May 19, 2024

MALNAD TV

HEART OF COFFEE CITY

ಮೈಲಿಮನೆ ಗ್ರಾಮದ ದೇವಾಲಯ ನಿರ್ಮಾಣಕ್ಕೆ ಎಂ.ಪಿ.ಕುಮಾರಸ್ವಾಮಿ ಗುದ್ದಲಿಪೂಜೆ

1 min read

ಚಿಕ್ಕಮಗಳೂರು- ತಾಲ್ಲೂಕಿನ ಮೂಡಿಗೆರೆ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಮೈಲಿಮನೆ ಗ್ರಾಮದ ಸಾರಮಣಿ ದೇವಾಲಯ ಕಟ್ಟಡ ನಿರ್ಮಾಣಕ್ಕೆ ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ ಶುಕ್ರವಾರ ಭೂಮಿಪೂಜೆ ನೆರವೇರಿಸಿದರು.ಬಳಿಕ ಮಾತನಾಡಿದ ಅವರು ಚುನಾವಣೆ ಸಂದರ್ಭದಲ್ಲಿ ಭರವಸೆ ನೀಡಿದಂತೆ ಮೈಲಿಮನೆ ಗ್ರಾಮಪಂಚಾಯಿತಿಯ ಅಭಿವೃದ್ಧಿಗೆ ಸಾಕಷ್ಟು ಅನುದಾನ ಬಿಡುಗಡೆಗೊಳಿಸಿ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಇದೀಗ ಇಲ್ಲಿನ ದೇವಸ್ಥಾನ ಶಿಥಿಲಾವಸ್ಥೆಯಲ್ಲಿದ್ದು ನೂತನ ಕಟ್ಟಡ ನಿರ್ಮಾಣಕ್ಕೆ ಗ್ರಾಮಸ್ಥರು ಬೇಡಿಕೆ ಇಟ್ಟಿದ್ದರು ಅದಕ್ಕೆ ಸ್ಪಂದಿಸಿ ಸದ್ಯಕ್ಕೆ 3 ಲಕ್ಷ ರೂ ಅನುದಾನ ಬಿಡುಗಡೆಗೊಳಿಸಲಾಗಿದೆ. ದೇವಾಲಯ ಕಾಮಗಾರಿ ಪೂರ್ಣಗೊಳ್ಳಲು ಕನಿಷ್ಟ 6 ರಿಂದ 7 ಲಕ್ಷ ರೂ ಅನುದಾನ ಬೇಕಾಗಬಹುದು ಈ ಬಗ್ಗೆ ಮುಖ್ಯಮಂತ್ರಿಗಳಿಗೆ ಅನುದಾನದ ಬೇಡಿಕೆ ಸಲ್ಲಿಸಿ ದೇವಾಲಯ ಕಾಮಗಾರಿ ಪೂರ್ಣಗೊಳ್ಳುವವರೆಗೂ ಜತೆಯಾಗಿ ನಿಂತು ಸಹಕರಿಸುವುದಾಗಿ ಭರವಸೆ ನೀಡಿದರು

