May 4, 2024

MALNAD TV

HEART OF COFFEE CITY

ವಿಶಿಷ್ಟ ಗುರುತಿನ ಚೀಟಿ ಮೂಲಕ ಸರ್ಕಾರದ ಸೌಲಭ್ಯ: ಜಿಲ್ಲಾಧಿಕಾರಿ

1 min read

ಚಿಕ್ಕಮಗಳೂರು: ವಿಕಲಚೇತನರ ವಿಶಿಷ್ಟ ಗುರುತಿನ ಚೀಟಿ(ಯು.ಡಿ.ಐ.ಡಿ) ಮೂಲಕ ವಿಕಲಚೇತನರು ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ಪಡೆಯಬಹುದಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಹೇಳಿದರು.

ಚಿಕ್ಕಮಗಳೂರು ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ವಿಕಲಚೇತನ ಕಲ್ಯಾಣ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆಸ್ಪತ್ರೆ, ಜಿಲ್ಲಾ ವಿಕಲಚೇತನರ ಪುನರ್ ವಸತಿ ಕೇಂದ್ರ ಹಾಗೂ ವಿಕಲಚೇತನರ ಸಹಕಾರ ಸಂಘದ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಆಸ್ಪತ್ರೆಯಲ್ಲಿ ಶುಕ್ರವಾರ ನಡೆದ ವಿಕಲಚೇತನರ ವಿಶಿಷ್ಟ ಗುರುತಿನ ಚೀಟಿ(ಯು.ಡಿ.ಐ.ಡಿ), ವೈದ್ಯಕೀಯ ಶಿಬಿರವನ್ನು ಉದ್ಘಾಟಿಸಿ ಮಾತನಾಡಿ, ಯು.ಡಿ.ಐ.ಡಿ ಕೇಂದ್ರ ಸರ್ಕಾರದ ಈ ಮಹತ್ತರ ಯೋಜನೆಯಾಗಿದ್ದು ಈ ಮೂಲಕ ಪ್ರತಿಯೊಬ್ಬ ವಿಕಲಚೇತನ ಈ ಗುರುತಿನ ಚೀಟಿ ಪಡೆಯಬೇಕೆಂಬ ಆಶಯ ಇದೆ ಇದರೊಂದಿಗೆ ಸರ್ಕಾರದ ಸೌಲಭ್ಯಗಳು ಸುಲಭವಾಗಿ ಪಡೆಯಲು ಸಹಾಯಕವಾಗಲಿದೆ ಎಂದರು.
ಜಿಲ್ಲೆಯಲ್ಲಿ 14,752 ಮಂದಿ ವಿಕಲಚೇತನರಿದ್ದು, 9,962 ಮಂದಿಗೆ ಈಗಾಗಲೇ ವಿಶಿಷ್ಟ ಗುರುತಿನ ಚೀಟಿ ವಿತರಿಸಲಾಗಿದೆ. ವೈದ್ಯಕೀಯ ಶಿಬಿರದ ಮೂಲಕ ಸ್ಥಳದಲ್ಲಿ ವಿಕಲಚೇತನರಿಗೆ ವೈದ್ಯಕೀಯ ತಪಾಸಣೆ ನಡೆಸಿ ಗುರುತಿನ ಚೀಟಿ ನೀಡುತ್ತಿರುವುದು ಪರಿಣಾಮಕಾರಿಯಾಗಿದ್ದು, ಮುಂದೆ ಮೂಡಿಗೆರೆ ಹಾಗೂ ಶೃಂಗೇರಿಯಲ್ಲೂ ವೈದ್ಯಕೀಯ ಶಿಬಿರ ನಡೆಸುವುದಾಗಿ ಅವರು ತಿಳಿಸಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ಮಾತನಾಡಿ, ವಿಕಲಚೇತನರು ಹಿಂದೆ ಪ್ರತಿ ಯೊಜನೆಗೆ ವಿವಿಧ ಅರ್ಜಿ ಸಲ್ಲಿಸಬೇಕಾಗಿತ್ತು. ಈಗ ಸಮಗ್ರ ಮಾಹಿತಿಯುಳ್ಳ ಗಣಕೀಕೃತ ವಿಶಿಷ್ಟ ಗುರುತಿನ ಚೀಟಿ ಮೂಲಕ ಅರ್ಜಿ ಸಲ್ಲಿಸದೇ ವಿವಿಧ ಸೌಲಭ್ಯಗಳನ್ನು ಪಡೆಯಬಹುದಾಗಿದೆ. ಇಂದು 10 ಸಾವಿರ ಗುರುತಿನ ಚೀಟಿ ವಿತರಣೆಯ ಗುರಿಯನ್ನು ದಾಟಲಿದ್ದೇವೆ ಎಂದರು.
ಫೆ.27 ರಿಂದ ಮೂರು ದಿನಗಳ ಪಲ್ಸ್ ಪೋಲಿಯೋ ಲಸಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮೊದಲ ದಿನ ಬೂತ್ ಗಳಲ್ಲಿ ನಡೆಯಲಿದ್ದು, ಎರಡನೇ ಹಾಗೂ ಮೂರನೇ ದಿನ ಗ್ರಾಮೀಣಮತ್ತು ನಗರ ಪ್ರದೇಶಗಳಲ್ಲಿ ಮನೆ ಮನೆಗೆ ಹೋಗಿ ಲಸಿಕೆ ನೀಡಲಾಗುತ್ತದೆ ಎಂದು ತಿಳಿಸಿದರು.
ಸಮಾರಂಭದಲ್ಲಿ ಫಲಾನುಭವಿಗಳಿಗೆ ಜಿಲ್ಲಾಧಿಕಾರಿಗಳು ಗುರುತಿನ ಚೀಟಿ ವಿತರಿಸಿದರು. ಈ ಸಂಧರ್ಭದಲ್ಲಿ ಫೆ. 27 ರಂದು ನಡೆಯಲಿರುವ ಪಲ್ಸ್ ಪೋಲಿಯೋ ಅಭಿಯಾನದ ಬ್ಯಾನರನ್ನು ಸಹ ಉದ್ಘಾಟಿಸಲಾಯಿತು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಪದ್ಮಾವತಿ.ಜಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಉಮೇಶ್.ಎಸ್.ಎನ್, ಜಿಲ್ಲಾ ಸರ್ಜನ್ ಡಾ.ಮೋಹನ್ ಕುಮಾರ್, ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಚರಣ್‍ರಾಜ್ ಹಾಗೂ ಜಿಲ್ಲಾ ವಿಕಲಚೇತನ ಕಲ್ಯಾಣ ಇಲಾಖೆ ಸಿಬ್ಬಂದಿಗಳು ಇದ್ದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!