May 20, 2024

MALNAD TV

HEART OF COFFEE CITY

ಹಿರೇಮಗಳೂರು ಕಲ್ಯಾಣಿ ಅಭಿವೃದ್ಧಿಗೆ 22 ಲಕ್ಷ ರೂ. ಅನುದಾನ: ಸಿ.ಟಿ.ರವಿ

1 min read

ಚಿಕ್ಕಮಗಳೂರು: ಹಿರೇಮಗಳೂರಿನ ಕಲ್ಯಾಣಿ ಅಭಿವೃದ್ಧಿಗೆ 15ನೇ ಹಣಕಾಸು ಯೋಜನೆ ಅಡಿಯಲ್ಲಿ 22 ಲಕ್ಷ ರೂ ಅನುದಾನ ಒದಗಿಸಿದ್ದು ಅಭಿವೃದ್ಧಿ ಕಾರ್ಯಕ್ಕೆ ಚಾಲನೆ ನೀಡಲಾಗಿದೆ ಎಂದು ಶಾಸಕ ಸಿ.ಟಿ.ರವಿ ತಿಳಿಸಿದರು.ನಗರದ ಹಿರೇಮಗಳೂರಿನಲ್ಲಿರುವ ಕಲ್ಯಾಣಿಯ ಜೀರ್ಣೋದ್ಧಾರಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿ, ನಗರದ ಸಮಗ್ರ ಅಭಿವೃದ್ಧಿ ನಿಟ್ಟಿನಲ್ಲಿ ಹಲವು ಕಾಮಗಾರಿಗಳನ್ನು ಕೈಗೊಂಡಿದ್ದು ಇದೀಗಹಿರೇಮಗಳೂರಿನಲ್ಲಿ ಈ ಅವಧಿಯಲ್ಲಿ ಒಟ್ಟು 4 ಕೋಟಿಗೂ ಹೆಚ್ಚು ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ, ಕೋದಂಡರಾಮಚಂದ್ರ ಸ್ವಾಮಿ ದೇವಾಲಯ ಜೀರ್ಣೋದ್ಧಾರ, ಯಾತ್ರಿ ನಿವಾಸ ನಿರ್ಮಾಣ, ಗ್ರಾಮದೊಳಗೆ ಡಾಂಬರೀಕರಣ, ಅಂಬೇಡ್ಕರ್ ಭವನ ನಿರ್ಮಾಣ ಜತೆಗೆ ಅಂಬೇಡ್ಕರ್ ವೃತ್ತಕ್ಕೆ ಅನುದಾನ ಸೇರಿದಂತೆ ನಾಲ್ಕು ಕೋಟಿಗೂ ಹೆಚ್ಚು ಅನುದಾನ ಬಿಡುಗಡೆಗೊಳಿಸಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ತಿಳಿಸಿದರು.

