May 2, 2024

MALNAD TV

HEART OF COFFEE CITY

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಜೂ.24ರಂದು ಪ್ರತಿಭಟನೆ

1 min read

ಚಿಕ್ಕಮಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಜೂ.24ರಂದು ದಲಿತ ಸಂಘರ್ಷ ಸಮಿತಿ ವತಿಯಿಂದ ಜಿಲ್ಲಾ ಕೇಂದ್ರದಲ್ಲಿ ಪ್ರತಿಭಟನಾ ಧರಣಿ ಹಮ್ಮಿಕೊಂಡಿರುವು ದಾಗಿ ಸಮಿತಿ ಜಿಲ್ಲಾ ಪ್ರಧಾನ ಸಂಚಾಲಕ ಮರ್ಲೆ ಅಣ್ಣಯ್ಯ ತಿಳಿಸಿದರು.
ಬುಧವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರೋಹಿತ್ ಚಕ್ರತೀರ್ಥ ಪಠ್ಯ ಪರಿಷ್ಕರಣಾ ಸಮಿತಿ ನೀಡಿರುವ ಪಠ್ಯ ಪುಸ್ತಕವನ್ನು ರದ್ದುಪಡಿಸಬೇಕು. ಈ ಹಿಂದಿನ ಪಠ್ಯ ಪುಸ್ತಕಗಳನ್ನು ವಿದ್ಯಾರ್ಥಿಗಳಿಗೆ ನೀಡಬೇಕು. ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ಕಾಯ್ದಿರಿಸಿರುವ ಎಸ್‌ಸಿಎಸ್‌ಪಿ, ಟಿಎಸ್‌ಪಿ ದುರುಪಯೋಗವನ್ನು ತಡೆಗಟ್ಟಬೇಕು. ಕಾಯ್ದೆ ಯಲ್ಲಿರುವ ಸೆಕ್ಷನ್ 7(ಡಿ) ರದ್ದುಪಡಿಸಬೇಕು ಎಂದು ಒತ್ತಾಯಿಸಿದರು.
ಅಕ್ರಮ ಒತ್ತುವರಿ ಭೂಮಿಯನ್ನು ತೆರವುಗೊಳಿಸಿ ಭೂ ಹೀನರಿಗೆ ನೀಡಬೇಕು. ಯಾವುದೇ ಕಾರಣಕ್ಕೂ ಗುತ್ತಿಗೆ ನೀಡಬಾರದು. ಪಿಟಿಸಿಎಲ್ ಕಾಯ್ದೆ ತಿದ್ದುಪಡಿಯಾಗಬೇಕು. ಈಗಾಗಲೇ ನ್ಯಾಯಾಲಗಳಲ್ಲಿರುವ ಪರಿಶಿಷ್ಟರ ವಿರುದ್ಧ ನೀಡಿರುವ ತೀರ್ಪುಗಳು ರದ್ದುಪಡಿಸಬೇಕೆಂದು ಆಗ್ರಹಿಸಿದರು.
ಸುಳ್ಳು ಜಾತಿ ಪ್ರಮಾಣಪತ್ರಗಳನ್ನು ರದ್ದುಪಡಿಸಬೇಕು. ಸುಳ್ಳು ಜಾತಿ ಪ್ರಮಾಣಪತ್ರ ಪಡೆದ ವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ನ್ಯಾ|ನಾಗಮೋಹನದಾಸ್ ವರದಿಯಂತೆ ಮೀಸಲಾತಿ ಪ್ರಮಾಣ ಹೆಚ್ಚಿಸಬೇಕು. ಸರ್ಕಾರ ನೇಮಿಸಿರುವ ಮೀಸಲಾತಿ ಹೆಚ್ಚಳಕ್ಕೆ ಸಂಬoಧಿಸಿದoತೆ ನ್ಯಾ| ಸುಭಾಷ್ ಅಡಿಯವರ ಶಿಫಾರಸ್ಸು ಅಂತಿಮಗೊoಡಿದ್ದು ಸರ್ಕಾರ ಕೂಡಲೇ ಸ್ವೀಕರಿಸಬೇಕು ಎಂದು ತಿಳಿಸಿದರು.
ಪರಿಶಿಷ್ಟ ಜಾತಿ ಮತ್ತು ವರ್ಗದವರ ಮೇಲಾಗುತ್ತಿರು ದೌರ್ಜನ್ಯಗಳನ್ನು ತಡೆಗಟ್ಟಲು ವಿಫಲವಾಗಿರುವ ಪೊಲೀಸ್ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಬೇಕು. ಇಲಾಖೆಯನ್ನು ಸಂವೇದನಶೀಲಗೊಳಿಸಬೇಕು. ಪೌರ ಕಾರ್ಮಿಕರನ್ನು ಖಾಯಂಗೊಳಿಸ ಬೇಕು. ವಸತಿರಹಿತ ಬಡವರಿಗೆ ಉಚಿತ ವಸತಿ ಸೌಲಭ್ಯಗಳನ್ನು ಕಲ್ಪಿಸಬೇಕು. ಕರಾವಳಿ, ಉಡುಪಿ, ಮಂಗಳೂರು ಜಿಲ್ಲೆಗಳಲ್ಲಿ ಪರಿಶಿಷ್ಟರಿಗೆ ಮೀಸಲಿಟ್ಟ ಡಿ.ಸಿ. ಮನ್ನಾ ಭೂಮಿಯನ್ನು ಆ ವರ್ಗದ ಭೂ ಹೀನರಿಗೆ ನೀಡಬೇಕು ಎಂದು ತಿಳಿಸಿದರು.
ಚಿಕ್ಕಮಗಳೂರು ಜಿ.ಪಂ.ಬಿಲ್ ಕಲೆಕ್ಟರ್‌ನ್ನು ಕಾರ್ಯದರ್ಶಿ ಎಸ್‌ಡಿಎ ಹುದ್ದೆಗೆ ಬ್ಯಾಕ್ ಲಾಗ್ ತುಂಬಲು ಸರ್ಕಾರದ ಆದೇಶವಿದ್ದರು ನೇಮಕಾತಿ ಮಾಡಿಕೊಳ್ಳುತ್ತಿಲ್ಲ ತಕ್ಷಣ ನೇಮ ಕಾತಿ ಮಾಡಿಕೊಳ್ಳಬೇಕು. ತರೀಕೆರೆ ತಾಲ್ಲೂಕು ಎಚ್.ರಂಗಾಪುರ ಗ್ರಾಮದ ಸರ್ವೇ ನಂ.14 ರಲ್ಲಿ 57 ಎಕರೆ 17ಗುಂಟೆ ಪೈಕಿ 15 ಎಕರೆ ನಿವೇಶನ ರಹಿತರಿಗೆ ನಿವೇಶನ ಹಾಗೂ ಹಕ್ಕುಪತ್ರ ನೀಡುವಂತೆ ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ರಮೇಶ್ ಉದ್ದೇಬೋರನಹಳ್ಳಿ, ರಾಮಚಂದ್ರ ಎಂ.ಸಿ.ಹಳ್ಳಿ, ಮಂಜು ನಾಥ್, ಆದಿಕೆರೆ ರಾಜು ಸೇರಿದಂತೆ ಅನೇಕರು ಇದ್ದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!