May 20, 2024

MALNAD TV

HEART OF COFFEE CITY

ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ,ಈಶ್ವರಪ್ಪ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹ

1 min read

 

ಚಿಕ್ಕಮಗಳೂರು: ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣ ಸಂಬಂಧ ಸಚಿವ ಕೆ.ಎಸ್ ಈಶ್ವರಪ್ಪ ವಿರುದ್ಧ ಸೂಕ್ತ ಕಾನೂನು ಕ್ರಮ ತಗೆದುಕೊಳ್ಳಬೇಕು ಎಂದು ಅಗ್ರಹಿಸಿ ಕಾಂಗ್ರೆಸ್, ಸಿಪಿಐ ಸೇರಿದಂತೆ ವಿವಿಧ ಪಕ್ಷ ಹಾಗೂ ಸಂಘಟನೆಗಳ ಮುಖಂಡರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.ಆತ್ಮಹತ್ಯೆ ಪ್ರಕರಣ ಮಂಗಳವಾರ ಮಧ್ಯಾಹ್ನ ರಾಜ್ಯಾದ್ಯಂತ ಸುದ್ದಿಯಾಗುತ್ತಿದ್ದಂತೆ ನಗರದ ಹನುಮಂತಪ್ಪ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಸಚಿವ ಕೆ.ಎಸ್ ಈಶ್ವರಪ್ಪ ವಿರುದ್ಧ ಧಿಕ್ಕಾರ ಕೂಗಿ ಕೂಡಲೇ ಸಚಿವ ಸಂಪುಟದಿಂದ ವಜಾ ಮಾಡುವಂತೆ ಒತ್ತಾಯಿಸಿದರು.ಕೆಪಿಸಿಸಿ ರಾಜ್ಯ ವಕ್ತಾರ ಹೆಚ್.ಹೆಚ್ ದೇವರಾಜ್ ಮಾತನಾಡಿ, ಆತ್ಮಹತ್ಯೆಗೆ ಕಾರಣವಾದ ಸಚಿವ ಈಶ್ವರಪ್ಪ ನೇರವಾಗಿ ಹೊಣೆಯಾಗಿದ್ದಾರೆ. ಆತ್ಮಹತ್ಯೆಗೂ ಮೊದಲು ಪ್ರಧಾನ ಮಂತ್ರಿಗೆ ಪತ್ರ ಬರೆದಿದ್ದಾರೆ. ಇಂದು ಡೆತ್ ನೋಟ್‍ನಲ್ಲಿಯೂ ಸಹ ನನ್ನ ಸಾವಿಗೆ ಈಶ್ವರಪ್ಪ ಕಾರಣ ಎಂದು ಬರೆದಿದ್ದು ಈ ಹಿನ್ನೆಲೆ ಅವರನ್ನು ಸಚಿವ ಸಂಪಯಟದಿಂದ ವಜಾ ಮಾಡುವ ಜೊತೆಗೆ ಬಂಧಿಸಬೇಕು ಎಂದು ಆಗ್ರಹಿಸಿದರು.

ರಾಜ್ಯ ಸರ್ಕಾರ ಶೇ.40 ರಷ್ಟು ಕಮಿಷನ್ ಪಡೆಯುತ್ತಿದೆ ಎಂದು ಆರೋಪಿಸಿ ಗುತ್ತಿಗೆದಾರರ ಸಂಘ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದರೂ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸದಿರುವುದೇ ಈ ಅನಾಹುತಕ್ಕೆ ಕಾರಣ ಎಂದು ದೂರಿದರು.ಜಿಲ್ಲೆಯ ಭವಿಷ್ಯದ ಬಗ್ಗೆ ಚಿಂತನೆ ಮಾಡುತ್ತಿರುವ ರಾಜಕೀಯ ಪಕ್ಷಗಳು ಹಾಗೂ ವಿವಿಧ ಸಂಘಟನೆಗಳು ಹೋರಾಟ ಮಾಡುತ್ತಿದ್ದು, ಈ ಹೋರಾಟ ಇಲ್ಲಿಗೆ ಸೀಮಿತವಾಗಿರುವುದಿಲ್ಲ ಸಚಿವ ಈಶ್ವರಪ್ಪ ರವರನ್ನು ಬಂಧಿಸುವವರೆಗೂ ಹೋರಾಟ ಮಾಡಲಾಗುವುದು ಎಂದು ಹೇಳಿದರು.

