May 4, 2024

MALNAD TV

HEART OF COFFEE CITY

ವಿವಿಧ ಬೇಡಿಕೆಗೆ ಆಗ್ರಹಿಸಿ ಗ್ರಾ.ಪಂ ನೌಕರರ ಪ್ರತಿಭಟನೆ

1 min read

ಚಿಕ್ಕಮಗಳೂರು: ಗ್ರಾಮ ಪಂಚಾಯತ್‍ಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಸಿಬ್ಬಂದಿಗಳ ವಿವಿ ಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಗ್ರಾಮ ಪಂಚಾಯತ್ ನೌಕರರ ಫೆಡರೇ ಷನ್ ವತಿಯಿಂದ ನಗರದ ಜಿಲ್ಲಾ ಪಂಚಾಯತ್ ಮುಂಭಾಗಪ್ರತಿಭಟನೆ ನಡೆಸಿದರು.

ನಗರದ ಜಿಲ್ಲಾ ಪಂಚಾಯತ್ ಮುಂಭಾಗ ಜಮಾವಣೆಗೊಂಡ ಕಾರ್ಯಕರ್ತರು ಮತ್ತು ಮುಖಂಡರು ರಾಜ್ಯ ಸರ್ಕಾರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯದ 6ಸಾವಿರ ಗ್ರಾಮ ಪಂಚಾಯತ್‍ಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಸಿಬ್ಬಂದಿಗಳು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದು, ಈ ಸಂಬಂಧ ಪ್ರತಿಭಟನೆ ನಡೆಸಲಾಗಿತ್ತು. ಸರ್ಕಾ ರ ಅನೇಕ ಆದೇಶಗಳನ್ನು ಹೊರಡಿಸಿದ್ದರು ಅಧಿಕಾರಿಗಳ ನಿರ್ಲಕ್ಷ್ಯತನದಿಂದ ನೌಕರರು ಶೋಷಣೆಗೆ ಒಳಗಾಗುತ್ತಿದ್ದಾರೆ ಎಂದು ದೂರಿದರು.
2017ರಿಂದ ಸರ್ಕಾರ ಗ್ರಾಮ ಪಂಚಾಯತ್ ನೌಕರರಿಗೆ ನೇರವಾಗಿ ವೇತನ ನೀಡುತ್ತಿದೆ. 10 ನೌಕರರಿರುವ ಜಾಗದಲ್ಲಿ 3 ರಿಂದ 4 ನೌಕರರಿಗೆ ಮಾತ್ರ ವೇತನವನ್ನು ಬಿಡುಗಡೆ ಮಾಡು ತ್ತಿದೆ. ಉಳಿದ ನೌಕರರಿಗೆ 15 ರಿಂದ 20 ತಿಂಗಳ ವೇತನವನ್ನು ನೀಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಮುಕ್ತ ವಿಶ್ವವಿದ್ಯಾಲಯದಲ್ಲಿ ಶಿಕ್ಷಣ ಪಡೆದವರ ಗ್ರಾಮ ಪಂಚಾಯತ್ ನೌಕರರಾದ ವಾಟರ್ ಮ್ಯಾನ್, ಅಟೆಂಡರ್‍ಗಳು ಜಿಲ್ಲಾ ಪಂಚಾಯತ್ ಅಮುಮೋದನೆಗಾಗಿ 10ನೇ ತರಗತಿಅಂಕಪಟ್ಟಿಯನ್ನು ನೀಡಿದರೆ ಅದನ್ನು ನಿರಾಕರಿಸಿ ನೌಕರರಿಗೆ ವಂಚಿಸಲಾಗುತ್ತಿದೆ ಎಂದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!