May 20, 2024

MALNAD TV

HEART OF COFFEE CITY

ಸರ್ಕಾರಿ ಶಾಲೆಗಳಿಗೆ ಮೂಲಭೂತ ಸೌಲಭ್ಯ ಕಲ್ಪಿಸಿ ಹಂತ ಹಂತವಾಗಿ ಅಭಿವೃದ್ಧಿ

1 min read

 

ಚಿಕ್ಕಮಗಳೂರು-ಖಾಸಗಿ ಶಾಲೆಗಳಂತೆ ಸರ್ಕಾರಿ ಶಾಲೆಗಳ ಮೇಲೂ ವಿಶ್ವಾಸ ಮೂಡಿಸುವಲ್ಲಿ ಶಾಲೆಗಳ ಗುಣಮಟ್ಟ ಹೆಚ್ಚಿಸಿ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿ ಹಂತ ಹಂತವಾಗಿ ಅಭಿವೃದ್ಧಿಪಡಿಸಲು ಶ್ರಮಿಸಲಾಗುವುದು ಎಂದು ಶಾಸಕ ಸಿ.ಟಿ.ರವಿ ಹೇಳಿದರು.ನಗರದ ಬಸವನಹಳ್ಳಿ ಶಾಲೆಯಲ್ಲಿ ಗೋಡೆ ಬಣ್ಣ ಹಾಗೂ ಚಿತ್ತಾರ ಬಿಡಿಸುವ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ನಗರಸಭೆ ಬಜೆಟ್‍ನಲ್ಲಿ ಈ ಬಾರಿ ಸರ್ಕಾರಿ ಶಾಲೆಗಳ ಸಮಗ್ರ ಅಭಿವೃದ್ಧಿ ಅನುದಾನ ಮೀಸಲಿರಿಸಲಾಗಿದೆ. ಖಾಸಗಿ ಶಾಲೆಗಳಂತೆ ಜನತೆ ಸರ್ಕಾರಿ ಶಾಲೆಗಳ ಮೇಲೂ ವಿಶ್ವಾಸ ಬರುವಂತೆ ಮಾಡಲು ಸರ್ಕಾರಿ ಶಾಲೆಗಳಲ್ಲಿ ಶೌಚಾಲಯ, ಕುಡಿಯುವ ನೀರು, ಸೇರಿದಂತೆ ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ನೀಡಿ ಮಕ್ಕಳನ್ನು ಆಕರ್ಷಿಸಲಾಗುವುದು ಎಂದು ತಿಳಿಸಿದರು.

ಹಳ್ಳಿಗಳಲ್ಲಿ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಸಂಖ್ಯೆ ಕಡಿಮೆಯಾಗುತ್ತಿದೆ. ಆ ಕಾರಣ ಬಹುತೇಕ ಕಟ್ಟಡಗಳು ಹಾಳುಬಿದ್ದಿವೆ, ಇದನ್ನು ಮನಗಂಡು ಪ್ರತಿ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಒಂದು ಶಾಲೆಯನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಿ ಗುಣಮಟ್ಟದ ಶಿಕ್ಷಣ, ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿ ದಾಖಲಾತಿ ಸಂಖ್ಯೆಯನ್ನು ಹೆಚ್ಚಿಸುವಂತೆ ಸಲಹೆ ನೀಡಿದರು.

ನಗರಸಭೆ ಅಧ್ಯಕ್ಷ ವರಸಿದ್ದಿ ವೇಣುಗೋಪಾಲ್ ಮಾತನಾಡಿ ನಗರಸಭಾ ವ್ಯಾಪ್ತಿಯಲ್ಲಿನ ಸರ್ಕಾರಿ ಶಾಲೆಗಳಿಗೆ ಮೂಲಭೂತ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಅನುದಾನ ಮೀಸಲಿಡಲಾಗಿದೆ, ಹೊಸ ಆಡಳಿತ ಮಂಡಳಿ ಬಂದ ಬಳಿಕ ನಗರದಲ್ಲಿ ಅಭಿವೃದ್ಧಿ ಕಾಮಗಾರಿಗಳು ನಿರಂತರವಾಗಿ ಸಾಗುತ್ತಿದ್ದು. 17 ಸಾವಿರಕ್ಕೂ ಹೆಚ್ಚು ಮನೆಗೆ ಯುಜಿಡಿ ಸಂಪರ್ಕ ಕಲ್ಪಿಸುವ ಕಾರ್ಯ ನಡೆಯುತ್ತಿದೆ. ಒಳಚರಂಡಿ ಕಾಮಾಗಾರಿ ಮಗಿದ ಬಳಿಕ ಡಾಂಬರೀಕರಣಕ್ಕೆ 10 ಕೋಟಿ ರೂ ಮೀಸಲಿಡಲಾಗಿದೆ. ನಿರ್ಮಲ ಯೋಜನೆ ಅಡಿಯಲ್ಲಿ ಅಗತ್ಯ ಅನುದಾನ ಮೀಸಲಿಟ್ಟು ಸರ್ಕಾರಿ ಶಾಲೆ, ಕಛೇರಿ ಅಭಿವೃದ್ಧಿಗೆ ಚಿಂತನೆ ನಡೆಸಲಾಗಿದೆ ಎಂದು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ನಗರಸಭೆ ಸದಸ್ಯ ಮಧುಕುಮಾರ್‍ರಾಜ್ ಆರಸ್, ಮಣಿ, ಆಯುಕ್ತರಾದ ಬಸವರಾಜ್, ಆಶ್ರಯ ಸಮಿತಿ ಅಧ್ಯಕ್ಷ ನಾರಾಯಣಸ್ವಾಮಿ, ಸದಸ್ಯ ರಾಜೇಶ್, ಬಿಜೆಪಿ ಮುಖಂಡ ರಾಜಪ್ಪ, ಶ್ಯಾಮ್, ವಿಜಯ್, ಸಂತೋಷ್ ಕೋಟ್ಯಾನ್ ಇದ್ದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!