May 8, 2024

MALNAD TV

HEART OF COFFEE CITY

2015ರಲ್ಲಿ ಶಿವಮೊಗ್ಗದಲ್ಲಿ ಕೊಲೆಯಾದ ವಿಶ್ವನಾಥ್ ಶೆಟ್ಟಿ ಮಗನ ಓದಿನ ಜವಾಬ್ದಾರಿ ಹೊತ್ತ 2022ರಲ್ಲಿ ಕೊಲೆಯಾದ ಹರ್ಷನ ಸಹೋದರಿ

1 min read

 

ಚಿಕ್ಕಮಗಳೂರು. ಶಿವಮೊಗ್ಗದಲ್ಲಿ ಕೊಲೆಯಾದ ಹಿಂದೂ ಕಾರ್ಯಕರ್ತ ಹರ್ಷನ ಸಹೋದರಿ ಅಶ್ವಿನಿ, 2015ರಲ್ಲಿ ಶಿವಮೊಗ್ಗದಲ್ಲಿ ಕೊಲೆಯಾಗಿದ್ದ ಮತ್ತೋರ್ವ ಹಿಂದೂ ಕಾರ್ಯಕರ್ತ ವಿಶ್ವನಾಥ್ ಶೆಟ್ಟಿ ಮಗ ಯಶಸ್ ಓದಿನ ಜವಾಬ್ದಾರಿಯನ್ನ ವಹಿಸಿಕೊಂಡಿದ್ದಾರೆ. ಯಶಸ್ ಚಿಕ್ಕಮಗಳೂರು ಜಿಲ್ಲೆ ಕೊಪ್ಪ ಪಟ್ಟಣದಲ್ಲಿ ಮೃತ ವಿಶ್ವನಾಥ್ ಶೆಟ್ಟಿ ಪತ್ನಿಯ ತಾಯಿಯ ಜೊತೆ ಇದ್ದು, ಕೊಪ್ಪದಲ್ಲೇ 8ನೇ ತರಗತಿ ಓದುತ್ತಿದ್ದಾನೆ. 2015ರ ಫೆಬ್ರವರಿ 19ರಂದು ಶಿವಮೊಗ್ಗದಲ್ಲಿ ನಡೆದ ಪಿ.ಎಫ್.ಐ ಸಮಾವೇಶ ಮುಗಿಸಿಕೊಂಡು ಹೋಗುವಾಗ ಶಿವಮೊಗ್ಗ ತಾಲೂಕಿನ ಗಾಜನೂರು ಸಮೀಪ ದುಷ್ಕರ್ಮಿಗಳು ವಿಶ್ವನಾಥ್ ಶೆಟ್ಟಿಯನ್ನ ಕೊಲೆ ಮಾಡಿದ್ದರು. ವಿಶ್ವನಾಥ್ ಶೆಟ್ಟಿ ಸಾವಿನ ಕೆಲ ತಿಂಗಳ ಬಳಿಕ ಪತ್ನಿ ಕೂಡ ಸಾವನ್ನಪ್ಪಿದ್ದರು. ವಿಶ್ವನಾಥ್ ಶೆಟ್ಟಿಯ ಮಗ ಯಶಸ್ ಅಪ್ಪ-ಅಮ್ಮ ಇಬ್ಬರೂ ಇಲ್ಲದೆ ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನಲ್ಲಿ ಅಜ್ಜಿಯ ಜೊತೆ ವಾಸವಿದ್ದನು. 2022ರ ಫೆಬ್ರವರಿ 20ರಂದು ಹರ್ಷ ರಾತ್ರಿ 10 ಗಂಟೆ ವೇಳೆಯಲ್ಲಿ ಊಟಕ್ಕೆ ಹೋಗುವಾಗ ಶಿವಮೊಗ್ಗ ನಗರದ ಸೀಗೆಹಟ್ಟಿಯಲ್ಲಿ ಏಳೆಂಟು ಜನ ಹರ್ಷ ಮೇಲೆ ದಾಳಿ ಮಾಡಿ ಕೊಲೆ ಮಾಡಿದ್ದರು.

