May 10, 2024

MALNAD TV

HEART OF COFFEE CITY

ಮರಕಡಿತಲೆ ಸಮಗ್ರ ತನಿಖೆಗೆ ಆಗ್ರಹ

1 min read

ಚಿಕ್ಕಮಗಳೂರು: ನಗರದ ರತ್ನಗಿರಿ ಬೋರೆಯಲ್ಲಿರುವ ನಗರಸಭೆಯ ನೀರು ಶುದ್ದೀಕರಣ ಘಟಕದ ಆವರಣದಲ್ಲಿದ್ದ ಮರಗಳನ್ನು ಅಕ್ರಮವಾಗಿ ಕಡಿದಿರುವವರ ವಿರುದ್ದ ಕ್ರಮ ಕೈಗೊಳ್ಳುವಂತೆ ಕರ್ನಾಟಕ ಮಾಹಿತಿ ಹಕ್ಕು ಕಾರ್ಯಕರ್ತರ ಸಂಘಟನೆ ಮತ್ತು ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾಡಳಿತವನ್ನು ಒತ್ತಾಯಿದರು.ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಅವರಿಗೆ ಸಂಘಟನೆ ಮುಖಂಡರು ಮನವಿ ಸಲ್ಲಿಸಿ, ಕಳೆದ 8 ತಿಂಗಳ ಹಿಂದೆ ನೀರು ಶುದ್ದೀಕರಣ ಘಟಕದ ಆವರಣದಲ್ಲಿದ್ದ ಹಲವಾರು 50-60 ವರ್ಷಗಳಷ್ಟು ಹಳೆಯದಾದ ಮರಗಳನ್ನು ಕಡಿಯಲಾಗಿತ್ತು. ಆ ಮರಗಳು ನಂತರ ಏನಾದವೆಂಬುದು ಯಾರಿಗೂ ಗೊತ್ತಿಲ್ಲ, ಆ ಮರಗಳ ಬುಡಗಳು ಮಾತ್ರ ಆವರಣದಲ್ಲೇ ಇವೆ ಎಂದು ಆರೋಪಿಸಿದರು.

ಕಳೆದ ಕೆಲವು ದಿನಗಳ ಹಿಂದೆ ಮತ್ತೆ ಶುದ್ದೀಕರಣ ಘಟಕದ ಆವರಣದಲ್ಲಿದ್ದ ಹಳೆಯ ಅನೇಕ ಮರಗಳನ್ನು ಕಡಿಯಲಾಗಿದೆ, ಎರಡೂ ಬಾರಿಯೂ ಮರ ಕಡಿತಲೆಗೆ ಅರಣ್ಯ ಇಲಾಖೆಯಿಂದ ಯಾವುದೇ ಅನುಮತಿ ಪಡೆದಿಲ್ಲ, ಅರಣ್ಯ ಇಲಾಖೆಯ ಗಮನಕ್ಕೆ ತಾರದೇ ಮರಗಳನ್ನು ಕಡಿಯಲಾಗಿದೆ ಎಂದು ದೂರಿದರು.
ಯಾವುದೇ ಮರಗಳನ್ನು ಕಡಿಯಲು ಅರಣ್ಯ ಇಲಾಖೆಗೆ ಮಾತ್ರ ಅಧಿಕಾರವಿದೆ, ಅರಣ್ಯ ಇಲಾಖೆಗೆ ತಿಳಿಸದೇ ಅವರಿಂದ ಯಾವುದೇ ಅನುಮತಿ ಪಡೆಯದೇ ಮರಗಳನ್ನು ಕಡಿದಿರುವುದು ಅಪರಾಧವಾಗಿದೆ. ಹಾಗಾಗಿ ಈ ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಬೇಕೆಂದು ಆಗ್ರಹಿಸಿದರು.

ಕರ್ನಾಟಕ ಮಾಹಿತಿ ಹಕ್ಕು ಕಾರ್ಯಕರ್ತರ ಸಂಘಟನೆಯ ರಾಜ್ಯಾಧ್ಯಕ್ಷ ಸೋಮಾನಾಯಕ್, ರಾಜ್ಯ ಜಂಟಿ ಕಾರ್ಯದರ್ಶಿ ಲಾರೆನ್ಸ್ ಜೇಮ್ಸ್, ಪದಾಧಿಕಾರಿಗಳಾದ ಮುಶೀರ್ ಅಹಮದ್, ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಮಿತಿ ಸದಸ್ಯ ಕೆ.ಸಿ.ವಸಂತಕುಮಾರ್, ಜಿಲ್ಲಾ ಸಂಘಟನಾ ಸಂಚಾಲಕ ಇಲಿಯಾಜ್ ಅಹಮದ್, ಖಜಾಂಚಿ ವಿ.ಧರ್ಮೇಶ್, ಎಂ.ಸಿ.ಜಯರಾಮಯ್ಯ ಇದ್ದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!