May 20, 2024

MALNAD TV

HEART OF COFFEE CITY

ಕುಮಾರಸ್ವಾಮಿ ಜೊತೆ ಸಿದ್ದರಾಮಯ್ಯನವರು ದತ್ತಪೀಠಕ್ಕೆ ಬರಲಿ; ಮಾಜಿ ಶಾಸಕ ಸಿ.ಟಿ.ರವಿ

1 min read

ಚಿಕ್ಕಮಗಳೂರು: ಕುಮಾರಸ್ವಾಮಿ ಜೊತೆ ಸಿದ್ದರಾಮಯ್ಯನವರು ದತ್ತಪೀಠಕ್ಕೆ ಬರಲಿ ಎಂದು ಸಿಎಂ ಸಿದ್ದರಾಮಯ್ಯನವರಿಗೆ ಮಾಜಿ ಶಾಸಕ ಸಿ.ಟಿ.ರವಿ ಮನವಿ ಮಾಡಿದ್ದಾರೆ. ನಗರದಲ್ಲಿ ಸುದ್ದಿಗಾರೊಂದಿಗೆ ಮಾತಾನಾಡಿದ ಅವರು ಹಿಂದು ಎಂದು ಹೇಳಿಕೊಳ್ಳಲು ಗರ್ವ ಪಡಬೇಕು, ಸಮಾಜ ಇದನ್ನೇ ಕೇಳೋದು ಮಾಜಿ ಸಿಎಂ ಹೆಚ್ಡಿಕೆ ಹೇಳಿಕೆ ಸಿಎಂ ಸಿದ್ದರಾಮಯ್ಯನವರಿಗೂ ಮಾದರಿ ಎಂದರು.
ಸಿದ್ದರಾಮಯ್ಯ ಅವರು ನಾನು ಹಿಂದೂ ಅಲ್ವಾ, ನನ್ನ ಹೆಸರಲ್ಲೇ ಸಿದ್ರಾಮ ಇದ್ದಾನೆ ಎಂದಿದ್ದಾರೆ. ನೀವು ಮಾಲೆ ಹಾಕಿಕೊಂಡು ಬಂದರೆ ನಮ್ಮ ಸತ್ಯದ ಹೋರಾಟಕ್ಕೆ ಬಲ ಬರಲಿದೆ.ನೀವು ಮಾಲೆ ಹಾಕಿದೆ ಮೇಲೆ ಜಮೀರ್ ಅವರು ಮಾಲೆ ಹಾಕೇ ಹಾಕುತ್ತಾರೆ. ಆಗ 5 ದಶಕದ ಹೋರಾಟಕ್ಕೆ ಬಲ ಬರುತ್ತೆ, ಸತ್ಯವನ್ನ ಎತ್ತಿ ಹಿಡಿದಂತಾಗುತ್ತೆ. ನಮ್ಮ ಧರ್ಮದ ಪ್ರಕಾರ ನಡೆದುಕೊಳ್ಳಲು ಯಾರಿಗೆ ಏಕೆ ಹೆದರಬೇಕು ಎಂದು ತಿಳಿಸಿದರು.
ಯಾರೂ ಎಲೆಕ್ಷನ್ ಟೈಂ ಹಿಂದೂಗಳಾಗಬಾರದು, ಜೀವನ ಪರ್ಯಂತ ಹಿಂದೂಗಳಾಬೇಕು. ಹಿಂದುತ್ವದ ವಿಚಾರ ಬಂದಾಗ ಹಿಂದೆ ನೋಡಲೇಬಾರದು, ಮುಂದಕ್ಕೆ ನೋಡಬೇಕು, ಸಿದ್ದರಾಮಯ್ಯನವರು ಬರಲಿ ಎಂದು ಮನವಿ ಮಾಡುತ್ತೇನೆ ಎಂದು ಚಿಕ್ಕಮಗಳೂರಿನಲ್ಲಿ ಮಾಜಿ ಶಾಸಕ ಸಿ.ಟಿ.ರವಿ ಹೇಳಿದ್ದಾರೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!