May 5, 2024

MALNAD TV

HEART OF COFFEE CITY

ಧರ್ಮಸ್ಥಳದ ನೇತ್ರಾವತಿಯಲ್ಲಿ ಮುಳುಗಿ ಚಿಕ್ಕಮಗಳೂರಿನ ವ್ಯಕ್ತಿ ಸಾವು

1 min read

 

ಚಿಕ್ಕಮಗಳೂರು: ಶಿವರಾತ್ರಿ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನಿಂದ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪಾದಯಾತ್ರೆ ಮೂಲಕ ಬಂದಿದ್ದ ವ್ಯಕ್ತಿ ಸ್ನಾನಕ್ಕೆಂದು ನೇತ್ರಾವತಿ ನೀರಿಗೆ ಇಳಿದಾಗ ಮುಳುಗಿ ಸಾವನ್ನಪ್ಪಿದ ಘಟನೆ ನಡೆದಿದೆ.

ಚಿಕ್ಕಮಗಳೂರು ಜಿಲ್ಲೆಯ ಗೌದನಹಳ್ಳಿ ನಿವಾಸಿ ಚಂದ್ರಶೇಖರ್(40) ಮೃತಪಟ್ಟ ದುರ್ದೈವಿ.

ಚಿಕ್ಕಮಗಳೂರು ಜಿಲ್ಲೆಯಲ್ಲಿ ತರಕಾರಿ ವ್ಯಾಪಾರ ಮಾಡಿಕೊಂಡಿದ್ದ ಚಂದ್ರಶೇಖರ್, ಸ್ನೇಹಿತನಾದ ವೆಂಕಟೇಶ್ ಜೊತೆ ಚಾರ್ಮಾಡಿ ಘಾಟ್ ಮೂಲಕ ಪಾದಯಾತ್ರೆ ಮಾಡಿಕೊಂಡು ಇಂದು ಧರ್ಮಸ್ಥಳ ನೇತ್ರಾವತಿಗೆ ಬಂದಿದ್ದರು.ಈ ವೇಳೆ ಸ್ನಾನ ಮಾಡಲು ನದಿಗೆ ಇಳಿದಿದ್ದು ಈಜಲು ಬಾರದೆ ನೀರಿನ ಸೆಳೆತಕ್ಕೆ ಸಿಕ್ಕಿ ಮುಳುಗಿ ಸಾವನ್ನಪ್ಪಿದ್ದಾರೆ.ಮೃತದೇಹವನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ತರಲಾಗಿದ್ದು, ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!