May 3, 2024

MALNAD TV

HEART OF COFFEE CITY

ನಗರದಲ್ಲಿ ಉಪಪ್ರಾದೇಶಿಕ ವಿಜ್ಞಾನ ಕೇಂದ್ರ ಸ್ಥಾಪನೆ-ಶಾಸಕ ಸಿ.ಟಿ.ರವಿ 

1 min read

 

ಚಿಕ್ಕಮಗಳೂರು: ನಗರದಲ್ಲಿ ಉಪಪ್ರಾದೇಶಿಕ ವಿಜ್ಞಾನ ಕೇಂದ್ರವನ್ನು ಸ್ಥಾಪಿಸಲು ಸರ್ಕಾರ ನಿರ್ಧರಿಸಿದೆ ಎಂದು ಶಾಸಕ ಸಿ.ಟಿ.ರವಿ ಹೇಳಿದ್ದಾರೆ.
ಈ ಕೇಂದ್ರವನ್ನು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ (ಕೆಸ್ಟೆಪ್ಸ್) ಮೂಲಕ ಸ್ಥಾಪಿಸಲು ಉದ್ದೇಶಿಸಲಾಗಿದ್ದು, ಇದಕ್ಕಾಗಿ ಈಗಾಗಲೇ 9.36 ಎಕರೆ ಜಾಗವನ್ನು ಕಾಯ್ದಿರಿಸಲಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಶೀಘ್ರದಲ್ಲೇ ಕೆಸ್ಟೆಪ್ಸ್‍ನ ಅಧಿಕಾರಿಗಳು ವಿಜ್ಞಾನ ಕೇಂದ್ರದ ಸ್ಥಳಪರಿಶೀಲನೆಗೆ ಆಗಮಿಸಲಿದ್ದಾರೆ. ಪ್ರಸ್ತುತ 4 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಈ ಕೇಂದ್ರವನ್ನು ಸ್ಥಾಪಿಸಲು ಮಂಜೂರಾತಿ ದೊರೆತಿದ್ದು, ಅತ್ಯಾಧುನಿಕ ಶೈಲಿಯಲ್ಲಿ ಈ ವಿಜ್ಞಾನ ಕೇಂದ್ರ ಸ್ಥಾಪಿಸಲು ಹೆಚ್ಚುವರಿ ಅನುದಾನವನ್ನು ಒದಗಿಸುವಂತೆ ಕೋರಲಾಗಿದೆ ಎಂದಿದ್ದಾರೆ.
ಈ ವಿಜ್ಞಾನ ಕೇಂದ್ರವನ್ನು ಸ್ಥಾಪಿಸುವುದರಿಂದ ವಿದ್ಯಾರ್ಥಿಗಳಿಗೆ ಹಾಗೂ ಜನರಿಗೆ ವಿಜ್ಞಾನ ಹಾಗೂ ತಂತ್ರಜ್ಞಾನದ ಬಗ್ಗೆ ಹೆಚ್ಚಿನ ಅರಿವು ಮೂಡಿಸಲು ಅನುಕೂಲವಾಗಲಿದೆ ಎಂದು ಶಾಸಕರು ತಿಳಿಸಿದ್ದಾರೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!