May 4, 2024

MALNAD TV

HEART OF COFFEE CITY

ನೀರಿನ ಟ್ಯಾಂಕ್ ಗೆ ಬಿದ್ದು ಬಾಲಕಿ ಸಾವು

1 min read

 

ಚಿಕ್ಕಮಗಳೂರು: ಆಟವಾಡುತ್ತಿದ್ದ ವೇಳೆ ಆಯತಪ್ಪಿ ನೀರಿನ ಟ್ಯಾಂಕ್ ಗೆ ಬಿದ್ದು ಏಳು ವರ್ಷದ ಬಾಲಕಿ ಮೃತಪಟ್ಟ ದುರ್ಘಟನೆ ಮೂಡಿಗೆರೆ ತಾಲೂಕಿನ ಇಂದ್ರಾವತಿ ಎಸ್ಟೇಟ್ ನಲ್ಲಿ ನಡೆದಿದೆ.ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಕೂವೆ ಗ್ರಾಮದ ಇಂದ್ರಾವತಿ ಎಸ್ಟೇಟ್ ನಲ್ಲಿ ಶನಿವಾರ ಈ ದುರಂತ ಸಂಭವಿಸಿದ್ದು, ಗೀತಾ- ಶೇಷಪ್ಪ ದಂಪತಿ ಪುತ್ರಿ ಪ್ರಾರ್ಥನಾ (7) ಮೃತ ದುರ್ದೈವಿ.ಬೆಳಗ್ಗೆ ಮನೆ ಎದುರಿಗೆ ಆಟವಾಡುತ್ತಿದ್ದ ಬಾಲಕಿ ಅಲ್ಲೇ ಸಮೀಪದಲ್ಲಿದ್ದ ನೀರಿನ ಟ್ಯಾಂಕ್​ಗೆ ಆಯತಪ್ಪಿ ಬಿದ್ದು ಕೊನೆಯುಸಿರೆಳೆದಿದ್ದಾಳೆ.

ಸ್ಥಳದಲ್ಲಿ ಮೃತ ಮಗುವಿನ ತಂದೆ ತಾಯಿಗಳು ಹಾಗೂ ಬಂಧುಗಳ ಆಕ್ರಂದನ ಮುಗಿಲು ಮುಟ್ಟಿದೆ.ಘಟನೆ ಸಂಬಂಧ ಬಾಳೂರು ಠಾಣೆಯಲ್ಲಿ ದೂರು ದಾಖಲಾಗಿದೆ

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!