April 29, 2024

MALNAD TV

HEART OF COFFEE CITY

ರಸ್ತೆ ಇಲ್ಲದೇ ತೆಪ್ಪದಲ್ಲಿ ಶವ ಸಾಗಾಟ

1 min read

ಕೊಟ್ಟಿಗೆಹಾರ: ರಸ್ತೆ ಸೌಕರ್ಯವಿಲ್ಲದೆ ಮಲೆಕುಡಿಯ ಕುಟುಂಬವೊಂದು ಮೃತಪಟ್ಟ ತಮ್ಮ ಕುಟುಂಬದ ಸದಸ್ಯರೊಬ್ಬರ ಮೃತದೇಹವನ್ನು ತೆಪ್ಪದಲ್ಲಿ ಸಾಗಿಸಿದ ಘಟನೆ ಹೊಳೆಕೂಡಿಗೆ ಗ್ರಾಮದಲ್ಲಿ ನಡೆದಿದೆ.ಶುಕ್ರವಾರ ರಾತ್ರಿ ಹೊಳೆಕೂಡಿಗೆ ಮೂಲದ ಸುಬ್ಬರಾಯ(70) ಎಂಬುವವರು ಮೂತ್ರಪಿಂಡದ ಸಮಸ್ಯೆಯಿಂದ ಚಿಕ್ಕಮಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದು ಅಂತ್ಯಸಂಸ್ಕಾರ ನೆರವೇರಿಸಲು ಶನಿವಾರ ಹೊಳೆಕೂಡಿಗೆಗೆ ಮೃತದೇಹವನ್ನು ತರಲಾಯಿತು. ಆದರೆ ಮೃತರ ಮನೆಗೆ ಹೋಗಲು ರಸ್ತೆ ಸೌಕರ್ಯ ಇಲ್ಲದಿರುವುದರಿಂದ ತೆಪ್ಪದಲ್ಲಿಯೇ ಮೃತದೇಹವನ್ನು ಇಟ್ಟು ಸಾಗಿಸಿ ಅಂತ್ಯಸಂಸ್ಕಾರ ನೆರವೇರಿಸಲಾಯಿತು.

ನಾಲ್ಕು ದಶಕಗಳಿಂದ ಸಂಪರ್ಕಕ್ಕೆ ತೆಪ್ಪವನ್ನೇ ಆಶ್ರಯಿಸಿರುವ ಈ ಕುಟುಂಬ ಬೇರೆ ಬೇರೆ ಸಂದರ್ಭಗಳಲ್ಲಿ 9 ಮೃತದೇಹವನ್ನು ತೆಪ್ಪದಲ್ಲಿ ಸಾಗಿಸಿ ಅಂತ್ಯಸಂಸ್ಕಾರ ನೆರವೇರಿಸಿದೆ. ನದಿಯ ಒಂದು ತೀರದ ಜಾಗವನ್ನು ತೆರವುಗೊಳಿಸಿ ರಸ್ತೆ ವ್ಯವಸ್ಥೆ ಕಲ್ಪಿಸುವಂತೆ ಅಥವಾ ತೂಗು ಸೇತುವೆ ನಿರ್ಮಿಸುವಂತೆ ಈ ಕುಟುಂಬ ಹಲವು ಬಾರಿ ಜಿಲ್ಲಾಧಿಕಾರಿಗಳು, ಶಾಸಕರು ಸೇರಿದಂತೆ ಜನಪ್ರತಿನಿಧಿಗಳು, ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ.
ಮಲೆಕುಡಿಯ ಕುಟುಂಬದ ಸದಸ್ಯ ಸುರೇಶ್, ರಸ್ತೆಗಾಗಿ, ತೂಗು ಸೇತುವೆಗಾಗಿ ಹಲವು ಬಾರಿ ಮನವಿ ಕೊಟ್ಟರೂ ಪ್ರಯೋಜನವಾಗಿಲ್ಲ. ಜನಪ್ರತಿನಿಧಿಗಳು, ಸರ್ಕಾರ ಈ ಬಗ್ಗೆ ಕ್ರಮ ಕೈಗೊಳ್ಳಲಿ ಎಂದು ತಿಳಿಸಿದ್ದಾರೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!