ಕಳೆದ ಎರಡ್ಮೂರು ವರ್ಷಗಳಿಂದ ಅತಿವೃಷ್ಟಿ, ಕೋವಿಡ್ ಕಾರಣದಿಂದಾಗಿ ಅನುದಾನ ಬಿಡುಗಡೆಗೊಳ್ಳದೇ ಅಭಿವೃದ್ಧಿ ಕಾರ್ಯಗಳು ಕುಂಠಿತವಾಗಿದ್ದವು, ಇದೀಗ ಅಭಿವೃದ್ಧಿಗೆ ವೇಗ ಸಿಕ್ಕಿದೆ, ಎಲ್ಲಾ ಗ್ರಾ.ಪಂ ವ್ಯಾಪ್ತಿಯಲ್ಲಿ ರಸ್ತೆ, ಕುಡಿಯುವ ನೀರು ಒಳಗೊಂಡಂತೆ ಮೂಲಸೌಕರ್ಯಕ್ಕೆ ಆದ್ಯತೆ ನೀಡಲಾಗಿದೆ. ವಿಧಾನ ಸೌಧದ ಎದುರು ಏಕಾಂಗಿಯಾಗಿ ಪ್ರತಿಭಟನೆ ನಡೆಸಿ ಮೂಡಿಗೆರೆ ವಿಧಾನ ಸಭಾ ಕ್ಷೇತ್ರಕ್ಕೆ ರೂ 39 ಕೋಟಿ ಅತಿವೃಷ್ಟಿ ಪರಿಹಾರವನ್ನು ಬಿಡುಗಡೆಗೊಳಿಸಲಾಗಿದೆ. ಈ ಭಾಗದಲ್ಲಿ ಸಣ್ಣ ಹಿಡುವಳಿದಾರರ ಹಕ್ಕುಪತ್ರ ಸಮಸ್ಯೆ, ಹಾಗೂ ಒತ್ತುವರಿ ಸಕ್ರಮಗೊಳಿಸುವ ಕೆಲಸಗಳಾಗಬೇಕಿದೆ ಎಂದರು.ಮೈಲಿಮನೆ ಪೂರ್ಣೇಶ್ ಮಾತನಾಡಿ ಕ್ಷೇತ್ರದ ಶಾಸಕರು ಅಭಿವೃದ್ಧಿ ಆದ್ಯತೆ ನೀಡಿ ಮೈಲಿಮನೆ ಗ್ರಾಮಪಂಚಾಯಿತಿಗೆ ವಿವಿಧ ಯೋಜನೆಗಳ ಅಡಿಯಲ್ಲಿ 15 ಕೋಟಿಗೂ ಹೆಚ್ಚು ಅನುದಾನ ಬಿಡುಗಡೆಗೊಳಿಸಿ ಅಭಿವೃದ್ಧಿ ಕಾರ್ಯ ನಡೆಸಿದ್ದಾರೆ, ರಸ್ತೆ, ಕುಡಿಯುವ ನೀರು, ಮನೆ ನಿರ್ಮಾಣ, ಸಮುದಾಯ ಭವನ ಸೇರಿದಂತೆ ಮತ್ತಿತರ ಮೂಲಭೂತ ಸೌಕರ್ಯ ಒದಗಿಸಲು ಶ್ರಮಿಸಿದ್ದಾರೆ ಎಂದರು.

ಮೈಲಿಮನೆ ಗ್ರಾಮದ ದೇವಾಲಯ ನಿರ್ಮಾಣಕ್ಕೆ ರೂ 3 ಲಕ್ಷ ಗಡಬನಹಳ್ಳಿ, ಇಡುಹೊಳೆ, ಗಾಳಿಪೇಟೆ, ಜೋಳದಾಳ್ ಸೇರಿದಂತೆ ವಿವಿದೆಡೆ ಅಭಿವೃದ್ಧಿ ಕಾರ್ಯಕ್ಕೆ ಅನುದಾನ ಬಿಡುಗಡೆಗೊಳಿಸಿದ್ದಾರೆ. ಇನ್ನು ಈ ಭಾಗದಲ್ಲಿ ವಸತಿ ರಹಿತ ಸಂತ್ರಸ್ಥರಿದ್ದು ಮನೆಗಳ ನಿರ್ಮಾಣಕ್ಕೆ ಶಾಸಕರು ಮುಂದಾಗಬೇಕು ಎಂದು ಒತ್ತಾಯಿಸಿದರು. ವಿಪಕ್ಷಗಳು ಟೀಕೆ ಮಾಡುವುದು ಸಾಮಾನ್ಯ ಆದರೆ ಮೈಲಿಮನೆ ಗ್ರಾ,ಪಂ ವ್ಯಾಪ್ತಿಯಲ್ಲಿ ಟೀಕೆಗೆ ಅವಕಾಶ ನೀಡದೆ ಅಭಿವೃದ್ಧಿ ಮಾಡಲಾಗಿದೆ ಎಂದು ಸಮರ್ಥಿಸಿಕೊಂಡರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!