May 17, 2024

MALNAD TV

HEART OF COFFEE CITY

ಕಾಫಿನಾಡಿಗೆ ಬಜೆಟ್‍ನಲ್ಲಿ ಸಿಕ್ಕಿದ್ದೇನು…

1 min read

 

ಚಿಕ್ಕಮಗಳೂರು: 2022_23ನೇ ಸಾಲಿನ ರಾಜ್ಯ ಬಜೆಟ್ ಇಂದು ಘೋಷಣೆಯಾಗಿದ್ದು ಜಿಲ್ಲೆಗೆ ತೀರಾ ನಿರಾಸೆಯನ್ನು ಮೂಡಿಸದ ತುಸು ಸಮಾಧಾನ ನೀಡುವ ಬಜೆಟ್ ಇದಾಗಿದೆ. ಹಲವು ವರ್ಷಗಳ ಕನಸು ಪ್ರತ್ಯೇಕ ಹಾಲು ಒಕ್ಕೂಟ ರಚನೆಗೆ ಸರ್ಕಾರ ಮುಂದಾಗಿದೆ.
ಕಾಫಿನಾಡು ಹಾಸನ ಹಾಲು ಒಕ್ಕೂಟಕ್ಕೆ ಸೇರ್ಪಡೆಗೊಂಡಿದ್ದು, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರ ಚುಕ್ಕಾಣಿ ಹಿಡಿದಾಗಿನಿಂದ ಪ್ರತ್ಯೇಕ ಹಾಲು ಒಕ್ಕೂಟ ರಚನೆಗೆ ಜನಪ್ರತಿನಿಧಿಗಳು ಶ್ರಮಿಸಿದ್ದು, ಬಸವರಾಜಬೊಮ್ಮಾಯಿ ನೂತನ ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಮಂಡಿಸಿದ ಬಜೆಟ್‍ನಲ್ಲಿ ರಾಜ್ಯಹಾಲು ಒಕ್ಕೂಟದ ಸಹಯೋಗದಲ್ಲಿ ಪ್ರತ್ಯೇಕ ಹಾಲು ಒಕ್ಕೂಟ ರಚನೆಗೆ ಬಜೆಟ್‍ನಲ್ಲಿ ಪ್ರಕಟಿಸಿದ್ದಾರೆ.

ಕಾಡಾನೆಗಳು ಹಾವಳಿ ಇತ್ತೀಚೆಗೆ ಜಿಲ್ಲೆಯಲ್ಲಿ ಅಧಿಕಗೊಂಡಿದ್ದು, ರೈತ,ಬೆಳೆಗಾರರು ಬೆಳೆದ ಬೆಳೆಗಳು ನಾಶವಾಗುತ್ತಿವೆ. ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಯಲ್ಲಿ ಆನೆಹಾವಳಿ ನಿಯಂತ್ರಣಕ್ಕೆ ರೈಲ್ವೆಹಳಿಬೇಲಿ ನಿರ್ಮಾಣಕ್ಕೆ ಬಜೆಟ್‍ನಲ್ಲಿ 100 ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ. ಕೆಜಿಎಫ್ ನಿಯೋಗ ಮುಖ್ಯಮಂತ್ರಿ, ಕಂದಾಯ ಸಚಿವರನ್ನು ಭೇಟಿಮಾಡಿ ಮನವಿ ಸಲ್ಲಿಸಿದ್ದು, ಮುಖ್ಯಮಂತ್ರಿ ಮನವಿಯನ್ನು ಪುರಸ್ಕರಿಸಿ ಆನೆಹಾವಳಿ ತಡೆಗೆ ಕ್ರಮಕೈಗೊಳ್ಳಲಾಗಿದೆ.

ಜಿಲ್ಲೆಯಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಮುಳ್ಳಯ್ಯನಗಿರಿಯಿಂದ ದತ್ತಪೀಠಕ್ಕೆ ರೋಪ್ ವೇ ನಿರ್ಮಾಣಕ್ಕೆ ಕೇಂದ್ರಸರ್ಕಾರದ ಪರ್ವತಮಾಲಾ ಯೋಜನೆಯಡಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುತ್ತಿದೆ. ಇದರಿಂದ ಹೆಚ್ಚು ಪ್ರವಾಸಿಗರನ್ನು ಆಕರ್ಷಿಸಲು ನೆರವಾಗಲಿದೆ.

ರಾಜ್ಯದಲ್ಲಿ ರೈಲ್ವೆ ಸಾಂದ್ರತೆ ಹೆಚ್ಚಿಸಲು ಸಾಮಾಜಿಕ, ಆರ್ಥಿಕ ಬೆಳವಣಿಗೆ ಉತ್ತೇಜಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರದ ಶೇ.50:50ರ ಅನುದಾನದಲ್ಲಿ ನೂತನ ರೈಲು ಮಾರ್ಗ ನಿರ್ಮಾಣಕ್ಕೆ ಮುಂದಾಗಿದ್ದು, ಚಿಕ್ಕಮಗಳೂರು-ಬೇಲೂರು-ಹಾಸನ ರೈಲುಮಾರ್ಗಕ್ಕೆ ರಾಜ್ಯ ಸರ್ಕಾರ ಚಾಲನೆ ನೀಡಿದೆ.ಚಿಕ್ಕಮಗಳೂರು ತಾಲೂಕಿನಲ್ಲಿ ಭೂಸ್ವಾಧೀನ ಪ್ರಕ್ರಿಯೆ ನಡೆದಿದ್ದು, ಬೇಲೂರು, ಹಾಸನ ತಾಲೂಕಿನಲ್ಲಿ ಭೂಸ್ವಾಧೀನ ಪ್ರಕ್ರಿಯೆ ಆರಂಭಗೊಳ್ಳಬೇಕಿದೆ.

ಗ್ರಾಮೀಣ ಪ್ರದೇಶದಲ್ಲಿ ಮನೆಬಾಗಿಲಿಗೆ ಅತ್ಯುತ್ತಮ ವೈದ್ಯಕೀಯ ಸೇವೆ ಒದಗಿಸುವ ಸಲುವಾಗಿ ಚಿಕ್ಕಮಗಳೂರು ಜಿಲ್ಲೆಯಲ್ಲಿ ಮುಖ್ಯಮಂತ್ರಿ ಆರೋಗ್ಯ ವಾಹಿನಿ ಯೋಜನೆಯಡಿ ಸಂಚಾರಿ ಕ್ಲಿನಿಕ್‍ಗೆ 11 ಕೋಟಿ ರೂ. ನೀಡುತ್ತಿದ್ದು, ಬೀದರ್, ಚಾಮರಾಜನಗರ, ಕಾವೇರಿ ಜಿಲ್ಲೆಗಳೂ ಸೇರ್ಪಡೆಗೊಂಡಿದೆ.
ಭದ್ರಾಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಪರಿಗಣಿಸುವಂತೆ ಕೇಂದ್ರ ಜಲಶಕ್ತಿ ಮಂತ್ರಾಲಯ ಶಿಫಾರಸ್ಸು ಮಾಡಿದ್ದು, ಈ ಯೋಜನೆ ರಾಷ್ಟ್ರೀಯ ಯೋಜನೆ ಮಾನ್ಯತೆ ಪಡೆದು ಕೇಂದ್ರ ನೆರವಿನೊಂದಿಗೆ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!