May 19, 2024

MALNAD TV

HEART OF COFFEE CITY

ಆರ್ಥಿಕ ಸ್ವಾವಲಂಬನೆ ಸಾಧಿಸಲು ಮಹಿಳೆಯರಿಗೆ ಕೌಶಲ್ಯಾಭಿವೃದ್ಧಿ ತರಬೇತಿ

1 min read

 

ಚಿಕ್ಕಮಗಳೂರು: ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬನೆ ಸಾಧಿಸುವ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಮಹಿಳಾ ಸ್ವಸಹಾಯ ಸಂಘಗಳಿಗೆ ವಿವಿಧ ಸಾಲ ಸೌಲಭ್ಯ ಒದಗಿಸಲಿದ್ದು ಮಹಿಳಾ ಒಕ್ಕೂಟಗಳು ಅದರ ಸದುಪಯೋಗ ಪಡೆದುಕೊಳ್ಳುವಂತೆ ನಗರಸಭೆ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್ ತಿಳಿಸಿದರು. ನಗರದ ಅಂಬೇಡ್ಕರ್ ಭವನದಲ್ಲಿ ದೀನದಯಾಳ್ ಅಂತ್ಯೋದಯ ಯೋಜನೆ, ಡೇನಲ್ಮ್ ಯೋಜನೆ ಅಡಿ ಸ್ವಸಹಾಯ ಸಂಘದ ಸದಸ್ಯರುಗಳಿಗೆ ಆಯೋಜಿಸಿದ್ದ ಎರಡು ದಿನಗಳ ಕಾಲದ ಸಾಮಥ್ರ್ಯ ಅಭಿವೃದ್ಧಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಮಹಿಳೆಯರು ಆರ್ಥಿಕ ಸ್ವಾವಲಂಬಿಗಳಾಗಿ ಬದುಕನ್ನು ಕಟ್ಟಿಕೊಳ್ಳಬೇಕು, ಜತೆಗೆ ಕುಟುಂಬ ನಿರ್ವಹಣೆಗೆ ಆಧಾರವಾಗಬೇಕು ಎನ್ನುವ ನಿಟ್ಟಿನಲ್ಲಿ ಮಹಿಳೆಯರ ಸಬಲೀಕರಣಕ್ಕೆ ಸರ್ಕಾರ ಮುಂದಾಗಿದ್ದು, ಸಂಘ ಸಂಸ್ಥೆಗಳ ಮೂಲಕ ಸ್ವ ಉದ್ಯೋಗ ಕೈಗೊಳ್ಳಲು ಸಾಲ ವಿತರಣೆ ಮಾಡುತ್ತಿದೆ ಅದರ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಿದರು.ಹೆಣ್ಣುಮಕ್ಕಳು ಶಿಕ್ಷಣವಂತರಾದಾಗ ಸಮಾಜ ಮತ್ತಷ್ಟು ಪ್ರಗತಿ ಸಾಧಿಸಲು ಸಾಧ್ಯವಾಗಲಿದೆ ಎಂಬುದನ್ನು ಸರ್ಕಾರ ಮನಗಂಡಿದ್ದು. ಮಹಿಳಾ ಸಬಲೀಕರಣಕ್ಕಾಗಿ ಹಲವು ವಿಧದ ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸುತ್ತಿದೆ. ಮಹಿಳೆಯರು ಸ್ವಸಹಾಯ ಸಂಘ ಸಂಸ್ಥೆಗಳ ಮೂಲಕ ಸಾಲ ಸೌಲಭ್ಯವನ್ನು ಪಡೆದು ಸ್ವ ಉದ್ಯೋಗ ಕೈಗೊಳ್ಳುವ ಮೂಲಕ ಆರ್ಥಿಕ ಸ್ವಾವಲಂಬನೆ ಸಾಧಿಸುವಂತೆ ಸಲಹೆ ನೀಡಿದರು.

