May 16, 2024

MALNAD TV

HEART OF COFFEE CITY

ಗ್ರಾಮೀಣ ಮಟ್ಟಕ್ಕೆ ಕಸಾಪ ಚಟುವಟಿಕೆ ತಲುಪಿಸುವುದೇ ಗುರಿ_ಸೂರಿ ಶ್ರೀನಿವಾಸ್

1 min read

 

ಚಿಕ್ಕಮಗಳೂರು: ಮುಂದಿನ ಎರಡು ವರ್ಷದೊಳಗೆ ಜಿಲ್ಲೆಯಲ್ಲಿ ರಾಜ್ಯಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲಾಗುವುದು ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸೂರಿ ಶ್ರೀನಿವಾಸ್ ತಿಳಿಸಿದರು.ನಗರದ ನಗರದ ಕನ್ನಡ ಭವನದಲ್ಲಿ ಗುರುವಾರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಘಟಕದ ವತಿಯಿಂದ ಏರ್ಪಡಿಸಿದ್ದ ಸೇವಾ ದೀಕ್ಷ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಈಗಾಗಲೇ ಜಿಲ್ಲೆಯಲ್ಲಿ ರಾಜ್ಯದಲ್ಲಿ ಮೊದಲ ಬಾರಿಗೆ ಮಹಿಳಾ ಸಮ್ಮೇಳನ ಮಾಡಿ ಯಶಸ್ವಿಯಾಗುವದರ ಜೊತೆಗೆ ಅತ್ಯಂತ ಅರ್ಥಪೂರ್ಣವಾಗಿ ಜಿಲ್ಲಾ ಕನ್ನಡ ಸಾಹಿತ್ಯವನ್ನು ನೆರವೇರಿಸಿದ್ದೇವೆ ಎಂದು ತಿಳಿಸಿದರು.ಅಧ್ಯಕ್ಷನಾದ ನಾನು ಆಮೆ ವೇಗದಲ್ಲಿ ಸಾಗಿದರೆ ಎಲ್ಲಾ ತಾಲೂಕು ಅಧ್ಯಕ್ಷರು ಜಿಂಕೆಯ ವೇಗದಲ್ಲಿ ಸಾಗಬೇಕು. ಈ ಮೂಲಕ ಕನ್ನಡ ಸಾಹಿತ್ಯ ಪರಿಷತ್ ಚಟುವಟಿಕೆಗಳನ್ನು ಗ್ರಾಮೀಣ ಮಟ್ಟಕ್ಕೆ ತಗೆದುಕೊಂಡು ಹೋಗಲು ಸಾಧ್ಯ ಎಂದರು.

ಸಂಸ್ಕøತಿ ಚಿಂತಕ ಡಾ|| ಜೆ.ಪಿ.ಕೃಷ್ಣೇಗೌಡ ಮಾತನಾಡಿ, ಅಂಬೇಡ್ಕರ್ ಅವರ ವಿಚಾರಧಾರೆಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಜೈನ ದರ್ಮ ಸ್ಥಾಪಕ ಭಗವಾನ್ ಮಹಾವೀರರು ಅಹಿಂಸಾ, ಸಮಾನತೆ ಬಗೆಗ ಹೋರಾಟ ಮಾಡಿದ್ದಾರೆ. ಅಂಬೇಡ್ಕರ್ ಮತ್ತು ಭಗವಾನ್ ಮಹಾವೀರರ ವಿಚಾರಧಾರೆಗಳು ಎಲ್ಲರಿಗೂ ಸ್ಪೂರ್ತಿದಾಯಕ ಎಂದರು.

ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಘಟಕದ ನಿಕಟಪೂರ್ವ ಅಧ್ಯಕ್ಷ ಹಿರೇಮಗಳೂರು ಪುಟ್ಟಸ್ವಾಮಿ ಮಾತನಾಡಿ, ನೂತನವಾಗಿ ಸೇವಾಧೀಕ್ಷೆ ಪಡೆದ ಎಲ್ಲರಿಗೆ ಶುಭಾಶಯ ಕೋರುವ ಮೂಲಕ ಮುಮದಿನ ದಿನಗಳಲ್ಲಿ ಉತ್ತಮವಾದ ಕೆಲಸ ಮಾಡುವಂತೆ ಸಲಹೆ ನೀಡಿದರು. ಕನ್ನಡ ಸಾಹಿತ್ಯ ಪರಿಷತ್ ಅನ್ನು ಅತ್ಯಂತ ಯಶಸ್ವಿಯಾಗಿ ಚಂದ್ರಯ್ಯನಾಡ್ಡು ಹಾಗೂ ಅಜ್ಜಂಪುರ ಸೂರಿ ಅವರು ಕಟ್ಟಿ ಬೆಳೆಸಿದ್ದಾರೆ. ಕಸಾಪವನ್ನು ಹಳ್ಳಿ ಹಳ್ಳಿಗಳಿಗೆ ತಲುಪಿಸಿ ಕನ್ನಡ ಸಾಹಿತ್ಯ ಪರಿಷತ್ ಚಟುವಟಿಕೆಗಳನ್ನು ಗ್ರಾಮೀಣ ಪ್ರದೇಶಗಳಿಗೆ ಮುಟ್ಟಿಸುವಲ್ಲಿ ಅವರು ಯಶಸ್ವಿಯಾಗಿದ್ದರು ಎಂದು ತಿಳಿಸಿದರು.

