರ್ ಅವರು ಅನೇಕ ಬಾರೀ ಸಂಘದ ಲೆಕ್ಕಪತ್ರಗಳನ್ನು ಕೇಳಿದಾಗ ಅವರು ಸಮರ್ಪಕ ಉತ್ತರ ನೀಡುತ್ತಿರಲಿಲ್ಲ, ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದರು. ಅವರ ನಡೆಯಿಂದ ಅನೇಕರು ಸಂಘಟನೆ ತೊರೆದಿದ್ದಾರೆ ಎಂದು ತಿಳಿಸಿದರು.

ರೈತ ಸಂಘಟನೆ ಕುಟುಂಬದ ವ್ಯವಹಾರವಲ್ಲ. ಸಾರ್ವಜನಿಕ ಸಂಘಟನೆಯಾಗಿದ್ದು ಕೋಡಿ ಹಳ್ಳಿ ಚಂದ್ರಶೇಖರ್ ಅವರು ಸಂಘದ ಲೆಕ್ಕಪತ್ರಗಳನ್ನು ಬಹಿರಂಗಪಡಿಸಬೇಕು. 40ಲಕ್ಷ ರೂ. ಮೌಲ್ಯದ ಕಾರು ಹೊಂದಿದ್ದು, ಬೆಂಗಳೂರಿನಲ್ಲಿ 45ಲಕ್ಷ ರೂ. ವೆಚ್ಚದಲ್ಲಿ ಕಚೇರಿಯನ್ನು ತೆರೆದಿ ದ್ದರು. ಸಾಲಮನ್ನಾ ಅರ್ಜಿ ಸಂಗ್ರಹಿಸಿದ ಹಣ ಏನಾಯ್ತು ಇದೆಲ್ಲವನ್ನು ಬಹಿರಂಗ ಪಡಿಸ ಬೇಕು ಎಂದು ಆಗ್ರಹಿಸಿದರು.ಕೋಡಿಹಳ್ಳಿ ಚಂದ್ರಶೇಖರ್ ಅವರು ಲೆಕ್ಕಪತ್ರವನ್ನು ಬಹಿರಂಗಪಡಿಸಿ ಹಸಿರು ಟಾವಲ್ ಹಾಕಿ ಕೊಳ್ಳಲಿ. ನೂರಾರು ಜನರ ಬಲಿದಾನದಿಂದ ಹುಟ್ಟಿದ ಸಂಘಟನೆ, ಯಾರ ಸ್ವತ್ತಲ್ಲ, ಸಂಘಟನೆ ಮೇಲೆ ಗೌರವಿದ್ದರೇ ಹಸಿರು ಟಾವಲ್ ತೆಗೆದಿಟ್ಟು ಆರೋಪ ಮುಕ್ತರಾಗಿ ಬರಲಿ ಎಂದು ತಿಳಿಸಿದರು.
ಕೋಡಿಹಳ್ಳಿ ಚಂದ್ರಶೇಖರ್ ಮೇಲೆ ಗುರುತರ ಆರೋಪ ಬಂದಿರುವ ಹಿನ್ನಲೆಯಲ್ಲಿ ರೈತ ಸಂಘ ಡಾ|ಚಿಕ್ಕಸ್ವಾಮಿ ಅಧ್ಯಕ್ಷತೆಯಲ್ಲಿ ಸತ್ಯಶೋಧನ ಸಮಿತಿಯನ್ನು ರಚಿಸಿದೆ. ಈ ಸಮಿತಿ ಪರಿಶೀಲನೆ ನಡೆಸಿ ವರದಿ ನೀಡಲಿದೆ ಎಂದರು.

