May 4, 2024

MALNAD TV

HEART OF COFFEE CITY

ಪರಿಸರ ಸ್ವಚ್ಚತೆ ನಮ್ಮೆಲ್ಲರ ಆದ್ಯ ಕರ್ತವ್ಯವಾಗಬೇಕು_ವರಸಿದ್ದಿ ವೇಣುಗೋಪಾಲ್

1 min read

 

ಚಿಕ್ಕಮಗಳೂರು-ನಮ್ಮ ಆರೋಗ್ಯದ ಹಿತದೃಷ್ಟಿಯಿಂದ ನಾವು ವಾಸಿಸುವ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಚವಾಗಿಟ್ಟುಕೊಳ್ಳುವುದು ನಮ್ಮೆಲ್ಲರ ಕರ್ತವ್ಯವಾಗಬೇಕು ಎಂದು ನಗರಸಭೆ ಅಧ್ಯಕ್ಷ ವರಸಿದ್ದಿ ವೇಣುಗೋಪಾಲ್ ತಿಳಿಸಿದರು.ನಗರದ ಜಯನಗರದ ಸಾರ್ವಜನಿಕ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ಸ್ವಚ್ಚತಾ ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸಧೃಢವಾದ ಶರೀರದಲ್ಲಿ ಸಧೃಢವಾದ ಮನಸ್ಸು ಇರುತ್ತದೆ ಎಂಬ ಮಾತಿನಂತೆ ನಮ್ಮ ಆರೋಗ್ಯದ ದೃಷ್ಟಿಯಿಂದ ನಾವೆಲ್ಲರೂ ನಮ್ಮ ಸುತ್ತಮುತ್ತಲಿನ ಪರಿಸರವನ್ನು ನಿರ್ಮಲವಾಗಿಟ್ಟುಕೊಳ್ಳಬೇಕು. ಈ ದಿಸೆಯಲ್ಲಿ ಪ್ರತಿಯೊಬ್ಬರು ಸ್ವಯಂ ಪ್ರೇರಿತವಾಗಿ ಸ್ವಚ್ಚತಾ ಕಾರ್ಯದಲ್ಲಿ ತೊಡಗಿಕೊಳ್ಳಬೇಕು ಎಂದರು.

ಉತ್ತಮ ಆರೋಗ್ಯಕ್ಕೆ ಉತ್ತಮ ಹಾಗೂ ಸ್ವಚ್ಚವಾದ ಪರಿಸರ ಅಗತ್ಯ. ನಮ್ಮ ಮನೆ, ಶಾಲೆ, ವಸತಿ ನಿಲಯಗಳಲ್ಲಿ ವಿದ್ಯಾರ್ಥಿಗಳಿಂದಲೇ ಸ್ವಚ್ಚತಾ ಅಭಿಯಾನ ಆರಂಭಗೊಂಡಾಗ ಸಾರ್ವಜನಿಕ ತಿಳುವಳಿಕೆ ಮೂಲಕ ಗಾಂಧೀಜಿಯವರ ಸ್ವಚ್ಚ ಭಾರತ ಅಭಿಯಾನ ಸಾಕಾರಗೊಳ್ಳಲಿದೆ ಎಂದು ತಿಳಿಸಿದರು.
ವಿದ್ಯಾರ್ಥಿಗಳು ತಾವಿರುವ ಸ್ಥಳ ಕುಡಿಯುವ ನೀರು, ಶೌಚಾಲಯ, ಅಡುಗೆ ಮನೆಯನ್ನು ಸ್ವಚ್ಚತೆಯಿಂದ ಇಟ್ಟುಕೊಳ್ಳಬೇಕು, ಕನಿಷ್ಟ 15 ದಿನಕ್ಕೊಮ್ಮೆಯಾದರೂ ಸ್ವಚ್ಚತಾ ಕಾರ್ಯ ಕೈಗೊಳ್ಳಬೇಕು. ತಮ್ಮ ಗ್ರಾಮಗಳಲ್ಲಿ ಸ್ವಚ್ಚತೆ ಕುರಿತು ಜನರಲ್ಲಿ ಅರಿವು ಮೂಡಿಸಬೇಕು ಎಂದು ಸಲಹೆ ನೀಡಿದರು.

ನಿರ್ಮಲ ಭಾರತಿ ಟ್ರಸ್ಟ್‍ನ ನಿರ್ದೇಶಕ ಸೀತಾರಾಮಭರಣ್ಯ ಮಾತನಾಡಿ ಸ್ವಚ್ಚತೆಯಲ್ಲಿ ವಿದ್ಯಾರ್ಥಿಗಳು ಪಾತ್ರ ಬಹಳ ಮುಖ್ಯವಾದುದು. ಕುಟುಂಬ, ಶಾಲೆ, ಸಮುದಾಯಗಳಲ್ಲಿ ಸ್ವಚ್ಚತೆ ಕುರಿತು ಅರಿವು ಜಾಗೃತಿ ಮೂಡಿಸಬೇಕು. ಈ ಮೂಲಕ ಸ್ವಚ್ಚ ಭಾರತ ನಿರ್ಮಾಣಕ್ಕೆ ಅಡಿಗಲ್ಲಾಗಬೇಕು ಎಂದರು.
ಜಯನಗರದಲ್ಲಿ ನಿತ್ಯ ಸುಮಾರು 600 ರಿಂದ 800 ಮನೆಗಳ ಸಂಗ್ರಹಣೆ ಮಾಡಲಾಗುತ್ತಿದೆ. ತ್ಯಾಜ್ಯ ಕಸವನ್ನು ನೀಡುವಾಗ ಕಡ್ಡಾಯವಾಗಿ ವಿಂಗಡಿಸಿ ನೀಡಿದಾಗ ಅನುಕೂಲವಾಗಲಿದೆ, ಹಸಿ ಕಸ ಮತ್ತು ಒಣ ಕಸಗಳ ನಡುವಿನ ವ್ಯತ್ಯಾಸ ತಿಳಿಯಬೇಕು ಎಂದರು.
ಈ ಸಂದರ್ಭದಲ್ಲಿ ಜಯನಗರ ವಸತಿ ನಿಲಯ ಪಾಲಕರಾದ ಕುಮಾರಸ್ವಾಮಿ, ಸಂದೀಪ್, ಶಂಕರ್, ಪ್ರಕಾಶ್, ಪ್ರಶಾಂತ್, ಸೇರಿದಂತೆ ಮತ್ತಿತರರು ಇದ್ದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!