May 15, 2024

MALNAD TV

HEART OF COFFEE CITY

ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆರಂಭವಾದ ಎಲ್.ಕೆ.ಜಿ ಮತ್ತು ಯು.ಕೆ.ಜಿ

1 min read
lkg-and-ukg-started-in-govt-senior-primary-school

ಚಿಕ್ಕಮಗಳೂರು – ಹೌಸಿಂಗ್‌ಬೋರ್ಡ್ ನಲ್ಲಿ ಇರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇದೇ ತಿಂಗಳ 16 ರಂದು ನೂತನವಾಗಿ ಪ್ರಾರಂಭವಾದ ಎಲ್.ಕೆ.ಜಿ ಮತ್ತು ಯು.ಕೆ.ಜಿ ತರಗತಿಗಳನ್ನು ನಗರಸಭೆ ಸದಸ್ಯೆ ಕವಿತಾಶೇಖರ್ ಹಾಗೂ ಕ್ಷೇತ್ರ ಸಮನ್ವಯಾಧಿಕಾರಿ ಜಯರಾಂ ಉದ್ಘಾಟಿಸಿದರು.
ಶಾಲಾ ಮುಖ್ಯ ಶಿಕ್ಷಕ ಹೆಚ್.ಜಿ.ಶ್ರೀನಿವಾಸ್ ಮಾತನಾಡಿ ಬಹುದಿನಗಳ ಪೋಷಕರ ಹಾಗೂ ಎಸ್.ಡಿ.ಎಂ ರವರ ಒತ್ತಾಯದ ಮೇರೆಗೆ ಎಲ್.ಕೆ.ಜಿ ಮತ್ತು ಯುಕೆಜಿ ಯನ್ನು ಪ್ರಾರಂಭಿಸಲಾಗಿದೆ, ಎಲ್ಲರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು, ಈಗಾಗಲೇ 1 ರಿಂದ 5ನೇ ತರಗತಿ ವರೆಗೆ ಆಂಗ್ಲಮಾದ್ಯಮ ತರಗತಿಗಳು ನಡೆಯುತ್ತಿದ್ದು, ಈ ಶಾಲೆಯು ಉತ್ತಮ ಶೈಕ್ಷಣಿಕ ವಾತಾವರಣವನ್ನು ಹೊಂದಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಶಿಕ್ಷಣ ಸಂಯೋಜಕರಾದ ಜಾನಕಿ, ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!