ರಾಜ್ಯ ಸರ್ಕಾರ ರೋಹಿತ್ ಚಕ್ರತೀರ್ಥ ನೇತೃತ್ವದ ಸಮಿತಿ ನೀಡಿರುವ ಪಠ್ಯವನ್ನು ಪರಿಷ್ಕರಣೆ ಮಾಡುವುದಾಗಿ ಹೇಳಿದ್ದಾರೆ. ಅದು ಪರಿಪೂರ್ಣವಾಗಿಲ್ಲ, ಅನೇಕ ವಿಚಾರಗಳ ಪರಿಷ್ಕರಣೆ ಅಗತ್ಯವಿದೆ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿಗಳು ತಕ್ಷಣ ಕ್ರಮಕೈಗೊಳ್ಳಬೇಕು ಇಲ್ಲದಿದ್ದಲ್ಲಿ ಹೋ ರಾಟ ರೂಪಿಸುವುದಾಗಿ ತಿಳಿಸಿದರು.
ಕೇಂದ್ರ ಸರ್ಕಾರದಂತೆ ರಾಜ್ಯದಲ್ಲಿ ಭೂ ಸುಧಾರಣೆ ಕಾಯ್ದೆ, ಎಪಿಎಂಸಿ ಕಾಯ್ದೆ, ಭೂ ಸ್ವಾಧೀನ ಕಾಯ್ದೆಗಳನ್ನು ರದ್ದುಪಡಿಸಬೇಕು. ಒಂದು ವೇಳೆ ತಪ್ಪಿದಲ್ಲಿ ಎಲ್ಲಾ ಸಂಘಟನೆಗಳನ್ನು ಒಗ್ಗೂ ಡಿಸಿ ದೆಹಲಿ ಮಾದರಿಯಲ್ಲಿ ಪ್ರತಿಭಟನೆ ಹಮ್ಮಿಕೊಳ್ಳುವುದಾಗಿ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
ರಸಗೊಬ್ಬರ ದಾಸ್ತಾನು ಮಗಳಿಗೆಗಳಲ್ಲಿ ರೈತರಿಗೆ ಅನ್ಯಾಯವಾಗುತ್ತಿದೆ. ಕಳಪೆ ರಸಗೊಬ್ಬರ ವಿತರಣೆ ಮಾಡಲಾಗುತ್ತಿದೆ. ಪ್ರತೀ ರಸಗೊಬ್ಬರ ಮಾರಾಟ ಮಳಿಗೆಗಳಲ್ಲಿ ದರಪಟ್ಟಿ, ದಾಸ್ತಾ ನು ಪಟ್ಟಿಯನ್ನು ಹಾಕಬೇಕು. ತೂಕಮಾಡಿ ರಸಗೊಬ್ಬರವನ್ನು ರೈತರಿಗೆ ವಿತರಣೆ ಮಾಡಬೇಕು ಎಂದು ಆಗ್ರಹಿಸಿದರು.

ಕರ್ನಾಟಕ ರೈತ ಸಂಘ ಮತ್ತು ಹಸಿರು ಸೇನೆ ಜಿಲ್ಲಾಧ್ಯಕ್ಷ ಡಿ.ಆರ್.ದುಗ್ಗಪ್ಪಗೌಡ ಮಾತನಾಡಿ, ರಸಗೊಬ್ಬರ ಮಾರಾಟ ಮಳಿಗೆಯವರು ಮತ್ತು ಕೃಷಿ ಇಲಾಖೆಯವರು ಶಾಮೀಲಾಗಿದ್ದಾರೆ. ಇದರಿಂದ ರೈತರಿಗೆ ಗುಣಮಟ್ಟದ ರಸಗೊಬ್ಬರ ದೊರೆಯುತ್ತಿಲ್ಲ. ಸರ್ಕಾರ ಇದಕ್ಕೆ ಕಡಿವಾಣ ಹಾಕಬೇಕು ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಕಡೂರು ತಾಲ್ಲೂಕು ಅಧ್ಯಕ್ಷ ನಿರಂಜನ್ ಮೂರ್ತಿ, ಚಿಕ್ಕಮಗಳೂರು ತಾಲ್ಲೂಕು ಅಧ್ಯಕ್ಷ ಹುಣಸೇಗೌಡ, ತರೀಕೆರೆ ತಾಲ್ಲೂಕು ಅಧ್ಯಕ್ಷ ಓಂಕಾರಮೂರ್ತಿ, ಬಸವ ರಾಜ್, ಮಂಜೇಗೌಡ ಸೇರಿದಂತೆ ಅನೇಕರು ಇದ್ದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!