ನಗರಸಭೆ ಉಪಾಧ್ಯಕ್ಷೆ ಉಮಾದೇವಿಕೃಷ್ಣಪ್ಪ ಮಾತನಾಡಿ ಡೇ ನಲ್ಮ್‍ಯೋಜನೆ ಅಡಿಯಲ್ಲಿ ನಗರಸಭೆಯು ಸ್ತ್ರೀಶಕ್ತಿ ಸ್ವಸಹಾಯ ಸಂಘಗಳಿಗೆ ಸಾಮಥ್ರ್ಯ ಅಭಿವೃದ್ಧಿ ತರಬೇತಿ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಸದ್ಬಳಕೆ ಮಾಡಿಕೊಳ್ಳುವಂತೆ ಸಲಹೆ ನೀಡಿದರು. ನಗರಸಭೆ ಸದಸ್ಯೆ ಅನುಮಧುಕರ್ ಮಾತನಾಡಿ ಮಹಿಳೆಯರ ಸಬಲೀಕರಣಗೊಳಿಸುವ ಉದ್ದೇಶದಿಂದ ಸರ್ಕಾರ ಮಹಿಳಾ ಸಂಘ ಸಂಸ್ಥೆಗಳ ಮೂಲಕ ಹಲವು ವಿಧದಲ್ಲಿ ಸಾಲ ಸೌಲಭ್ಯ ನೀಡುತ್ತಿದ್ದು ಅದನ್ನು ಸದುಪಯೋಗಪಡಿಸಿಕೊಂಡು ಸ್ವ ಉದ್ಯಮ ಕೈಗೊಳ್ಳುವ ನಿಟ್ಟಿನಲ್ಲಿ ಚಿಂತನೆ ನಡೆಸುವಂತೆ ತಿಳಿಸಿದರು.

ಕುಟುಂಬದ ಜೀವನಮಟ್ಟ ಸುಧಾರಣೆ ನಿಟ್ಟಿನಲ್ಲಿ ಮಹಿಳೆಯರನ್ನು ಆರ್ಥಿಕವಾಗಿ ಸಶಕ್ತರನ್ನಾಗಿಸುವ ಉದ್ದೇಶದಿಂದ ಸರ್ಕಾರ ಸಾಮಥ್ರ್ಯ ಅಭಿವೃದ್ಧಿಯಂತಹ ಕೌಶಲ್ಯ ತರಬೇತಿ, ಯೋಜನೆ ರೂಪಿಸಿದೆ ಮಹಿಳೆಯರು ಸದುಪಯೋಗಪಡಿಸಿಕೊಂಡು ಸ್ವಾವಲಂಬಿ ಜೀವನ ಕಟ್ಟಿಕೊಳ್ಳುವಲ್ಲಿ ಶ್ರಮಿಸುವಂತೆ ತಿಳಿಸಿದರು. ನಗರಸಭೆ ಆಯುಕ್ತ ಬಿ.ಸಿ.ಬಸವರಾಜ್ ಮಾತನಾಡಿ, ಸ್ತ್ರೀ ಶಕ್ತಿ ಸಂಘಗಳ ಮೂಲಕ ಸರ್ಕಾರ ಕೌಶಲ್ಯ ತರಬೇತಿ ನೀಡುತ್ತಿದ್ದು ಇದರಿಂದ ಮುಂದಿನ ದಿನಗಳಲ್ಲಿ ಸ್ವ-ಉದ್ದಿಮೆ ಕೈಗೊಳ್ಳಲು ಸಹಕಾರಿಯಾಗಲಿದೆ. ಸರ್ಕಾರವು ವಿವಿಧ ಯೋಜನೆಗಳ ಅಡಿಯಲ್ಲಿ ಮಹಿಳೆಯರಿಗೆ ಸಾಲ ಸೌಲಭ್ಯವನ್ನು ವಿತರಣೆ ಮಾಡುತ್ತಾ ಬಂದಿದೆ. ಇದರಿಂದ ಕುಟುಂಬ ನಿರ್ವಹಣೆ ಜತೆಗೆ ವ್ಯಾಪಾರ ವಹಿವಾಟು, ಸ್ವ ಉದ್ಧಿಮೆ ಕೈಗೊಳ್ಳಲು ಅನುಕೂಲವಾಗಲಿದೆ ಎಂದರು.

ಇನ್ನು ಡೇನಲ್ಮ್ ಯೋಜನೆ ಅಡಿಯಲ್ಲಿ ಬೀದಿಬದಿ ವ್ಯಾಪಾರ ನಡೆಸುವವರಿಗೆ, ಸ್ವಯಂ ಉದ್ಯಮ ಕೈಗೊಳ್ಳುವವರಿಗೆ ಮೊದಲ ಕಂತಿನಲ್ಲಿ 10 ಸಾವಿರ ಹಾಗೂ 2 ಕಂತಿನಲ್ಲಿ 20 ಸಾವಿರ ಹಣ ನೀಡುತ್ತಿದ್ದು ಸಕಾಲಕ್ಕೆ ಮರುಪಾವತಿ ಮಾಡಿದ್ದಲ್ಲಿ ಒಂದು ಲಕ್ಷದವರೆಗೂ ಸಾಲ ಪಡೆದುಕೊಳ್ಳಬಹುದಾಗಿದೆ ಎಂದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!