ಚಿಕ್ಕಮಗಳೂರು ನಗರವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಯೋಜನೆ ರೂಪಿಸಿ ಕಾಮಗಾರಿಗಳನ್ನು ನಡೆಸಲಾಗುತ್ತಿದೆ. ಸ್ಲಂಬೋರ್ಡ್ ವತಿಯಿಂದ ವಸತಿರಹಿತರಿಗೆ ಮನೆಗಳ ನಿರ್ಮಾಣ, ಆಶ್ರಯ ವಸತಿ ಯೋಜನೆ ಅಡಿಯಲ್ಲಿ ನಿವೇಶನ, ಜತೆಗೆ ಬೈಪಾಸ್ ರಸ್ತೆಯಲ್ಲಿ ಚತುಷ್ಟಥ ರಸ್ತೆ ನಿರ್ಮಾಣ, ಅಮೃತ್, ಯುಜಿಡಿ ಸೇರಿದಂತೆ ಅನೇಕ ಕಾಮಗಾರಿಗಳು ನಡೆಯುತ್ತಿವೆ, ವಿರೋಧ ಪಕ್ಷಗಳು ಇರುವುದೇ ಟೀಕೆ ಮಾಡಲು ಆದರೆ ಜಿಲ್ಲೆಯಲ್ಲಿ ಅಭಿವೃದ್ಧಿ ವಿಚಾರದಲ್ಲಿ ಟೀಕೆ ಮಾಡದಂತೆ ಬದ್ದತೆಯಿಂದ ಕೆಲಸ ಮಾಡಲಾಗುತ್ತಿದೆ ಎಂದರು.
ನಗರಸಭೆ ಅಧ್ಯಕ್ಷ ವರಸಿದ್ದಿವೇಣುಗೋಪಾಲ್ ಮಾತನಾಡಿ, ನಗರದ ಸಮಗ್ರ ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ಶಾಸಕರು ವಿಶೇಷ ಅನುದಾನವನ್ನು ತಂದಿದ್ದು, ಆ ಮೂಲಕ ನಗರದ ವಾರ್ಡ್‍ಗಳ ಅಭಿವೃದ್ಧಿಗೆ ಸಮಾನವಾಗಿ ಅನುದಾನ ಹಂಚಿಕೆಯಾಗುತ್ತಿದೆ, ಹಿರೇಮಗಳೂರಿನಲ್ಲಿ ಕಲ್ಯಾಣಿ ಜೀರ್ಣೋದ್ಧಾರಕ್ಕೆ ಹಲವು ಬಾರಿ ಗ್ರಾಮಸ್ಥರು ಮನವಿ ಮಾಡಿದ್ದರು ಇದೀಗ 22 ಲಕ್ಷಕ್ಕೂ ಹೆಚ್ಚು ಅನುದಾನದಲ್ಲಿ ಜೀರ್ಣೋದ್ಧಾರ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ ಎಂದು ತಿಳಿಸಿದರು.

ಹಿರೇಮಗಳೂರು ಕೇಶವಮೂರ್ತಿ ಮಾತನಾಡಿ, ಕಲ್ಯಾಣಿ ಜೀರ್ಣೋದ್ಧಾರ ಸಂಬಂಧ ಶಾಸಕರು, ನಗರಸಭೆ, ಪ್ರಾಧಿಕಾರಕ್ಕೆ ಹಲವು ಬಾರಿ ಮನವಿ ಮಾಡಲಾಗಿತ್ತು, ಇದಕ್ಕೆ ಸ್ಪಂದಿಸಿದ ಶಾಸಕರು 15ನೇ ಹಣಕಾಸು ನಿಧಿಯಲ್ಲಿ 22,786 ರೂ ಅನುದಾನ ಬಿಡುಗಡೆಗೊಳಿಸಿ ಕಲ್ಯಾಣಿಪುನಶ್ಚೇತನಕ್ಕೆ ಶ್ರಮಿಸಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು.
ನಗರಸಭೆ ಸದಸ್ಯರಾದ ವಿದ್ಯಾಬಸವರಾಜ್, ನಗರಸಭೆ ಮಾಜಿ ಅಧ್ಯಕ್ಷ ಹೆಚ್.ಡಿ.ತಮ್ಮಯ್ಯ, ಪುಷ್ಪರಾಜ್, ನಗರಸಭೆ ಸದಸ್ಯ ಮಧುಕುಮಾರ್ ರಾಜ್ ಅರಸ್, ಸಿಡಿಎ ಸದಸ್ಯ ರಾಜ್‍ಕುಮಾರ್, ಜಾನಯ್ಯ, ರಮೇಶ್, ರೇವನಾಥ್, ನಗರಸಭೆ ಆಯುಕ್ತ ಬಿ.ಸಿ ಬಸವರಾಜ್, ಎಇಇ ಕುಮಾರ್, ಇಂಜಿನಿಯರ್ ಚಂದನ್ ವಕೀಲರಾದ ಶಿವಣ್ಣ ಇದ್ದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!