May 18, 2024

MALNAD TV

HEART OF COFFEE CITY

ಸಿಪಿಎಲ್ ಟಿ-20 ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ

1 min read

 

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕ್ರಿಕೆಟ್ ಕ್ರೀಡಾಪಟುಗಳಿಗೆ ಅನುಕೂಲವಾಗುವಂತೆ ಹುಲ್ಲುಹಾಸಿನ ಕ್ರಿಕೆಟ್ ಕ್ರೀಡಾಂಗಣ ನಿರ್ಮಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ತಿಳಿಸಿದರು.ನಗರದ ನೇತಾಜಿ ಸುಭಾಷ್‍ಚಂದ್ರ ಬೋಸ್ ಜಿಲ್ಲಾ ಆಟದ ಮೈದಾನದಲ್ಲಿ ಸೋಮವಾರ ದಾನಿ ಗೌರಮ್ಮ ಬಸವೇಗೌಡ ಸ್ಮರಣಾರ್ಥ ರಾಣಾ ಸ್ಪೋಟ್ರ್ಸ್‍ಕ್ಲಬ್ ವತಿಯಿಂದ ಹಮ್ಮಿಕೊಂಡಿದ್ದ ಚಿಕ್ಕಮಗಳೂರು ಪ್ರೀಮಿಯರ್ ಲೀಗ್ ಟಿ-20 ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ನೀಡಿ ಮಾತನಾಡಿ, ಜಿಲ್ಲೆಯಲ್ಲಿ ಕ್ರಿಕೆಟ್ ಆಟಗಾರರಿಗೆ ಕ್ರೀಡಾಂಗಣ ಸೇರಿದಂತೆ ಮೂಲ ಸೌಲಭ್ಯಗಳ ಕೊರ É ಇದೆ. ಉದಯೋನ್ಮುಖ ಕ್ರಿಕೆಟ್ ಆಟಗಾರರಿಗೆ ಅನುಕೂಲವಾಗುವಂತೆ ಕ್ರೀಡಾಂಗಣ ನಿರ್ಮಿಸಲು ಜಾಗ ಗುರುತಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಗುಣಮಟ್ಟದ ಕ್ರೀಡಾಂಗಣ ನಿರ್ಮಿಸಲಾಗುವುದು ಎಂದರು.

90ರ ದಶಕದಲ್ಲಿ ಭಾರತ ಕ್ರಿಕೆಟ್ ತಂಡದಲ್ಲಿ 8 ಜನ ಆಟಗಾರರಿದ್ದರು. ಆದರೆ, ಇತ್ತೀಚೆಗೆ ರಾಜ್ಯದ ಆಟಗಾರರ ಸಂಖ್ಯೆ ಇಳಿಮುಖವಾಗುತ್ತಿದೆ. ಜಿಲ್ಲೆಯ ವೇದಾಕೃಷ್ಣಮೂರ್ತಿ ರಾಷ್ಟ್ರೀಯ ಮಹಿಳಾ ಕ್ರಿಕೆಟ್‍ನಲ್ಲಿ ಹೆಸರು ಮಾಡಿದ್ದಾರೆ. ಉತ್ತಮ ತರಬೇತಿ ಮತ್ತು ಮೂಲ ಸೌಕರ್ಯಗಳಿದ್ದಲ್ಲಿ ಉತ್ತಮ ಆಟಗಾರರನ್ನು ತಯಾರಿಸಬಹುದಾಗಿದೆ ಎಂದು ನುಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎಚ್.ಅಕ್ಷಯ್ ಮಾತನಾಡಿ, ಜಿಲ್ಲೆಯಲ್ಲಿ ರಾಷ್ಟ್ರಮಟ್ಟದ ಪಂದ್ಯಾವಳಿಗಳು ನಡೆದಿರುವುದನ್ನು ಗಮನಿಸಿದರೇ ಇಲ್ಲಿ ಉತ್ತಮ ಕ್ರೀಡಾಪಟುಗಳು ಇದ್ದರು ಮತ್ತು ಕ್ರೀಡೆಗೆ ಬಹಳ ಉತ್ತೇಜನವಿತ್ತು ಎನ್ನುವುದು ತಿಳಿಯುತ್ತದೆ ಎಂದು ತಿಳಿಸಿದರು.
ರಾಣಾ ಸ್ಪೋಟ್ರ್ಸ್ ಕ್ಲಬ್‍ನ ಗೋಪಾಲ್, ನಟರಾಜ್, ನರೇಂದ್ರಪೈ, ಮುಖಂಡರಾದ ರಂಜನ್ ಅಜಿತ್‍ಕುಮಾರ್, ಟಿ.ರಾಜಶೇಖರ್, ಹರೀಶ್, ತರಬೇತುದಾರ ಶಂಕರ್ ಇದ್ದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!