ಇಂದು ಚಿಕ್ಕಮಗಳೂರು ಜಿಲ್ಲೆ ಕೊಪ್ಪ ಪಟ್ಟಣದ ಯಶಸ್ ಮನೆಗೆ ಭೇಟಿ ನೀಡಿದ ಮೃತ ಹರ್ಷ ಸಹೋದರಿ ಅಶ್ವಿನಿ ಆ ಬಾಲಕ ಓದಿನ ಜವಾಬ್ದಾರಿಯನ್ನ ವಹಿಸಿಕೊಂಡಿದ್ದಾರೆ. ಅವನ ಓದಿನ ಜೊತೆ ಬೇರೆ ಯಾವುದೇ ರೀತಿಯ ಸಮಸ್ಯೆ ಇದ್ದರೂ ನಾನೇ ನೋಡಿಕೊಳ್ಳುತ್ತೇನೆ. ನನಗೆ ಒಂಬತ್ತನೇ ತರಗತಿ ಓದುತ್ತಿರುವ ಮಗಳು ಇದ್ದಾಳೆ. ಇವನನ್ನ 8ನೇ ತರಗತಿ ಓದುತ್ತಿರುವ ಮಗ ಎಂದು ಭಾವಿಸಿಕೊಳ್ಳುತ್ತೇನೆ. ಅವನಿಗೆ ಏನು ಬೇಕು ಎಲ್ಲಾ ಮಾಡುತ್ತೇನೆ. ನೀವು ಅವನ ಬಗ್ಗೆ ಚಿಂತೆಯನ್ನೇ ಮಾಡಬೇಡಿ ಎಂದು ಧೈರ್ಯ ತುಂಬಿದ್ದಾರೆ. ಅವನಿಗೆ ಏನೇ ಸಮಸ್ಯೆಯಾದರೂ ನನಗೆ ಕರೆ ಮಾಡಿ, ನಾನು ಬಂದು ಅವನನ್ನ ನೋಡಿಕೊಳ್ಳುತ್ತೇನೆ ಎಂದಿದ್ದಾರೆ. ಅಮ್ಮ ಹಾಗೂ ಅವನನ್ನ ನೋಡಿಕೊಂಡು ಅವನ ಓದಿನ ಬಗ್ಗೆ ಮಾತ್ರ ಯೋಚನೆ ಮಾಡಿ, ಉಳಿದದ್ದು ನನಗೆ ಬಿಡಿ. ಅವನ ಓದು ಹಾಗೂ ಹಣದ ಬಗ್ಗೆ ಯೋಚನೆಯನ್ನೇ ಮಾಡಬೇಡಿ. ಅವನು ನನಗೆ ಹರ್ಷನಿದ್ದಂತೆ, ನೀವು ಯೋಚನೆ ಮಾಡಬೇಡಿ ಎಂದು ಮೃತ ವಿಶ್ವನಾಥ್ ಶೆಟ್ಟಿ ಪತ್ನಿಯ ತಂಗಿಗೆ ಧೈರ್ಯ ತುಂಬಿದ್ದಾರೆ. ನಿಮಗೆ ಏನಾದರೂ ಬೇಕಾದರೆ ನನಗೆ ಕರೆ ಮಾಡಿ. ಅಜ್ಜಿ ಹಾಗೂ ಯಶಸ್ ಅವರ ಇಬ್ಬರ ಜವಾಬ್ದಾರಿ ನನ್ನದು ಎಂದು ಮೃತ ಹರ್ಷ ಅಕ್ಕ ಅಶ್ವಿನಿ ಹೇಳಿದ್ದಾರೆ. ವಿಶ್ವನಾಥ್ ಶೆಟ್ಟಿ ಪತ್ನಿಯ ತಂಗಿ ಕೂಲಿ ಕೆಲಸ ಮಾಡಿಕೊಂಡು ಯಶಸ್ ಹಾಗೂ ಅಜ್ಜಿಯನ್ನ ನೋಡಿಕೊಳ್ಳುತ್ತಿದ್ದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!