ಸಿಪಿಐ ಮುಖಂಡ ಹೆಚ್.ಎಂ.ರೇಣುಕರಾಧ್ಯ ಮಾತನಾಡಿ, ಆತ್ಮಹತ್ಯೆ ಮಾಡಿಕೊಂಡಿರುವ ಸಂತೋಷ್ ಹಿಂದೂ ಯುವಕನಾಗಿದ್ದು, ಹಿಂದೂಗಳ ಬಗ್ಗೆ ತುಂಬಾ ಕಾಳಜಿ ಇರುವ ಬಿಜೆಪಿ ನಾಯಕರಿಗೆ ಈಗಲಾದರೂ ಅರಿವು ಆಗುತ್ತದೆಯೇ ಎಂದು ಕಾದು ನೋಡಬೇಕಾಗಿದೆ. ಬಿಜೆಪಿಯ ಆಡಳಿತ ಇರುವ ರಾಜ್ಯದಲ್ಲಿ ನ್ಯಾಯ ಸಿಗದೇ ಇರುವುದರಿಂದ ಸಂತೋಷ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದರು.ರಾಜ್ಯದ ಬಿಜೆಪಿ ಸರ್ಕಾರಕ್ಕೆ ನೈತಿಕತೆ ಇದ್ದರೆ ಸಚಿವ ಈಶ್ವರಪ್ಪ ಅವರನ್ನು ಸಚಿವ ಸಂಪುಟದಿಂದ ವಜಾ ಮಾಡಬೇಕು ಅವರ ಮೇಲೆ ಕಠಿಣ ಕ್ರಮ ಕೈಗೊಳ್ಳುವ ಮೂಲಕ ಕೊಲೆ ಪ್ರಕರಣ ದಾಖಲಿಸಿ ಜೈಲಿಗೆ ಕಳಿಸುವ ಕೆಲಸವನ್ನು ಬಿಜೆಪಿ ಮಾಡುವಂತೆ ಒತ್ತಾಯಿಸಿದರು.

ರಾಜ್ಯದಲ್ಲಿ ಸಾಮಾಜಿಕ ಅಸ್ಥಿರತೆ ಉಂಟುಮಾಡುವ ಸರ್ಕಾರ ಆಡಳಿತ ನಡೆಸುತ್ತಿದ್ದು, ಬಿಜೆಪಿ ಸರ್ಕಾರದಿಂದ ಈ ರಾಜ್ಯದ ಜನರು ಸುರಕ್ಷಿತವಾಗಿ ಇಲ್ಲದೇ ಭಯಭೀತರಾಗಿ ಜೀವನ ನಡೆಸುವಂತ ಸ್ಥಿತಿ ನಿರ್ಮಾಣವಾಗಿದೆ. ಒಂದು ಕಡೆ ಭ್ರಷ್ಟಾಚಾರ ಮತ್ತು ಸಾಮಾರಸ್ಯ ಹಾಳು ಮಾಡುವ ದಿಕ್ಕಿನಲ್ಲಿ ರಾಜ್ಯ ಬಿಜೆಪಿ ಸಾಗುತ್ತಿದೆ ಎಂದರು.ಸಿಪಿಐ ಮುಖಂಡ ಬಿ.ಅಮ್ಜದ್ ಮಾತನಾಡಿ, ರಾಜ್ಯ ಬಿಜೆಪಿ ಸರ್ಕಾರ ಬ್ರಹ್ಮಾಂಡ ಭ್ರಷ್ಟಾಚಾರದಲ್ಲಿ ಮುಳುಗಿದ್ದು, ದೇಶದಲ್ಲಿ ಭೀತಿಯನ್ನು ಸೃಷ್ಟಿಮಾಡಿ ಸಾಮಾಜಿಕ ಅರಾಜಕತೆಯನ್ನು ಸೃಷ್ಟಿ ಮಾಡುವ ದಿಕ್ಕನಲ್ಲಿ ಇಂದು ಸಾಗುತ್ತಿದೆ. ಕೂಡಲೇ ಪೊಲೀಸ್ ಇಲಾಖೆ ಹಾಗೂ ರಾಜ್ಯ ಸರ್ಕಾರ 302 ಅಡಿ ಪ್ರಕರಣದಲ್ಲಿ ಈಶ್ವರಪ್ಪರವನ್ನು ಬಂಧಿಸಬೇಕು ಎಂದು ಹೇಳಿದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!