ಜಿಲ್ಲಾ ಕಸಾಪ ಪ್ರಧಾನ ಕಾರ್ಯದರ್ಶಿ ಜೆ.ಪಿ ಪವನ್ ಮಾತನಾಡಿ ಮಕ್ಕಳಲ್ಲಿ ಸಾಹಿತ್ಯ ಅಭಿರುಚಿಯನ್ನು ಬೆಳೆಸಬೇಕು. ಅಧ್ಯಕ್ಷರ ಆಶಯದಂತೆ ಪ್ರತಿ ಗ್ರಾಮಮ ಮಟ್ಟದ ಸಾಹಿತ್ಯ ಪರಿಷತ್ ಅನ್ನು ಕೊಂಡೊಯ್ಯಬೇಕು ಗುರಿಯನ್ನು ಇಟ್ಟುಕೊಂಡಿದ್ದಾರೆ ಅದಕ್ಕೆ ಪೂರಕವಾಗಿ ನಾವೆಲ್ಲ ಕಾರ್ಯ ನಿರ್ವಹಿಸೋಣ ಎಂದರು.ಸಂಸ್ಕøತಿ ಚಿಂತಕ ಎಂ.ಎಲ್ ಮೂರ್ತಿ ಮಾತನಾಡಿ, ಕನ್ನಡ ಸಾಹಿತ್ಯವನ್ನು ಉಳಿಸುವ ನಿಟ್ಟಿನಲ್ಲಿ ನೂತನ ಅಧ್ಯಕ್ಷರಿಗೆ ಎಲ್ಲರೂ ಉತ್ತಮ ಸಹಕಾರ ನೀಡುವ ಮೂಲಕ ಜಿಲ್ಲಾ ಘಟಕಕ್ಕೆ ಹೆಚ್ಚು ಶಕ್ತಿ ತುಂಬುವ ಮೂಲಕ ಕಸಾಪವನ್ನು ಜಿಲ್ಲೆಯ ಪ್ರತಿ ಹಳ್ಳಿಗಳಿಗೆ ತಗೆದುಕೊಂಡುವ ಕೆಲಸವನ್ನು ಮಾಡಿ ಎಂದು ಸಲಹೆ ನೀಡಿದರು.

ಅಂಬೇಡ್ಕರ್ ಅವರ ಸರ್ವರಿಗೂ ಸಮಪಾಲು, ಸಮಬಾಳು ಈ ದೇಶದಲ್ಲಿ ಶೇ.20 ರಷ್ಟು ಮಾತ್ರ ಅನುಷ್ಟಾನಕ್ಕೆ ಬಂದಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಅಂಬೇಡ್ಕರ್ ಚಿಂತನೆಗಳ ಕುರಿತು ಈಗ ದೈಹಿಕ ಅನುಕರಣೆ ಹೆಚ್ಚಾಗುತ್ತಿದೆ. ಇದರ ಬದಲಾಗಿ ಅವರ ಚಿಂತನೆಗಳ ವೈಚಾರಿಕ ಅನುಕರಣೆ ಹೆಚ್ಚಾಗಬೇಕು ಎಂದರು ತಿಳಿಸಿದರು.ಕಸಾಪ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಸ್.ಎಸ್.ವೆಂಕಟೇಶ್ ಮಾತನಾಡಿ ಅಂದಿನ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಕಸಾಪವನ್ನು ಸ್ಥಾಪನೆ ಮಾಡಿದ್ದು ಇದರಲ್ಲಿ ಅನೇಕರು ದಿಗ್ಗಜರು ಬಂದು ಕಾರ್ಯನಿರ್ವಹಿಸಿದ್ದಾರೆ ಎಂದರು.

ಇದೇ ವೇಳೆ ನೂತನ ಚಿಕ್ಕಮಗಳೂರು ಜನ್ನಡ ಸಾಹಿತ್ಯ ಪರಿಷತ್ತಿನ ಪದಾದಿಕಾರಿಗಳಿಗೆ ಸೇವಾದೀಕ್ಷೆ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಶಾಸಕ ಸಿ.ಟಿ.ರವಿ, ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಬೋಜೇಗೌಡ, ಕಸಾಪ ತಾಲ್ಲೂಕು ಅಧ್ಯಕ್ಷ ಬಿಸಲೇಹಳ್ಳಿ ಸೋಮಶೇಖರ್, ಜಿ.ಪಿ.ಪವನ್, ಕೋಶಾಧ್ಯಕ್ಷ ಬಿ.ಪ್ರಕಾಶ್, ಮತ್ತಿತರರು ಉಪಸ್ಥಿತರಿದ್ದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!